ಕಲಬುರಗಿ | ಹೊಸ ತಂತ್ರಾಂಶ ಅಭಿವೃದ್ಧಿಪಡಿಸಿದ ಬಳಿಕ ಪಿಂಚಣಿ ಸ್ಥಗಿತ; ಕಾರ್ಮಿಕರಿಂದ ಪ್ರತಿಭಟನೆ

Date:

Advertisements

ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯು ಹೊಸ ತಂತ್ರಾಂಶ ಅಭಿವೃದ್ಧಿಪಡಿಸಿದ ಬಳಿಕ ಪಿಂಚಣಿಯೂ ನಿಂತು ಹೋಗಿದೆ ಎಂದು ಆರೋಪಿಸಿ ಎಐಟಿಯುಸಿ ನೇತೃತ್ವದ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಕಾರ್ಯಕರ್ತರು ಕಲಬುರಗಿಯ ಕಾರ್ಮಿಕ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಹೊಸ ತಂತ್ರಾಂಶ ಅಭಿವೃದ್ಧಿಪಡಿಸಿದ ನಂತರ ಕಾರ್ಮಿಕರ ಕ್ಲೇಮು ಮತ್ತು ರಿನೀವಲ್, ಹೊಸ ಅರ್ಜಿಗಳನ್ನು ಸುಲಭವಾಗಿ ತೆಗೆದುಕೊಳ್ಳುತ್ತಿಲ್ಲ. ಕಟ್ಟಡ ಕಾರ್ಮಿಕರಿಗೆ 60 ವರ್ಷವಾದ ನಂತರ ಯಾವಾಗಲಾದರೂ ಪಿಂಚಣಿ ಅರ್ಜಿ ಹಾಕಲು ಅವಕಾಶ ನೀಡಬೇಕು. ಈಗ ಇರುವ ಕಾಲಮಿತಿಯನ್ನು ಕೈಬಿಡಬೇಕು. ಸರಳವಾಗಿ ಅರ್ಜಿಯನ್ನು ತಂತ್ರಾಂಶದಲ್ಲಿ ತೆಗೆದುಕೊಳ್ಳುವ ವ್ಯವಸ್ಥೆ ಜಾರಿ ಮಾಡಬೇಕು. ಕಾರ್ಮಿಕರ ಮಕ್ಕಳ ಹಿಂದಿನ ಸ್ಕಾಲರ್‌ಶಿಪ್ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು. ಖಾಸಗಿ ಆಸ್ಪತ್ರೆಯಿಂದ ನಡೆಸುತ್ತಿರುವ ಆರೋಗ್ಯ ತಪಾಸಣಾ ಶಿಬಿರವನ್ನು ನಿಲ್ಲಿಸಿ ಕಾರ್ಮಿಕರಿಗೆ ನೆರವಾಗುವಂತಹ ಇಎಸ್‌ಐ ಜಾರಿ ಮಾಡಬೇಕು ಎಂದು ಕಾರ್ಮಿಕರು ಒತ್ತಾಯಿಸಿದರು.

ಹೊಸ ತಂತ್ರಾಂಶದಲ್ಲಿ ಅರ್ಜಿ ಹಾಕುವ ಸಮಯದಲ್ಲಿ ಕೇಳುತ್ತಿರುವ ಕಟ್ಟಡ ಕಾರ್ಮಿಕರು ಒದಗಿಸಲಾಗದ, ದಾಖಲಾತಿಗಳನ್ನು ಕೈಬಿಟ್ಟು ಕಾರ್ಮಿಕರ ಬಳಿ ಇರುವ ದಾಖಲಾತಿಗಳನ್ನು ತೆಗೆದುಕೊಂಡು ಅರ್ಜಿಗೆ ಅನುಮೋದನೆ ನೀಡಬೇಕು ಎಂದು ಒತ್ತಾಯಿಸಿದರು.

Advertisements

ಒಂದರಿಂದ ಎರಡು ವರ್ಷಗಳ ಹಿಂದಿನಿಂದ ಕ್ಲೇಮು ಅರ್ಜಿಗಳು ಅನುಮೋದನೆಯಾಗಿದ್ದರೂ ಈವರೆಗೆ ಕಾರ್ಮಿಕರಿಗೆ ಹಣ ಪಾವತಿಯಾಗಿಲ್ಲ. ದಾಖಲೆಗಳ ಕೊರತೆಯ ನೆಪವೊಡ್ಡಿ ಎರಡು ವರ್ಷಗಳಿಂದ ತಡೆ ಹಿಡಿದಿದ್ದಾರೆ. ಇದಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಪ್ರಭುದೇವ ಯಳಸಂಗಿ, ಎಐಟಿಯುಸಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್. ಪತಕಿ, ಶಿವಲಿಂಗಮ್ಮ ಲೆಂಗಟಿಕರ್, ಜಿಲ್ಲಾ ಸಹ ಕಾರ್ಯದರ್ಶಿ ಕಲ್ಯಾಣಿ ತುಕ್ಕಾಣಿ, ಶರಣಮ್ಮ ಪೂಜಾರಿ, ಮಾನಪ್ಪ ಕಟ್ಟಿಮನಿ ಹಾಗೂ ಕಟ್ಟಡ ಕಾರ್ಮಿಕರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X