ಕಲಬುರಗಿ | 4 ತಿಂಗಳಿಂದ ಪಿಂಚಣಿ ಸ್ಥಗಿತ: ತಕ್ಷಣ ಬಿಡುಗಡೆಗೆ ಎಐಎಂಎಸ್‌ಎಸ್ ಆಗ್ರಹ

Date:

ವಿಧವಾ, ವೃದ್ಧಾಪ್ಯ ಹಾಗೂ ಅಂಗವಿಕಲರ ಸಾಮಾಜಿಕ ಭದ್ರತಾ ಪಿಂಚಣಿ ಕಳೆದ ನಾಲ್ಕೈದು ತಿಂಗಳಿಂದ ಸ್ಥಗಿತಗೊಂಡಿರುವುದನ್ನು ಖಂಡಿಸಿ, ಕೂಡಲೇ ಬಾಕಿ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಕಲಬುರಗಿ ಜಿಲ್ಲಾ ಸಮಿತಿ ವತಿಯಿಂದ ಸೋಮವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

- Advertisement -

ಮನವಿ ಸಲ್ಲಿಸಿ ಮಾತನಾಡಿ ಮುಖಂಡರು, ‘ರಾಜ್ಯದಲ್ಲಿ ಕಲಬುರಗಿ ಸೇರಿದಂತೆ ಸುಮಾರು 18 ಲಕ್ಷ ಪಿಂಚಣಿ ಫಲಾನುಭವಿಗಳಿಗೆ ಕಳೆದ ನಾಲ್ಕೈದು ತಿಂಗಳಿಂದ ಪಿಂಚಣಿ ಹಣ ಜಮೆಯಾಗಿಲ್ಲ ಎಂದು ಆರೋಪಿಸಲಾಗಿದೆ. ವಿಧವೆಯರು, ವೃದ್ಧರು ಹಾಗೂ ಅಂಗವಿಕಲರು ಜೀವನ ನಿರ್ವಹಣೆಗಾಗಿ ಪಿಂಚಣಿ ಹಣವನ್ನೇ ಅವಲಂಬಿಸಿರುವುದರಿಂದ, ಅದರ ಸ್ಥಗಿತದಿಂದ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ’ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

‘ಬೆಲೆ ಏರಿಕೆಯ ಈ ಸಂದರ್ಭದಲ್ಲಿ ಸರ್ಕಾರ ನೀಡುತ್ತಿರುವ ಪಿಂಚಣಿ ಮೊತ್ತವೇ ಜೀವನ ನಿರ್ವಹಣೆಗೆ ಸಾಕಾಗದ ಪರಿಸ್ಥಿತಿ ಇದೆ. ಅದರಲ್ಲೂ ಹಲವು ವೃದ್ಧರು ಮತ್ತು ಅಂಗವಿಕಲರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, ಔಷಧೋಪಚಾರ ಹಾಗೂ ದಿನನಿತ್ಯದ ಖರ್ಚುಗಳನ್ನು ಭರಿಸಲು ಪಿಂಚಣಿ ಹಣ ಅತ್ಯಗತ್ಯವಾಗಿದೆ. ಇಂತಹ ಸಂದರ್ಭದಲ್ಲಿ ಪಿಂಚಣಿ ಪಾವತಿಯನ್ನು ವಿಳಂಬಗೊಳಿಸಿರುವುದು ಬಡವರ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿದೆ’ ಎಂದು ಆರೋಪಿಸಿದರು.

ಸರ್ಕಾರ ಯಾವುದೇ ವಿಳಂಬ ಮಾಡದೆ ಬಾಕಿ ಇರುವ ಪಿಂಚಣಿ ಮೊತ್ತವನ್ನು ತಕ್ಷಣ ಬಿಡುಗಡೆ ಮಾಡಿ, ಫಲಾನುಭವಿಗಳಿಗೆ ನಿಯಮಿತವಾಗಿ ಪಿಂಚಣಿ ವಿತರಿಸುವಂತೆ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಮಾಡಲಾಗಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಯುವತಿಗೆ ಲೈಂಗಿಕ ಕಿರುಕುಳ: ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಈ ಸಂದರ್ಭದಲ್ಲಿ ಎಐಎಂಎಸ್‌ಎಸ್ ಜಿಲ್ಲಾ ಅಧ್ಯಕ್ಷೆ ಗುಂಡಮ್ಮ ಮಡಿವಾಳ ಹಾಗೂ ಜಿಲ್ಲಾ ಕಾರ್ಯದರ್ಶಿ ಡಾ. ಸೀಮಾ ದೇಶಪಾಂಡೆ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಕಾಣೆಯಾದ ಮಕ್ಕಳ ಪತ್ತೆಗೆ ವಿಶೇಷ ಕಾರ್ಯಪಡೆ ಸಮಿತಿ ಸಭೆ

ನಗರ ಪೊಲೀಸ್ ಆಯುಕ್ತಾಲಯದ ಪೊಲೀಸ್ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ,...

ಕಲಬುರಗಿ | ಕುಡಿಯುವ ನೀರಿಗಾಗಿ ಖಾಲಿ ಕೊಡ ಹಿಡಿದು ಪಾಲಿಕೆ ಎದುರುಗಡೆ ಪ್ರತಿಭಟನೆ

ನಗರದ ವಾರ್ಡ್‌ ನಂ. 2ರ ಕೆ.ಕೆ. ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ...

ಯಾದಗಿರಿ | ಪಂಚಾಯಿತಿ ಚುನಾವಣೆಗಳಲ್ಲೂ ಪರಿಶಿಷ್ಟ ಜಾತಿಗಳಿಗೆ ರಾಜಕೀಯ ಒಳಮೀಸಲಾತಿ ಕಲ್ಪಿಸಲು ಆಗ್ರಹ

ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪರಿಶಿಷ್ಟ ಜಾತಿಗಳನ್ನು ಪ್ರವರ್ಗ-ಎ, ಪ್ರವರ್ಗ-ಬಿ...

ಕಲಬುರಗಿ | ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯಕ್ಕೆ ಆಗ್ರಹ

ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸುವುದು ಹಾಗೂ ಸರ್ಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ...