ಕಲಬುರಗಿ | ಅಕ್ರಮ ಸೌಳು ಗಣಿಗಾರಿಕೆ ವಿರುದ್ಧ ದೂರು ನೀಡಿದವರ ಮನೆಗೆ ನುಗ್ಗಿ ಬೆದರಿಕೆ : ಕಠಿಣ ಕ್ರಮಕ್ಕೆ ಆಗ್ರಹ

Date:

ಚಿಂಚೋಳಿ ತಾಲೂಕಿನ ಸುಲೇಪೇಟೆ ಹೋಬಳಿ ವ್ಯಾಪ್ತಿಯ ಯಾಕಾಪೂರ ಗ್ರಾಮದ ಸರ್ಕಾರಿ ಗೋಮಾಳ ಜಮೀನಿನಲ್ಲಿ ನಡೆಯುತ್ತಿರುವ ಅಕ್ರಮ ಸೌಳು ಗಣಿಗಾರಿಕೆ ವಿರುದ್ಧ ದೂರು ನೀಡಿದ ಬಳಿಕ ದೂರುದಾರರ ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ, ದೂರುದಾರರಿಗೆ ಪೊಲೀಸ್ ರಕ್ಷಣೆ ಒದಗಿಸಬೇಕು ಎಂದು ಭಾರತ ಮುಕ್ತಿ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾರುತಿ ಗಂಜಗೀರಿ ಒತ್ತಾಯಿಸಿದರು.

- Advertisement -

ನಗರದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಯಾಕಾಪೂರ ಗ್ರಾಮದ ಸರ್ವೇ ನಂ.74ರ 18 ಎಕರೆ ಹಾಗೂ ಸರ್ವೇ ನಂ.76ರ 15 ಎಕರೆ ಸೇರಿ ಒಟ್ಟು 33 ಎಕರೆ ಸರ್ಕಾರಿ ಗೋಮಾಳ ಜಮೀನಿನಲ್ಲಿ ಕಳೆದ ಒಂದು ವರ್ಷದಿಂದ ಪ್ರಭಾವಿಗಳು ಹಾಗೂ ತೆಲಂಗಾಣದ ಕೆಲವರು ಅಕ್ರಮವಾಗಿ ಸೌಳು ಮಣ್ಣು ಗಣಿಗಾರಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. ಇದರಿಂದ ಸರ್ಕಾರಕ್ಕೆ ಲಕ್ಷಾಂತರ ರೂಪಾಯಿ ರಾಜಸ್ವ ನಷ್ಟವಾಗಿರುವುದಲ್ಲದೆ, ಗೋಮಾಳ ಪ್ರದೇಶದಲ್ಲಿ ಆಳವಾದ ಗುಂಡಿಗಳು ನಿರ್ಮಾಣವಾಗಿ ಜಾನುವಾರುಗಳು ಸಾವನ್ನಪ್ಪುತ್ತಿರುವ ಘಟನೆಗಳೂ ನಡೆಯುತ್ತಿವೆ’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

‘ಈ ಕುರಿತು ಜುಲೈ 18ರಂದು ಚಿಂಚೋಳಿ ತಹಸೀಲ್ದಾರರಿಗೆ ದೂರು ಸಲ್ಲಿಸಲಾಗಿತ್ತು. ಬಳಿಕ ಜುಲೈ 20ರಂದು ಪತ್ರಿಕೆಗಳಲ್ಲಿ ಸುದ್ದಿ ಪ್ರಕಟವಾದ ಅದೇ ರಾತ್ರಿ ಕೆಲವರು ಮನೆಗೆ ನುಗ್ಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ದೂರು ಹಿಂಪಡೆಯುವಂತೆ ಒತ್ತಡ ಹೇರಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದರು. ಈ ಘಟನೆಯಿಂದ ಕುಟುಂಬದ ಸದಸ್ಯರು, ವಿಶೇಷವಾಗಿ ವಯೋವೃದ್ಧ ತಂದೆ-ತಾಯಿ ಮಾನಸಿಕ ಆಘಾತಕ್ಕೊಳಗಾಗಿದ್ದಾರೆ’ ಎಂದರು.

‘ಸುಲೇಪೇಟೆ, ಯಾಕಾಪೂರ, ಕೋರವಿ, ಪೆಂಚನಪಳ್ಳಿ, ಕುಡ್ಡಳ್ಳಿ, ಕುಪನೂರ, ಕೆರೋಳ್ಳಿ ಹಾಗೂ ಭಂಟನಳ್ಳಿ ಗ್ರಾಮಗಳಲ್ಲಿ ನಡೆಯುತ್ತಿರುವ ಅಕ್ರಮ ಸೌಳು ಗಣಿಗಾರಿಕೆ ಕುರಿತು ವಿವಿಧ ಸಂಘಟನೆಗಳು ಗಣಿ ಮತ್ತು ಭೂವಿಜ್ಞಾನ ಇಲಾಖೆ, ಲೋಕಾಯುಕ್ತ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಹಲವು ಬಾರಿ ದೂರು ಸಲ್ಲಿಸಿದ್ದರೂ ಇದುವರೆಗೆ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ’ ಎಂದು ದೂರಿದರು.

‘ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದ ಮಾಹಿತಿಯ ಪ್ರಕಾರ ಸುಲೇಪೇಟೆ ಗ್ರಾಮದಲ್ಲಿ ಕೇವಲ ಇಬ್ಬರಿಗೆ ಮಾತ್ರ ಸೌಳು ಗಣಿಗಾರಿಕೆಗೆ ಪರವಾನಗಿ ನೀಡಲಾಗಿದೆ. ಆದರೆ ಅದರ ಹೊರತಾಗಿಯೂ ಅನೇಕ ಕಡೆಗಳಲ್ಲಿ ಅಕ್ರಮ ಗಣಿಗಾರಿಕೆ ನಿರಂತರವಾಗಿ ನಡೆಯುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯ ಇದಕ್ಕೆ ಕಾರಣವಾಗಿದೆ’ ಎಂದು ಆರೋಪಿಸಿದರು.

‘ಅತಿಭಾರ ಹೊತ್ತ ಟಿಪ್ಪರ್‌ಗಳು ತಾಡಪತ್ರಿ ಮುಚ್ಚದೆ ಅತಿವೇಗದಲ್ಲಿ ಸಂಚರಿಸುತ್ತಿರುವುದರಿಂದ ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟಾಗಿದೆ. ದ್ವಿಚಕ್ರ ವಾಹನ ಸವಾರರು, ರೈತರು ಹಾಗೂ ಶಾಲಾ ವಿದ್ಯಾರ್ಥಿಗಳು ಅಪಾಯಕ್ಕೆ ಸಿಲುಕುತ್ತಿದ್ದು, ಇತ್ತೀಚೆಗೆ ರಟಕಲ್ ಸಮೀಪ ವಿದ್ಯಾರ್ಥಿಯೊಬ್ಬನಿಗೆ ಟಿಪ್ಪರ್‌ನಿಂದ ಸೌಳು ಬಿದ್ದು ಗಾಯಗೊಂಡ ಘಟನೆ ನಡೆದಿರುವುದನ್ನು’ ಅವರು ಉಲ್ಲೇಖಿಸಿದರು.

‘ಅಕ್ರಮ ಸೌಳು ಗಣಿಗಾರಿಕೆಯನ್ನು ತಕ್ಷಣ ತಡೆದು, ಸಂಬಂಧಪಟ್ಟ ಅಧಿಕಾರಿಗಳ ಪಾತ್ರದ ಕುರಿತು ಸಮಗ್ರ ತನಿಖೆ ನಡೆಸಬೇಕು. ಸರ್ಕಾರಿ ಗೋಮಾಳ ಜಮೀನುಗಳಿಗೆ ಬೇಲಿ ನಿರ್ಮಿಸಿ ಅತಿಕ್ರಮಣ ಮತ್ತು ಅಕ್ರಮ ಗಣಿಗಾರಿಕೆಗೆ ಶಾಶ್ವತ ತಡೆ ಹಾಕಬೇಕು. ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ, ದೂರುದಾರರಿಗೆ ಪೊಲೀಸ್ ಭದ್ರತೆ ಒದಗಿಸಬೇಕು’ ಎಂದು ಅವರು ಸರ್ಕಾರವನ್ನು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಸಚಿವ ಸಂಪುಟದಲ್ಲಿ ಹಿಂದುಳಿದ ವರ್ಗ, ಮಹಿಳೆಯರಿಗೆ ಪ್ರಾತಿನಿಧ್ಯ ಇಲ್ಲ: ಕೋಲಿ, ಕಬ್ಬಲಿಗ ಸಮಿತಿ ಆರೋಪ

ಪತ್ರಿಕಾಗೋಷ್ಠಿಯಲ್ಲಿ ವೀರಶೈವ ಲಿಂಗಾಯತ ಮಹಾಸಭೆಯ ಕಾರ್ಯದರ್ಶಿ ಚೇತನ ಯಾಕಾಪೂರ, ಸಾರಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಚಂದ್ರಕಾಂತ ಪಾಸ್ಟರ್ ಹಾಗೂ ವಿದ್ಯಾರ್ಥಿ ಸಂಘದ ಜಿಲ್ಲಾ ಅಧ್ಯಕ್ಷ ಮೋಹನ ಐನಾಪೂರ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಅನಧಿಕೃತ ವಿದ್ಯುತ್ ಬಳಕೆ; ಜೆಸ್ಕಾಂನಿಂದ ₹18.95 ಲಕ್ಷ ದಂಡ

ಜೆಸ್ಕಾಂ ಇಲಾಖೆಯಿಂದ ಜಿಲ್ಲೆಯಲ್ಲಿ ಆಗಸ್ಟ್‌ನಲ್ಲಿ ಜೆಸ್ಕಾಂ ಅಧಿಕಾರಿಗಳು, ಜಾಗೃತದಳದವರು ದಾಳಿ ಮಾಡಿ...

ರಾಯಚೂರು | ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥ ಆರೋಪ: ಡಿಸಿ ನಿವಾಸದ ಮುಂದೆ ಪ್ರತಿಭಟನೆ

ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥಗೊಂಡಿದ್ದಾಳೆ ಎಂದು ಆರೋಪಿಸಿ ಕುಟುಂಬಸ್ಥರು ಜಿಲ್ಲಾಧಿಕಾರಿ ನಿವಾಸದ...

ರಾಯಚೂರು | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು: ಇಬ್ಬರು ಸಾವು

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟಿದ್ದು,...

ಹಾವೇರಿ | ರದ್ದು ಪಡಿಸಿದ ಎಂಟು ಕೊರ್ಸಗಳನ್ನು  ಮುಂದುವರೆಸುವಂತೆ ಅತಿಥಿ ಉಪನ್ಯಾಸಕರ ಧರಣಿಗೆ ಡಿವೈಎಫ್ಐ-ಎಸ್ಎಫ್ಐ ಬೆಂಬಲಿಸಿ ಪ್ರತಿಭಟನೆ

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ರದ್ದುಪಡಿಸಿದ ಎಂಟು ಕೋರ್ಸ್ ಗಳು ಮುಚ್ಚದೇ ಮುಂದುವರೆಸುವಂತೆ...