ಕಲಬುರಗಿ | ಕಾಗಿಣಾ ನದಿ ಪಾತ್ರದಲ್ಲಿ ಸರ್ಕಾರಿ ಮಾತ್ರೆ, ಸಿರಪ್‌ಗಳ ರಾಶಿ; ಆರೋಗ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

Date:

ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ಹಾಗೂ ಮಧ್ಯಮ ವರ್ಗದ ರೋಗಿಗಳಿಗೆ ಉಚಿತವಾಗಿ ದೊರೆಯಬೇಕಾದ ಔಷಧಗಳು ನದಿ ಪಾತ್ರದಲ್ಲಿ ಅನಾಥವಾಗಿ ಬಿದ್ದಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಶಹಾಬಾದ್–ಚಿತ್ತಾಪುರ ರಾಷ್ಟ್ರೀಯ ಹೆದ್ದಾರಿ-150ರ ಕಾಗಿಣಾ ನದಿ ಸೇತುವೆಯ ಕೆಳಭಾಗದಲ್ಲಿ ಅಪಾರ ಪ್ರಮಾಣದ ಮಾತ್ರೆಗಳು ಹಾಗೂ ಮಕ್ಕಳಿಗೆ ನೀಡುವ ಸಿರಪ್ ಬಾಟಲಿಗಳು ಪತ್ತೆಯಾಗಿದ್ದು, ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.

- Advertisement -

ನದಿ ಪಾತ್ರದಲ್ಲಿ ಮೆಟ್‌ಫಾರ್ಮಿನ್ ಹೈಡ್ರೋಕ್ಲೋರೈಡ್ 500 ಎಂಜಿ, ಟೆಲ್ಮಿಸಾರ್ಟನ್ 40 ಎಂಜಿ ಮಾತ್ರೆಗಳ ಜತೆಗೆ ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಬಳಸುವ ಸಿರಪ್ ಬಾಟಲಿಗಳು ಪತ್ತೆಯಾಗಿವೆ. ವಿವಿಧ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುವ ಬಡ ರೋಗಿಗಳಿಗೆ ಅನುಕೂಲವಾಗಲೆಂದು ಸರ್ಕಾರ ಪೂರೈಸುವ ಔಷಧಗಳು ಈ ರೀತಿ ಬೀದಿಪಾಲಾಗಿರುವುದು ಆರೋಗ್ಯ ಇಲಾಖೆಯ ಔಷಧ ಸಂಗ್ರಹಣೆ ಮತ್ತು ವಿತರಣಾ ವ್ಯವಸ್ಥೆಯ ಮೇಲೆಯೇ ಅನುಮಾನ ಮೂಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ನಾನು, ರಸ್ತೆ ಹಾಗೂ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಮರಾಠಿ ಕವಿ ವಸಂತ್ ಆಬಾಜಿ ದಹಾಕೆ ಅವರ "ನಾನು, ರಸ್ತೆ ಹಾಗೂ ಕಪ್ಪು ಹಕ್ಕಿ" ಕವಿತೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ...

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ ಹೆಸರಾಂತ ಗಜಾನನ ಬಸ್ ಸಂಸ್ಥೆ ಒಂದು ಕಾಲದಲ್ಲಿ ಸುಮಾರು 150ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನಪ್ರಿಯತೆ ಗಳಿಸಿತ್ತು. ಸಂಸ್ಥೆಯ ಬೆಳವಣಿಗೆಯಲ್ಲಿ...

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

ಸಾಮಾನ್ಯವಾಗಿ ಅವಧಿ ಮೀರಿದ ಔಷಧಗಳನ್ನು ನಿಗದಿತ ನಿಯಮಗಳಡಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕಾಗುತ್ತದೆ. ಆದರೆ, ಸಾರ್ವಜನಿಕರ ಆರೋಗ್ಯಕ್ಕೆ ಸಂಬಂಧಿಸಿದ ಇಂತಹ ಔಷಧಗಳು ನದಿ ಪಾತ್ರಕ್ಕೆ ತಲುಪಿದ್ದಾದರೂ ಹೇಗೆ ಎಂಬುದು ಇದೀಗ ಪ್ರಮುಖ ಪ್ರಶ್ನೆಯಾಗಿದೆ. ಔಷಧಗಳ ಅವಧಿ ಮುಗಿದಿದೆಯೇ, ಬಳಕೆಯಾಗದೆ ಉಳಿದಿವೆಯೇ ಅಥವಾ ಉದ್ದೇಶಪೂರ್ವಕವಾಗಿ ಎಸೆಯಲಾಗಿದೆಯೇ ಎಂಬುದನ್ನು ಅಧಿಕಾರಿಗಳು ಸ್ಪಷ್ಟಪಡಿಸಬೇಕಿದೆ.

ಇದಲ್ಲದೆ, ಯಾವ ಸರ್ಕಾರಿ ಆಸ್ಪತ್ರೆ ಅಥವಾ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಈ ಔಷಧಗಳನ್ನು ತರಲಾಗಿದೆ? ಔಷಧಗಳ ದಾಸ್ತಾನು ಮತ್ತು ವಿತರಣೆಯ ಲೆಕ್ಕಪತ್ರದಲ್ಲಿ ಇವುಗಳ ದಾಖಲೆ ಇದೆಯೇ? ವಿಲೇವಾರಿ ಪ್ರಕ್ರಿಯೆಗೆ ಅನುಮತಿ ನೀಡಿದ ಅಧಿಕಾರಿಗಳು ಯಾರು? ಎಂಬ ಪ್ರಶ್ನೆಗಳು ಉದ್ಭವಿಸಿವೆ.

ಇದನ್ನು ಓದಿದ್ದೀರಾ? ಯಾದಗಿರಿ | ಶಹಾಪುರ ಸಂಪೂರ್ಣ ಬಂದ್; ‘ನೀರು ಕೊಡಿ, ಇಲ್ಲ ವಿಷ ಕೊಡಿ’ ಎಂದು ರೈತರ ಆಕ್ರೋಶ!

ಸರ್ಕಾರದ ಹಣದಲ್ಲಿ ಖರೀದಿಸಿದ ಔಷಧಗಳು ಅಗತ್ಯವಿರುವ ರೋಗಿಗಳಿಗೆ ತಲುಪದೆ ಈ ರೀತಿ ನದಿ ಪಾತ್ರದಲ್ಲಿ ಪತ್ತೆಯಾಗಿರುವುದು ಸಾರ್ವಜನಿಕ ಹಣದ ದುರುಪಯೋಗದ ಶಂಕೆಗೂ ಕಾರಣವಾಗಿದೆ. ಸಂಬಂಧಪಟ್ಟ ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಔಷಧಗಳ ಮೂಲ ಪತ್ತೆಹಚ್ಚುವುದರ ಜತೆಗೆ ದಾಸ್ತಾನು ದಾಖಲೆಗಳನ್ನು ಪರಿಶೀಲಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು, ಸರ್ಕಾರಿ ಔಷಧಗಳ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಖಚಿತಪಡಿಸಬೇಕು ಎಂಬ ಒತ್ತಾಯ ಸಾರ್ವಜನಿಕರಿಂದ ಕೇಳಿ ಬಂದಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ಕೊರತೆ ನೀಗಿಸಲು ಆದ್ಯತೆ: ಮಧು ಬಂಗಾರಪ್ಪ

ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಹೆಚ್ಚಿನ...

ಮಂಗಳೂರು | 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ: ಸಹಕಾರ ಮಾಣಿಕ್ಯ ಪ್ರಶಸ್ತಿ ಪ್ರದಾನ

ಪರಿಸರ ಸಂರಕ್ಷಣೆ, ಲಿಂಗ ಸಮಾನತೆ ಮತ್ತು ವಿಶ್ವಶಾಂತಿಯ ಆಶಯದೊಂದಿಗೆ 73ನೇ ಅಖಿಲ...

ಬಾಗೇಪಲ್ಲಿ | ಪೂಲವಾರಿಪಲ್ಲಿ ಭೂಹಗರಣ ತಹಸೀಲ್ದಾರ್‌ನ್ನು ಸೇವೆಯಿಂದ ವಜಾಗೊಳಿಸಿ ಸಿಬಿಐ ತನಿಖೆ ದಸಂಸ ಆಗ್ರಹ

ತಾಲೂಕಿನ ಪರಗೋಡು ಗ್ರಾಪಂ ವ್ಯಾಪ್ತಿಯ ಪೂಲವಾರಿಪಲ್ಲಿ ಗ್ರಾಮದ ನಡೆದ ಭೂಹಗರಣದಲ್ಲಿ ತಹಸೀಲ್ದಾರ್...

ಕೋಲಾರ| ಕ್ರೀಡೆ ಮಕ್ಕಳ ಭವಿಷ್ಯದ ಅವಿಭಾಜ್ಯ ಅಂಗವಾಗಲಿ: ಸಿಎಂಆರ್ ಶ್ರೀನಾಥ್

ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಣದಷ್ಟೇ ಕ್ರೀಡೆಗೂ ಪೋಷಕರು ಆದ್ಯತೆ ನೀಡಬೇಕು. ಕ್ರೀಡೆ...