ಕಲಬುರಗಿ | ಕಸದಲ್ಲಿ ನಾಡ್‌ಪಿಸ್ತೂಲ್ ಮತ್ತು ಮೂರು ಗುಂಡು ಪತ್ತೆ

Date:

ಜಿಲ್ಲೆಯ ಕಾಳಗಿ ತಾಲ್ಲೂಕಿನ ಚಿಂಚೋಳಿ (ಎಚ್) ಗ್ರಾಮದಲ್ಲಿ ಟೈಲರ್ ಅಂಗಡಿ ಬಳಿಯ ಬಟ್ಟೆಗಳ ಚಿಂದಿಯಲ್ಲಿ ನಾಡ್‌ಪಿಸ್ತೂಲ್ ಹಾಗೂ ಒಂದು ಜೀವಂತ ಮತ್ತು ಎರಡು ನಿಷ್ಕ್ರಿಯ ಗುಂಡುಗಳು ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.

- Advertisement -

ಗ್ರಾಮದ ಟೇಲರ್ ಮಾಳಪ್ಪ ಹೂಗೊಂಡ ಅವರು ಅಂಗಡಿಯ ಕಸವನ್ನು ಗುಡಿಸಿ, ಸ್ವಲ್ಪ ದೂರದಲ್ಲಿರುವ ಸ್ಥಳದಲ್ಲಿ ಕಸಕ್ಕೆ ಬೆಂಕಿ ಹಚ್ಚಿದ ವೇಳೆ ಈ ಘಟನೆ ನಡೆದಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ ಜೋರಾದ ಸ್ಫೋಟ ಶಬ್ದ ಕೇಳಿ ಆತಂಕಗೊಂಡ ಅವರು ಬೆಂಕಿ ನಂದಿಸಿ ಪರಿಶೀಲಿಸಿದಾಗ ಕಸದೊಳಗೆ ನಾಡ್‌ಪಿಸ್ತೂಲ್ ಮತ್ತು ಮೂರು ಗುಂಡುಗಳು ಪತ್ತೆಯಾಗಿವೆ. ತಕ್ಷಣವೇ ಅವರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನೂ ಓದಿ: ಕಲಬುರಗಿ | ದೀಪಾವಳಿ ಪ್ರಯುಕ್ತ ಕೆಕೆಆರ್‌ಟಿಸಿಯಿಂದ 600 ಹೆಚ್ಚುವರಿ ಬಸ್: ಡಾ.ಬಿ.ಸುಶೀಲಾ

ಈ ಕುರಿತು ಈದಿನ.ಕಾಮ್ ಜತೆ ಮಾತನಾಡಿದ ಪಿಎಸ್‌ಐ ತಿಮ್ಮಯ್ಯ ಅವರು, “ಘಟನೆ ಕುರಿತು ಎಫ್ಐಆರ್ ದಾಖಲಾಗಿದೆ. ನಾನು ನಿನ್ನೆ ರಜೆಯಲ್ಲಿ ಇದ್ದುದರಿಂದ ಕಾಳಗಿ ವೃತ್ತದ ಡಿವೈಎಸ್‌ಪಿ ಶಂಕರ್ ಗೌಡ ಪಾಟೀಲ್ ಹಾಗೂ ಸಿಪಿಐ ಜಗದೇವಪ್ಪ ಪಾಳ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ತನಿಖೆ ಪ್ರಗತಿಯಲ್ಲಿದೆ,” ಎಂದು ಮಾಹಿತಿ ನೀಡಿದರು.

ಸುದ್ದಿ ತಿಳಿಯುತ್ತಿದ್ದಂತೆಯೇ ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...