ಕಲಬುರಗಿ | ನಗರದ ಪ್ರಮುಖ ರಸ್ತೆಗಳಲ್ಲಿ ಭೂಗತ ವಿದ್ಯುತ್ ಜಾಲ ನಿರ್ಮಾಣಕ್ಕೆ ಯೋಜನೆ: ಸಚಿವ ಪ್ರಿಯಾಂಕ್ ಖರ್ಗೆ

Date:

ನಗರದ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ಕಂಬಗಳು ಮತ್ತು ಮೇಲ್ಮಟ್ಟದ ತಂತಿಗಳ ಜಾಲವನ್ನು ತೆರವುಗೊಳಿಸಿ, ಭೂಗತ ವಿದ್ಯುತ್ ಸಂಪರ್ಕ ವ್ಯವಸ್ಥೆ ಜಾರಿಗೆ ತರಲು ಯೋಜನೆ ರೂಪಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

- Advertisement -

ನಗರದ ವಿದ್ಯುತ್ ಮೂಲಸೌಕರ್ಯವನ್ನು ಆಧುನೀಕರಿಸುವ ಉದ್ದೇಶದಿಂದ ಯೋಜನೆಯ ರೂಪುರೇಷೆ, ಕಾರ್ಯಸಾಧ್ಯತೆ ಹಾಗೂ ಅನುಷ್ಠಾನದ ಕುರಿತು ಬುಧವಾರ ಜೆಸ್ಕಾಂ ಅಧ್ಯಕ್ಷ ಪ್ರವೀಣ್ ಪಾಟೀಲ್ ಮತ್ತು ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆ. ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆಯೂ ಸಮಾಲೋಚನೆ ನಡೆಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ನಗರದ ಪ್ರಮುಖ ರಸ್ತೆಗಳಲ್ಲಿ ಭೂಗತ ವಿದ್ಯುತ್ ಸಂಪರ್ಕ ವ್ಯವಸ್ಥೆ ಜಾರಿಗೊಳಿಸುವುದರಿಂದ ವಿದ್ಯುತ್ ಅವಘಡಗಳ ಅಪಾಯವನ್ನು ತಗ್ಗಿಸುವುದರ ಜತೆಗೆ ರಸ್ತೆಗಳಲ್ಲಿ ಸಂಚಾರಕ್ಕೆ ಅಡ್ಡಿಯಾಗುವ ವಿದ್ಯುತ್ ಕಂಬಗಳು ಹಾಗೂ ತಂತಿಗಳ ಸಮಸ್ಯೆಗೆ ಪರಿಹಾರ ದೊರೆಯಲಿದೆ. ಅಲ್ಲದೆ, ನಗರದ ಸೌಂದರ್ಯ ಹೆಚ್ಚಿಸುವುದರೊಂದಿಗೆ ಸುಸಜ್ಜಿತ ಮತ್ತು ಆಧುನಿಕ ನಗರ ನಿರ್ಮಾಣಕ್ಕೂ ಈ ಯೋಜನೆ ನೆರವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಯಾದಗಿರಿ | ಬುದ್ಧನ ಸಮಾನತೆ, ಶಾಂತಿ ಸಂದೇಶದೊಂದಿಗೆ ವರ್ಷವಾಸ ಸಮಾರೋಪ; ಭಿಕ್ಕುಗಳಿಗೆ ಚೀವರದಾನ

ಕಲಬುರಗಿಯ ಬೆಳೆಯುತ್ತಿರುವ ನಗರೀಕರಣಕ್ಕೆ ತಕ್ಕಂತೆ ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಸುಧಾರಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಯೋಜನೆ ಅನುಷ್ಠಾನಗೊಂಡರೆ ನಗರದ ಪ್ರಮುಖ ರಸ್ತೆಗಳಿಗೆ ಹೊಸ ರೂಪ ಸಿಗುವುದರ ಜತೆಗೆ ಮೂಲಸೌಕರ್ಯ ಅಭಿವೃದ್ಧಿಗೂ ಮತ್ತಷ್ಟು ವೇಗ ದೊರೆಯುವ ನಿರೀಕ್ಷೆಯಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಗ್ರಿಗೋಲ್ಡ್ ಹಗರಣ: ದಾಖಲೆ ಪರಿಶೀಲನಾ ಕೇಂದ್ರದಲ್ಲಿ ಸಂತ್ರಸ್ತರ ಪರದಾಟ

ಬಹುಕೋಟಿ ರೂ.ಗಳ ಅಗ್ರಿಗೋಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರ ದಾಖಲೆ ಪರಿಶೀಲನೆ ಕಾರ್ಯ...

ಚಿಕ್ಕಮಗಳೂರು | ಕಾಡುಪ್ರಾಣಿ ಹಾವಳಿಗೆ ಶಾಶ್ವತ ಪರಿಹಾರ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಯೋಜನೆ

ಮಲೆನಾಡಿನಲ್ಲಿ ಮಾನವ - ಪ್ರಾಣಿ ಸಂಘರ್ಷ ಹೆಚ್ಚಾಗಿದ್ದು, ನಿರಂತರವಾಗಿ ಕಾಡುತ್ತಿರುವ ಕಾಡುಪ್ರಾಣಿ...

ಕೋಲಾರ | ಡಿಸಿಸಿ ಬ್ಯಾಂಕ್ ಅಕ್ರಮಗಳ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ನೇಮಿಸಿ: ರೈತ ಸಂಘ ಒತ್ತಾಯ

ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾದ ನೂರಾರು...