ಕಲಬುರಗಿ | ಎದೆಗೆ ಗುಂಡು ಹಾರಿಸಿಕೊಂಡು ಪೊಲೀಸ್ ಪೇದೆ ಆತ್ಮಹತ್ಯೆ

Date:

ಕರ್ತವ್ಯದಲ್ಲಿದ್ದ ಸಿಎಆರ್ ವಾಹನದಲ್ಲಿ (ಸಶಸ್ತ್ರ ಮೀಸಲು ಪಡೆ) ಪೊಲೀಸ್ ಪೇದೆಯೊಬ್ಬರು ಪೊಲೀಸ್ ವಾಹನದಲ್ಲೇ ತಮ್ಮ ಸೇವಾ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಸಂಜೆ ನಗರದ ಜಗತ್ ವೃತ್ತದ ಸಮೀಪ ನಡೆದಿದೆ.

- Advertisement -

ಮೃತರನ್ನು ಜೇವರ್ಗಿ ತಾಲೂಕಿನ ಮಾವನೂರ ಗ್ರಾಮದ ಶಿವಕುಮಾರ್ ಮಾವನೂರ (32) ಎಂದು ಗುರುತಿಸಲಾಗಿದೆ. ಅವರು 2016ನೇ ಬ್ಯಾಚ್‌ನಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿ, ಇತ್ತೀಚೆಗೆ ಬೆಂಗಳೂರಿನಿಂದ ಕಲಬುರಗಿಗೆ ವರ್ಗಾವಣೆಗೊಂಡು ಸಿಎಆರ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ ಮರುಜೀವ;...

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಕೇರಳ ಸರ್ಕಾರ ಈಗ ಮರುಜೀವ ನೀಡಿದೆ. ಪ್ರಕರಣವನ್ನು ವಿಜಿಲೆನ್ಸ್ ತನಿಖೆಗೆ ಆದೇಶ ಹೊರಡಿಸಿದೆ....

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ಮಂಗಳವಾರ ಕರ್ತವ್ಯದಲ್ಲಿದ್ದ ವೇಳೆ ಪೊಲೀಸ್ ವಾಹನದೊಳಗೆ ತಮ್ಮ ಬಳಿ ಇದ್ದ 7.62 ಸೇವಾ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಗುಂಡಿನ ಸದ್ದು ಕೇಳಿ ಸ್ಥಳಕ್ಕಾಗಮಿಸಿದ ಸಹೋದ್ಯೋಗಿಗಳು ಶಿವಕುಮಾರ್ ಅವರನ್ನು ಪರಿಶೀಲಿಸಿದಾಗ ಅವರು ಮೃತಪಟ್ಟಿರುವುದು ಗೊತ್ತಾಯಿತು.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಡಿಸಿಪಿಗಳಾದ ಶಾಲೂ ಹಾಗೂ ಪ್ರವೀಣ ನಾಯಕ್, ಎಸಿಪಿ ಶರಣಪ್ಪ ಸುಬೇದಾರ, ಪಿಐ ಮಹಾಂತೇಶ ಪಾಟೀಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ವರದಿಯ ನಂತರ ಬರಗಾಲ ಘೋಷಣೆ ಭರವಸೆ ನೀಡಿದ ಸಿಎಂ ಡಿ.ಕೆ. ಶಿವಕುಮಾರ್

ಘಟನೆ ಬ್ರಹ್ಮಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಆತ್ಮಹತ್ಯೆಗೆ ಕಾರಣವೇನು ಎಂಬ ಬಗ್ಗೆ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಯುವಜನರಲ್ಲಿ ಸಂವಿಧಾನ ಪ್ರಜ್ಞೆ ಬೆಳೆಸಲು ಅ.17ರಿಂದ ತರಬೇತಿ ಶಿಬಿರ

ಯುವಜನರಲ್ಲಿ ಸಂವಿಧಾನಾತ್ಮಕ ಅರಿವು, ಸಾಮಾಜಿಕ ಪ್ರಜ್ಞೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ...

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...