ಕಲಬುರಗಿ | ಕಾರಾಗೃಹ ಭದ್ರತಾ ವೈಫಲ್ಯ; ಜೈಲಾಧಿಕಾರಿ ಸೇರಿ ಸಿಬ್ಬಂದಿ ಅಮಾನತು

Date:

ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಖೈದಿಗಳು ತಪ್ಪಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯ ತೋರಿದ ಜೈಲಾಧಿಕಾರಿ ಮತ್ತು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ಗೃಹಸಚಿವರು ತಿಳಿಸಿದ್ದಾರೆ.

- Advertisement -

ತಪ್ಪಿಸಿಕೊಂಡ ಖೈದಿಗಳನ್ನು ಬಂಧಿಸಲು ಪೊಲೀಸ್ ಅಧಿಕಾರಿಗಳಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದ್ದು, ಅದರ ಫಲವಾಗಿ ಓರ್ವ ಖೈದಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

‘ಗೃಹಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಗೃಹ ಇಲಾಖೆಯ ಎಲ್ಲ ವಿಭಾಗಗಳ ಪರಿಶೀಲನಾ ಸಭೆಗಳನ್ನು ನಡೆಸಿದ್ದು, ಇಲಾಖೆಗಳ ಬಲವರ್ಧನೆ ಹಾಗೂ ಉನ್ನತೀಕರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು. ರಾಜ್ಯದ ಎಲ್ಲ ಕಾರಾಗೃಹಗಳ ಸ್ಥಿತಿಗತಿ ಮತ್ತು ಬಂಧಿಖಾನೆ ಸಿಬ್ಬಂದಿಯ ಕಾರ್ಯಕ್ಷಮತೆಯನ್ನು ಶೀಘ್ರದಲ್ಲೇ ಪರಿಶೀಲಿಸಲಾಗುವುದು. ಜೈಲುಗಳ ಸುಧಾರಣೆ, ಭದ್ರತಾ ವ್ಯವಸ್ಥೆಯ ಉನ್ನತೀಕರಣ ಹಾಗೂ ಅಕ್ರಮಗಳಿಗೆ ಕಡಿವಾಣ ಹಾಕಲು ಸರ್ಕಾರ ಬದ್ಧವಾಗಿದೆ’ ಎಂದು ತಿಳಿಸಿದರು.

ಈ ವೇಳೆ ಬಿಜೆಪಿ ಟೀಕೆಗಳಿಗೆ ಪ್ರತಿಕ್ರಿಯಿಸಿದ ಗೃಹಸಚಿವರು, “ಟೀಕೆಗಳಿಗೆ ಮುಂದಾಗಿರುವ ಬಿಜೆಪಿ ನಾಯಕರು ತಮ್ಮ ಆಡಳಿತಾವಧಿಯ ಜೈಲುಗಳ ಸ್ಥಿತಿಯನ್ನು ಮೊದಲು ಅವಲೋಕಿಸಬೇಕು” ಎಂದು ಹೇಳಿದರು.

2010ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊಪ್ಪಳ ಜಿಲ್ಲಾ ಕಾರಾಗೃಹದಿಂದ ಎಂಟು ಖೈದಿಗಳು ಪರಾರಿಯಾಗಿದ್ದ ಪ್ರಕರಣವನ್ನು ಉಲ್ಲೇಖಿಸಿದ ಅವರು, “ರಾಜ್ಯದ ಇತಿಹಾಸದಲ್ಲೇ ಅದು ಅತಿದೊಡ್ಡ ಜೈಲು ಪರಾರಿ ಪ್ರಕರಣಗಳಲ್ಲಿ ಒಂದಾಗಿದೆ. ಅದನ್ನು ಅಂದಿನ ಗೃಹಸಚಿವರ ವೈಫಲ್ಯ ಎಂದು ಬಿಜೆಪಿ ಒಪ್ಪಿಕೊಳ್ಳುತ್ತದೆಯೇ?” ಎಂದು ಪ್ರಶ್ನಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿಯನ್ನು ಬರಪೀಡಿತ ಘೋಷಿಸುವಂತೆ ಆಗ್ರಹಿಸಿ ಕೆಪಿಆರ್‌ಎಸ್ ಪ್ರತಿಭಟನೆ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿ ಕೆಲ ಖೈದಿಗಳಿಗೆ ವಿಶೇಷ ಸವಲತ್ತುಗಳು ದೊರೆಯುತ್ತಿದ್ದ ಪ್ರಕರಣಗಳನ್ನೂ ಪ್ರಸ್ತಾಪಿಸಿದ ಅವರು, ಅದನ್ನು ಬಿಜೆಪಿ ಸರ್ಕಾರದ ವೈಫಲ್ಯ ಎಂದು ಒಪ್ಪಿಕೊಳ್ಳುವಂತೆ ಸವಾಲು ಹಾಕಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...