ಕಲಬುರಗಿ | ಬಿಡುಗಡೆಯಾದರೂ 2 ವರ್ಷ ಜೈಲಿನಲ್ಲೇ ಇದ್ದ ಕೈದಿ; ಕಾರಣವಿದು!

Date:

ಸನ್ನಡತೆ ಆಧಾರದ ಮೇಲೆ 2023ರಲ್ಲಿಯೇ ಬಿಡುಗಡೆಯಾಗಿದ್ದ ಕೈದಿಯೊಬ್ಬರು, ನ್ಯಾಯಾಲಯ ವಿಧಿಸಿದ್ದ ದಂಡ ಪಾವತಿಸಲಾಗದ ಕಾರಣ ಜೈಲಿನಲ್ಲಿಯೇ ಇದ್ದರು. ಇದೀಗ, ಅವರಿಗೆ ಜೈಲು ಅಧಿಕಾರಿಗಳು ಸಹಾಯ ಮಾಡಿದ್ದು, ಜೈಲಿನಿಂದ ಹೊರಬಂದಿದ್ದಾರೆ.

- Advertisement -

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ದುರ್ಗಪ್ಪ ಅವರು ಕಲಬುರಗಿ ಜಿಲ್ಲಾ ಕಾರಾಗೃಹದಲ್ಲಿದ್ದರು. ಅವರನ್ನು 2023ರ ನವೆಂಬರ್‌ನಲ್ಲಿಯೇ ಬಿಡುಗಡೆ ಮಾಡಲಾಗಿತ್ತು. ಆದರೆ, ದಂಡ ಪಾವತಿಸದೆ ಜೈಲಿನಿಂದ ಹೊರಬರಲಾಗಿರಲಿಲ್ಲ. ಈಗ, ಅವರಿಗೆ ಜೈಲಧಿಕಾರಿಗಳು ಹಣದ ಸಹಾಯ ಮಾಡಿ, ದಂಡ ಪಾವತಿಸಿದ್ದು, ಅವರನ್ನು ಜೈಲಿನಿಂದ ಬಿಡುಗಡೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

2013ರಲ್ಲಿ ಕೊಲೆ ಪ್ರಕರಣದಲ್ಲಿ ದುರ್ಗಪ್ಪ ಅವರನ್ನು ಬಂಧಿಸಲಾಗಿತ್ತು. ಆರೋಪ ಸಾಬೀತಾದ ಹಿನ್ನೆಲೆ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಅವರನ್ನು ಕಲಬುರಗಿ ಜೈಲಿನಲ್ಲಿ ಇರಿಸಲಾಗಿತ್ತು.

ಆದಾಗ್ಯೂ, ಸನ್ನಡತೆ ಆಆರದ ಮೇಲೆ 2023ರನ ನವೆಂಬರ್‌ನಲ್ಲಿ ಅವರನ್ನು ಬಿಡುಗಡೆ ಮಾಡಲು ಸರ್ಕಾರ ಆದೇಶಿಸಿತ್ತು. ಆದರೆ, ಕೊಲೆ ಪ್ರಕರಣದಲ್ಲಿ ಅವರಿಗೆ ವಿಧಿಸಲಾಗಿದ್ದ 1 ಲಕ್ಷ ರೂ. ದಂಡವನ್ನು ದುರ್ಗಪ್ಪ ಪಾವತಿ ಮಾಡಿರಲಿಲ್ಲ. ಅವರ ಸಂಬಂಧಿಗಳೂ ದಂಡ ಪಾವತಿಸಿ, ಅವರನ್ನು ಕರೆದೊಯ್ಯಲು ಮುಂದೆ ಬಂದಿರಲಿಲ್ಲ. ಪರಿಣಾಮ, ಅವರು ಜೈಲಿನಿಂದ ಹೊರಬರಲು ಸಾಧ್ಯವಾಗಿರಲಿಲ್ಲ.

ಇದೀಗ, ಕಲಬುರಗಿ ಕೇಂದ್ರ ಕಾರಾಗೃಹ ಮುಖ್ಯ ಅಧಿಕ್ಷಕಿ ಡಾ. ಅರ್ ಅನಿತಾ ಅವರೇ ದುರ್ಗಪ್ಪಗೆ ಸಹಾಯ ಮಾಡಿದ್ದಾರೆ. ದಂಡದ ಮೊತ್ತವನ್ನು ಪಾವತಿಸಿದ್ದಾರೆ. ದುರ್ಗಪ್ಪ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...