ಕಲಬುರಗಿ | ಪರಿಸರ ರಕ್ಷಿಸಿದರೆ ಮಾನವ ಸಮಾಜದ ರಕ್ಷಣೆ: ಮಲ್ಲಿಕಾರ್ಜುನ್ ಎಂಎಸ್

Date:

ಭೂಮಿ ತಾಯಿಯಿದ್ದಂತೆ. ಗಿಡಮರಗಳನ್ನು ನೆಟ್ಟು ಪರಿಸರವನ್ನು ರಕ್ಷಿಸಿದರೆ ಅದು ಮಾನವ ಸಮಾಜವನ್ನು ರಕ್ಷಿಸುತ್ತದೆ ಎಂದು ನಿವೃತ್ತ ಅಧೀಕ್ಷಕ ಅಭಿಯಂತರ ಮಲ್ಲಿಕಾರ್ಜುನ್ ಎಂಎಸ್ ಹೇಳಿದರು.

- Advertisement -

ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ ಅವರ ಜನ್ಮದಿನದ ಅಂಗವಾಗಿ ಮಹೇಂದ್ರ ಫೌಂಡೇಶನ್ ವತಿಯಿಂದ ಎಂಎಸ್‌ಕೆ ಮಿಲ್ ಜಿಡಿಎ ಬಡಾವಣೆಯಲ್ಲಿ ಆಯೋಜಿಸಿದ್ದ ಗಿಡ ನೆಡುವ ಹಾಗೂ ಬಡ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

‘ಶಿಕ್ಷಣ ಮತ್ತು ಪರಿಸರ ಸಂರಕ್ಷಣೆಯನ್ನು ಉತ್ತೇಜಿಸುವ ಉದ್ದೇಶದಿಂದ ಮಹೇಂದ್ರ ಫೌಂಡೇಶನ್ ನಡೆಸುತ್ತಿರುವ ಸೇವಾ ಕಾರ್ಯಗಳು ಶ್ಲಾಘನೀಯ. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಗಿಡಗಳನ್ನು ನೆಡುವುದರ ಜೊತೆಗೆ ಅವುಗಳನ್ನು ಪೋಷಿಸುವ ಸಂಕಲ್ಪ ಮಾಡಬೇಕು’ ಎಂದರು.

‘ಕಲ್ಯಾಣ ಕರ್ನಾಟಕ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ಡಾ. ಚಂದ್ರಶೇಖರ್ ದೊಡ್ಡಮನಿ ಮಾತನಾಡಿ, ಮಹೇಂದ್ರ ಫೌಂಡೇಶನ್ ಹಲವು ವರ್ಷಗಳಿಂದ ವಿದ್ಯಾರ್ಥಿಗಳಲ್ಲಿ ಧನಾತ್ಮಕ ಚಿಂತನೆ ಬೆಳೆಸುವ ಜೊತೆಗೆ ಅವರ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ನೀಡುತ್ತಿದೆ. ಬಡ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ಸೇರಿದಂತೆ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸುವ ಮೂಲಕ ವಿದ್ಯಾಭ್ಯಾಸಕ್ಕೆ ನೆರವಾಗುತ್ತಿರುವುದು ಉತ್ತಮ ಕಾರ್ಯವಾಗಿದೆ’ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಶರಣಪ್ಪ ನಂದಗಿರಿ ವಹಿಸಿದ್ದರು.

ಇದನ್ನು ಓದಿದ್ದೀರಾ? ಕಲಬುರಗಿ | ಆಧಾರ್ ತಿದ್ದುಪಡಿಗೆ ಜನರ ಪರದಾಟ: ಹೆಚ್ಚುವರಿ ಕೇಂದ್ರ ತೆರೆಯಲು ಆಗ್ರಹ

ಈ ಸಂದರ್ಭದಲ್ಲಿ ಲಕ್ಷ್ಮಣ್ ಕನಕಟಕರ್, ಶಶಿಕಾಂತ್ ಹೋಳ್ಕರ್, ಈಶ್ವರ್ ಹೊಸಮನಿ, ಡಾ. ಕೃಷ್ಣಮೂರ್ತಿ, ಡಾ. ದೀಪ್ತಿ, ಕಾಶಿನಾಥ್ ಮುಖರ್ಜಿ, ಮಲ್ಲಿಕಾರ್ಜುನ್ ಮದಾನಿ, ಪರಮೇಶ್ವರ್ ಧನ್ನಿ, ಸಿದ್ದಣ್ಣ ಹಾಲಬಾವಿ, ಶರಣಬಸವ ಹೆಗ್ಗಡೆ, ಜ್ಯೋತಿ ದೊಡ್ಡಮನಿ, ಅನಿಲಕುಮಾರ್ ಸುಗಂಧಿ, ಸಂಜೀವ್ ಕುಮಾರ್ ಮೇಲಿನಮನಿ, ಡಾ. ತುಶಿತ್, ಅಶಿತ್ ಹಾಗೂ ಜಗನ್ನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಯುಪಿಐಗೆ ಶುಲ್ಕ? ‘ಡಿಜಿಟಲ್ ಇಂಡಿಯಾ’ ಆಶಯಕ್ಕೆ ವಿರುದ್ಧ: ಪದ್ಮರಾಜ್ ಪೂಜಾರಿ

ಯುಪಿಐ ವಹಿವಾಟಿನ ಮೇಲೆ ಶುಲ್ಕ ವಿಧಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ನಿಲುವು...

ವಿಜಯಪುರ | ಸಮಾಜದ ಅಭಿವೃದ್ಧಿಯಲ್ಲಿ ಎಂಜಿನಿಯರ್‌ ಪಾತ್ರ ಮಹತ್ವದ್ದು: ರಾಕೇಶ್ ಗೋಪಾಲ್ ಜೋಶಿ

ಸಮಾಜದ ಅಭಿವೃದ್ಧಿ, ದೇಶದ ಪ್ರಗತಿಯಲ್ಲಿ ಎಂಜಿನಿಯರ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು...

ಉಳ್ಳಾಲ | ಅಪಘಾತ: ಮಗನ ಸಾವಿನ ದುಃಖದಲ್ಲೂ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ವರ್ಷಿತ್ ಕುಟುಂಬ

ಉಳ್ಳಾಲ ತಾಲೂಕಿನ ಕುತ್ತಾರು ಕೊರಗಜ್ಜ ಕಟ್ಟೆಯ ಬಳಿ ಸೋಮವಾರ ರಾತ್ರಿ ದ್ವಿಚಕ್ರ...

ಕಲಬುರಗಿ | ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಪೊಲೀಸ್ ಪೇದೆ

ಖಾಕಿ ಧರಿಸಿ ರಕ್ಷಣೆ ಮಾಡಬೇಕಾದವರೇ ಅಪರಾಧ ಕೃತ್ಯಕ್ಕೆ ಇಳಿದಿರುವ ಘಟನೆ...