ಕಲಬುರಗಿ | ಮತದಾರರ ಹಕ್ಕುಗಳ ರಕ್ಷಣೆಯೇ ಸಂವಿಧಾನದ ರಕ್ಷಣೆ: ಜೆ.ಎಂ. ವೀರ ಸಂಗಯ್ಯ

Date:

ಮತದಾನದ ಹಕ್ಕು ಕೇವಲ ರಾಜಕೀಯ ಹಕ್ಕು ಮಾತ್ರವಲ್ಲ, ಅದು ಸಂವಿಧಾನ ನೀಡಿರುವ ಮೂಲಭೂತ ಪ್ರಜಾಪ್ರಭುತ್ವದ ಹಕ್ಕುಗಳಲ್ಲಿ ಒಂದಾಗಿದ್ದು, ಅದರ ರಕ್ಷಣೆಗೆ ಪ್ರತಿಯೊಬ್ಬ ನಾಗರಿಕರು ಜಾಗೃತರಾಗಬೇಕು ಎಂದು ಎದ್ದೇಳು ಕರ್ನಾಟಕ ಸಂಘಟನೆಯ ಪ್ರಮುಖರಾದ ಜೆ.ಎಂ. ವೀರ ಸಂಗಯ್ಯ ಹೇಳಿದರು.

- Advertisement -

ನಗರದ ಹೀರಾಪುರದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರು ಭಾನುವಾರ ಆಯೋಜಿಸಿದ್ದ ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ವಿರೋಧಿ ಜನಜಾಗೃತಿ ಜಾಥಾ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

‘ದೇಶದ ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ನಾಗರಿಕ ಹಕ್ಕುಗಳ ರಕ್ಷಣೆಗೆ ನಡೆಯುತ್ತಿರುವ ಹೋರಾಟಗಳಲ್ಲಿ ಜನಸಾಮಾನ್ಯರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಕರೆ ನೀಡಿದರು. ಮತದಾನದ ಹಕ್ಕು ಕೇವಲ ಚುನಾವಣೆ ವೇಳೆ ಮತ ಚಲಾಯಿಸುವ ಅವಕಾಶ ಮಾತ್ರವಲ್ಲ; ಅದು ಸಂವಿಧಾನ ನೀಡಿರುವ ಸಮಾನತೆ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ಪ್ರತೀಕವಾಗಿದೆ’ ಎಂದು ಹೇಳಿದರು.

‘ಜೂನ್ 20ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆ ಹಾಗೂ ಹೋರಾಟ ಕಾರ್ಯಕ್ರಮದಲ್ಲಿ ಜಿಲ್ಲೆಯ ಜನರು, ಯುವಕರು, ವಿದ್ಯಾರ್ಥಿಗಳು, ರೈತರು, ಕಾರ್ಮಿಕರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ಮನವಿ ಮಾಡಿದರು.

‘ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕುಗಳು ಮತ್ತು ಅವಕಾಶಗಳನ್ನು ನೀಡಿದ್ದು, ಆ ಮೌಲ್ಯಗಳನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಮತದಾರರ ಹಕ್ಕುಗಳ ರಕ್ಷಣೆ ಎಂದರೆ ಸಂವಿಧಾನದ ರಕ್ಷಣೆಯೇ ಆಗಿದ್ದು, ಈ ನಿಟ್ಟಿನಲ್ಲಿ ನಿರಂತರ ಜನಜಾಗೃತಿ ಅಗತ್ಯ’ ಎಂದು ಅವರು ಹೇಳಿದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಆಮ್ ಆದ್ಮಿ ಪಕ್ಷದ ಮುಖಂಡ ಶೇಖರ್ ಸಿಂಗ್, ‘ಎನ್‌ಆರ್‌ಸಿ ಮತ್ತು ಎಸ್‌ಐಆರ್ ಪ್ರಕ್ರಿಯೆಗಳು ಒಂದೇ ನಾಣ್ಯದ ಎರಡು ಮುಖಗಳಂತಿವೆ ಎಂದು ಆರೋಪಿಸಿದರು. ದೇಶದಲ್ಲಿ “ಒಂದು ರಾಷ್ಟ್ರ–ಒಂದು ಪಕ್ಷ” ಎಂಬ ಸಿದ್ಧಾಂತವನ್ನು ಜಾರಿಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿವಿಧ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿವೆ’ ಎಂದು ಟೀಕಿಸಿದರು.

‘ಪ್ರಜಾಪ್ರಭುತ್ವದ ಬಲ ಮತದಾರರ ಹಕ್ಕುಗಳಲ್ಲಿ ಅಡಗಿದೆ. ಮತದಾರರ ಪಟ್ಟಿಯಿಂದ ಅರ್ಹ ನಾಗರಿಕರ ಹೆಸರುಗಳು ಕೈಬೀಳುವಂತಹ ಯಾವುದೇ ಬೆಳವಣಿಗೆಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇದೆ. ಹೀಗಾಗಿ ಸಾರ್ವಜನಿಕರು ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯನ್ನು ಸೂಕ್ಷ್ಮವಾಗಿ ಗಮನಿಸಬೇಕು’ ಎಂದು ಅವರು ಹೇಳಿದರು.

ಸಭೆಯಲ್ಲಿ ಮಾತನಾಡಿದ ಇತರ ಮುಖಂಡರು, ‘ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಯಾವುದೇ ಲೋಪಗಳು ಕಂಡುಬಂದರೆ ತಕ್ಷಣ ಸಂಬಂಧಿತ ಅಧಿಕಾರಿಗಳ ಗಮನಕ್ಕೆ ತರಬೇಕು. ಸಾರ್ವಜನಿಕರು ತಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಬೇಕು ಹಾಗೂ ಅಗತ್ಯ ದಾಖಲೆಗಳನ್ನು ಸಕಾಲದಲ್ಲಿ ಸಲ್ಲಿಸುವ ಮೂಲಕ ತಮ್ಮ ಮತದಾನದ ಹಕ್ಕನ್ನು ಕಾಪಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾವನ್ನು ಜಿಲ್ಲೆಯಾದ್ಯಂತ ಯಶಸ್ವಿಯಾಗಿ ನಡೆಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮತದಾರರ ಹಕ್ಕುಗಳ ಸಂರಕ್ಷಣೆ ಕುರಿತು ವ್ಯಾಪಕ ಜಾಗೃತಿ ಮೂಡಿಸಲು ನಿರ್ಧರಿಸಲಾಯಿತು.

ಈ ವೇಳೆ ಅನೀಲ ಟೆಂಗಳಿ, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಸಲೀಂ ಚಿತ್ತಾಪುರಿ ಮಾತನಾಡಿದರು. ಸಭೆಯಲ್ಲಿ ರೈತ ಮುಖಂಡ ನಾಗೇಂದ್ರ ತಂಬೆ, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಮುಬ್ಬಿನ್ ಅಹಮ್ಮದ್, ಅಬ್ದುಲ್ ವಾಹೀದ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು, ಸಾಮಾಜಿಕ ಸಂಘಟನೆಗಳು ಹಾಗೂ ಪ್ರಗತಿಪರ ವೇದಿಕೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇದನ್ನು ಓದಿದ್ದೀರಾ? ಕಲಬುರಗಿ | ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಹೆಚ್ಚಿನ ಎಚ್ಚರಿಕೆ ಅಗತ್ಯ: ಡಾ.ವಾಸು ಹೆಚ್ ವಿ

ಸಭೆಯ ಅಂತ್ಯದಲ್ಲಿ ಸಂವಿಧಾನದ ಮೌಲ್ಯಗಳ ರಕ್ಷಣೆ, ಮತದಾರರ ಹಕ್ಕುಗಳ ಸಂರಕ್ಷಣೆ ಹಾಗೂ ಪ್ರಜಾಪ್ರಭುತ್ವದ ಬಲವರ್ಧನೆಗಾಗಿ ಎಲ್ಲ ಪ್ರಜಾಪ್ರಭುತ್ವವಾದಿ ಶಕ್ತಿಗಳು ಒಗ್ಗಟ್ಟಿನಿಂದ ಹೋರಾಟ ನಡೆಸುವ ಅಗತ್ಯವಿದೆ ಎಂದು ಮುಖಂಡರು ಅಭಿಪ್ರಾಯಪಟ್ಟರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಕೃಷ್ಣೇಗೌಡ ಆಯ್ಕೆ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ ಕರ್ನಾಟಕ ಸರ್ಕಾರ ನೀಡುವ...

ಚಿಕ್ಕಬಳ್ಳಾಪುರ ಜಿಲ್ಲಾ ಎಸಿ ಆಗಿ ಕೆ.ಆರ್.ಶೋಭಿತಾ ನೇಮಕ: ಡಿ.ಎಚ್.ಅಶ್ವಿನ್ ವರ್ಗಾವಣೆ

ಚಿಕ್ಕಬಳ್ಳಾಪುರ : ಜಿಲ್ಲೆಯ ಉಪವಿಭಾಗದ ನೂತನ ಉಪವಿಭಾಗಾಧಿಕಾರಿಯಾಗಿ ಕೆ.ಆರ್. ಶೋಭಿತಾ ಅಧಿಕಾರ...

ಚಿಂತಾಮಣಿ | ನಳಂದ ವಿದ್ಯಾ ಮಂದಿರದಲ್ಲಿ ಪೋಕ್ಸೋ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ ಯಶಸ್ವಿ

ಲೈಂಗಿಕ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳಿಗೆ ಕಾನೂನು...

ಕಲಬುರಗಿ | ಸಾರ್ವಜನಿಕ ಶಿಕ್ಷಣ ಬಲವರ್ಧನೆಗೆ ಎಸ್‌ಎಫ್‌ಐ ಆಗ್ರಹ: 17ನೇ ರಾಜ್ಯ ಸಮ್ಮೇಳನದ ಬಹಿರಂಗ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಕೆ

ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸುವುದು, ಕೋಮು...