ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

Date:

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ ತಪ್ಪಾಗಿ ಹೊರಗಿಡಲಾದ ಅರ್ಹ ಮತದಾರರ ಹೆಸರುಗಳನ್ನು ಮರುಸ್ಥಾಪಿಸುವುದು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ನಾಗರಿಕರ ಹಕ್ಕುಗಳ ರಕ್ಷಣಾ ಸಮಿತಿ ವತಿಯಿಂದ ಗುರುವಾರ ನಗರದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಯಿತು.

- Advertisement -

ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಬೆಳಿಗ್ಗೆ ಜಗತ್ ವೃತ್ತದಲ್ಲಿ ಧರಣಿ ನಡೆಸಿದ ಪ್ರತಿಭಟನಾಕಾರರು, ಬಳಿಕ ಸೂಪರ್ ಮಾರ್ಕೆಟ್‌ನಿಂದ ಜಗತ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಸಂಜೆ ಜಗತ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದ ಅವರು, ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಧರಣಿಯನ್ನುದ್ದೇಶಿಸಿ ಮಾತನಾಡಿದ ಮುಖಂಡರು, ಮತದಾರರ ನೋಂದಣಿ, ಹೆಸರುಗಳ ಅಳಿಸುವಿಕೆ ಹಾಗೂ ಮರುಸ್ಥಾಪನೆ ಮತ್ತು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಇಬ್ಬರು ಚುನಾವಣಾ ಆಯುಕ್ತರು ಆಕ್ಷೇಪ ವ್ಯಕ್ತಪಡಿಸಿರುವ ಕುರಿತು ಸೆ.23ರಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಟಿಸಿದ ವರದಿ ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಹೇಳಿದರು.

3293565

‘ಚುನಾವಣಾ ಆಯೋಗದ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆ ಹಾಗೂ ಸ್ವಾಯತ್ತತೆ ಖಾತರಿಪಡಿಸಬೇಕು. ಮತದಾರರ ಪಟ್ಟಿಯಿಂದ ತಪ್ಪಾಗಿ ಹೊರಗಿಡಲಾದ ಎಲ್ಲ ಅರ್ಹರ ಹೆಸರುಗಳನ್ನು ಮರುಸೇರ್ಪಡೆಗೊಳಿಸಿ ಮತದಾನದ ಹಕ್ಕನ್ನು ರಕ್ಷಿಸಬೇಕು’ ಎಂದು ಒತ್ತಾಯಿಸಿದರು.

Advertisements
Advertisements

‘ಚುನಾವಣಾ ಆಯುಕ್ತರ ನೇಮಕಾತಿ ವ್ಯವಸ್ಥೆಯಲ್ಲಿ ಬದಲಾವಣೆ ತರಬೇಕು. ಪ್ರಧಾನಮಂತ್ರಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ಆಯ್ಕೆ ವ್ಯವಸ್ಥೆ ಜಾರಿಗೆ ತರಬೇಕು’ ಎಂದು ಆಗ್ರಹಿಸಿದರು.

‘ನಮೂನೆ–7ರ ಮೂಲಕ ಮತದಾರರ ವಿರುದ್ಧ ಸಲ್ಲಿಸಲಾಗಿರುವ ಆಕ್ಷೇಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು. ಅರ್ಹ ಮತದಾರರ ಮತದಾನದ ಹಕ್ಕಿಗೆ ಧಕ್ಕೆ ಉಂಟುಮಾಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಲಾಗಿದೆ.

ಇದನ್ನು ಓದಿದ್ದೀರಾ? ಯಾದಗಿರಿ | ಎಕರೆಗೆ ₹25 ಸಾವಿರ ಬರ ಪರಿಹಾರ, ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡುವಂತೆ ರೈತ ಸಂಘ ಆಗ್ರಹ

ಈ ಸಂದರ್ಭದಲ್ಲಿ ಅಫಝಲ್ ಮಹಿಮೂದ್, ಸಲೀಂ ಅಹಮದ್ ಚಿತಾಪೂರಿ, ಮಹೇಶ ಎಸ್.ಬಿ., ಶರಣಬಸಪ್ಪ ಮಮಶೆಟ್ಟಿ, ಎಸ್.ಎಂ. ಶರ್ಮಾ, ಮುಬೀನ್ ಅಹಮದ್, ಡಾ. ಮಹೇಶ್ ರಾಠೋಡ್, ಕೆಪಿಆರ್‌ಎಸ್ ಮುಖಂಡ ಶರಣಬಸಪ್ಪ ಮಮಶೆಟ್ಟಿ, ದಸಂಸ ಹಿರಿಯ ಮುಖಂಡ ಮರಿಯಪ್ಪ ಹಳ್ಳಿ ಡಾ. ಮೀನಾಕ್ಷಿ ಬಾಳಿ, ಕೆ. ನೀಲಾ, ಶರ್ಮಾ, ಮುಬ್ಬಿನ್ ಅಹ್ಮದ್, ಸಹೇನಾಜ್, ಎಐಕೆಕೆಎಂಎಸ್ ಮುಖಂಡ ಮಹೇಶ್, ಸಂಧ್ಯಾರಾಜ್ ಸ್ಯಾಮುಯೆಲ್ ಸೇರಿದಂತೆ ಹಲವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...