ಕಲಬುರಗಿ | ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

Date:

Advertisements

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರ ವಿರುದ್ಧ ತನಿಖೆಗೆ ಮಂಜೂರಾತಿ ನೀಡಿರುವ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿದರು.

ಜನಪರವಾದ ಆಡಳಿತ ನೀಡುತ್ತಾ, ಸಾಮಾಜಿಕ ನ್ಯಾಯಕ್ಕೆ ಶ್ರಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ಬಿಜೆಪಿ ರಾಜಕೀಯ ಪ್ರೇರಿತವಾಗಿ ಮಾಡಿರುವ ಆರೋಪವನ್ನೇ ಆಧಾರವಾಗಿಟ್ಟುಕೊಂಡು ಬಿಜೆಪಿ ಎಜೇಂಟರಂತೆ ವರ್ತಿಸಿ ಪ್ರಾಸಿಕ್ಯೂಷನಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಹಾಗೂ ಕೇಂದ್ರ ಬಿಜೆಪಿ ಸರಕಾರ ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ ಪಿತೂರಿಯನ್ನು ಖಂಡಿಸಿದರು.

WhatsApp Image 2024 08 20 at 6.48.38 PM

ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮೆರವಣಿಗೆ ಹೊರಟು ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಟೈಯರ್‌ಗೆ ಬೆಂಕಿ ಹಚ್ಚುವುದರ ಮೂಲಕ ರಾಜ್ಯಪಾಲರ ವಿರುದ್ಧ ಘೋಷಣೆ ಕೂಗುತ್ತಾ ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಯವರಿಗೆ ಮನವಿಯನ್ನು ಸಲ್ಲಿಸಿದರು.

Advertisements
WhatsApp Image 2024 08 20 at 6.48.37 PM 1

ಇದನ್ನು ಓದಿದ್ದೀರಾ? ಧಾರವಾಡ | ಸಿಎಂ ಸಿದ್ಧರಾಮಯ್ಯ ರಾಜೀನಾಮೆ ವಿಚಾರ ಅವರ ಪಕ್ಷಕ್ಕೆ ಬಿಟ್ಟಿದ್ದು: ಎಸ್ ಆರ್ ಹಿರೇಮಠ್

ಈ ಸಂದರ್ಭದಲ್ಲಿ ಶಾಸಕರಾದ ಎಂ ವೈ ಪಾಟೀಲ್, ಅಲ್ಲಮಪ್ರಭು ಪಾಟೀಲ್, ಮಾಜಿ ಸಚಿವರಾದ ರೇವುನಾಯಕ ಬೆಳಮಗಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯರಾದ ಜಗದೇವ ಗುತ್ತೇದಾರ, ಸುಭಾಷ್ ರಾಠೋಡ್, ಸಿದ್ದರಾಮ ಪ್ಯಾಟೆ ಸೇರಿದಂತೆ ಅನೇಕ ಮುಖಂಡರು ವಿವಿಧ ಘಟಕದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X