ಕಲಬುರಗಿ | ಪಿಡಿಒ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

Date:

Advertisements

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಾದಿಪೂರ ಗ್ರಾಮ ಪಂಚಾಯತಿಯ ಕರ್ತವ್ಯ ನಿರತ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಮೇಲೆ ನಡೆದಿರುವ ಹಲ್ಲೆ ಖಂಡಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ತಾಲ್ಲೂಕು ಘಟಕ ಪ್ರತಿಭಟನೆ ನಡೆಸಿತು.

ತಾಲ್ಲೂಕು ಪಂಚಾಯತ್ ಕಾರ್ಯಾಲಯದಿಂದ ತಹಸೀಲ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಮನವಿ ಪತ್ರವನ್ನು ಸಹಾಯಕ ನಿರ್ದೇಶಕ ನಾಗೇಂದ್ರಪ್ಪ ಅವರಿಗೆ ಸಲ್ಲಿಸಿದರು.

‘ಅಭಿವೃದ್ಧಿ ಅಧಿಕಾರಿ ಶ್ರೀಧರ ಜವರೇಗೌಡ ಅವರಿಗೆ ವಾಲೋಜಿ ಅಣದು ರಾಠೋಡ್ ಫೋನ್ ಕರೆ ಮಾಡಿ ಅಸಾಂವಿಧಾನಿಕ ಪದ ಬಳಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದಲ್ಲದೆ, ಶಾದಿಪೂರ ಪಂಚಾಯತ್ ಪಿಡಿಓ ಮೇಲೆ ಹಲ್ಲೆ ನಡೆಸುತ್ತಿದ್ದೇನೆಂದು ಪೊಲೀಸರಿಗೆ ಕರೆ ಮಾಡಿ ಪಂಚಾಯತಿಗೆ ನುಗ್ಗಿ ಪಂಚಾಯತ್ ನಲ್ಲಿ ಕರ್ತವ್ಯ ನಿರತ ಪಿಡಿಓ ಶ್ರೀಧರ ಎಂಬುವವರ ಮೇಲೆ ವಾಲೋಜಿ ಅಣದ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆʼ ಎಂದು ಆರೋಪಿಸಿದರು.

Advertisements

ಘಟನೆ ಸಂಬಂಧ ಕೊಂಚವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ಬಂಧಿಸಿ, ಗುಂಡಾ ಕಾಯ್ದೆಗೆ ಒಳಪಡಿಸಿ, ಕಠಿಣ ಶಿಕ್ಷೆಗೆ ಗುರಿಪಡಿಸಿ ನೌಕರಸ್ಥರಿಗೆ ನ್ಯಾಯ ಒದಗಿಸಬೇಕೆಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ಆಗ್ರಹಿಸಿದರು.

ಚಿಂಚೋಳಿ ತಾಲೂಕು ಶಾಖೆಯ ಗೌರವಾಧ್ಯಕ್ಷ ಮಲ್ಲಿಕಾರ್ಜುನ್ ಪಾಲಾಮೂರ, ಅಧ್ಯಕ್ಷ ದೇವೀಂದ್ರಪ್ಪ ಹೋಳ್ಕರ್ ಅವರು ಮಾತನಾಡಿ,ʼಕರ್ತವ್ಯ ನಿರತ ಸರಕಾರಿ ನೌಕರರ ರಕ್ಷಣೆಗೆ ಕಾಯ್ದೆ ರೂಪಿಸಿ ಜಾರಿಗೆ ತಂದು ಜೀವದ ಭಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರಸ್ಥರಿಗೆ ಧೈರ್ಯ ತುಂಬಬೇಕುʼ ಎಂದು ಮನವಿ ಮಾಡಿದರು.

ಪ್ರತಿಭಟನೆಗೆ ಬೆಂಬಲಿಸಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ಶರಣು ಪಾಟೀಲ್ ಮೋತಕಪಳ್ಳಿ, ಗೋಪಾಲ ಗಾರಂಪಳ್ಳಿ, ಆರ್‌ಡಿಪಿಆರ್ ನೌಕರರ ಸಂಘದ ಅಧ್ಯಕ್ಷ ಪವನ ಮೇತ್ರಿ, ನಿರ್ದೇಶಕ ಜಗನ್ನಾಥರೆಡ್ಡಿ, ಪಿಡಿಓ ಮಲ್ಲಿಕಾರ್ಜುನ್ ಗಿರಿ ಅವರು ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಪಿಯುಸಿ ಪರೀಕ್ಷೆ ಫಲಿತಾಂಶ : ಜಿಲ್ಲೆಯ 13 ಪಿಯು ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ

ಚಿಂಚೋಳಿ ತಾಲೂಕಿನ ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯತ್ ಪಿಡಿಓ, ಕಾರ್ಯದರ್ಶಿಗಳು, ಬಿಲ್ ಕಲೆಕ್ಟರ್, ಪಂಪ್ ಆಪರೇಟರಗಳು, ವಾಟರ್ ಮ್ಯಾನ್, ಕಂಪ್ಯೂಟರ್ ಆಪರೇಟರಗಳು, ಶ್ರೀಧರ ವಗ್ಗಿ ಇನ್ನಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X