ಕಲಬುರಗಿ | ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ; ಹಿಂದುತ್ವವಾದಿ ಕಾರ್ಯಕರ್ತರಿಂದ ಕಲ್ಲು ತೂರಾಟ

Date:

Advertisements

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದಿದ್ದ ಅತ್ಯಾಚಾರ ಕೃತ್ಯವನ್ನ ಖಂಡಿಸಿ, ಹಿಂದುತ್ವವಾದಿ ಸಂಘಟನೆಗಳು ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿವೆ. ಈ ವೇಳೆ, ಕಲ್ಲು ತೂರಾಟ ನಡೆದಿದೆ. ಕಲ್ಲು ತೂರಿದವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸಂಘಟನೆಗಳ ಕಾರ್ಯಕರ್ತರೇ ಆಗಿದ್ದಾರೆ ಎಂದು ವರದಿಯಾಗಿದೆ.

ಕಲಬುರಗಿಯಲ್ಲಿ ಬಂಜಾರ ಸಮಾಜ, ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹಾಗೂ ಹಿಂದು ಸಮಾಜ ಒಕ್ಕೂಟದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ನಗರದ ಎಸ್‌ವಿಎಲ್ ಸರ್ಕಲ್‌ನಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಈ ವೇಳೆ, ಪ್ರತಿಭಟನೆಯಲ್ಲಿ ಭಾಗಿಯಾಗದ್ದ ಕೆಲವು ಕಿಡಿಗೇಡಿಗಳು ತಾಲೂಕು ಕಚೇರಿಯ ಬಳಿ ನಿಲ್ಲಿಸಿದ್ದ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಘಟನೆಯಲ್ಲಿ ಕಾರಿನ ಗಾಜುಗಳು ಪುಡಿಯಾಗಿವೆ. ಕೆಲ ಅಂಗಡಿಗಳ ಮೇಲೂ ಕಲ್ಲು ತೂರಾಟ ನಡೆದಿದ್ದು, ಟೈರ್‌ಗಳಿಗೂ ಬೆಂಕಿ ಹಚ್ಚಲಾಗಿದೆ. ಉದ್ದೇಶಪೂರ್ವಕವಾಗಿ ಕಲ್ಲು ತೂರಾಟ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಹಿಂಸಾಚಾರ ನಡೆಸದಂತೆ ಸಂಘಟನೆಗಳು ಮುಖಂಡರು ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

Advertisements

ಕಲ್ಲು ತೂರಾಟ ನಡೆಸಿರುವ ಮೇಲೆ ಪೊಲೀಸರು ಲಾಠಿ ಚಾರ್ಜ್‌ ನಡೆಸಿದ್ದಾರೆ. ಗುಂಪುಗಳನ್ನು ಚದುರಿಸಿದ್ದಾರೆ. ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳನ್ನು ಪೊಲೀಸರು ಗುರುತಿಸಿದ್ದಾರೆ. ಆರು ಮಂದಿಯನ್ನು ಬಂಧಿಸಿದ್ದಾರೆ.

ಬಂಧಿತರನ್ನು ಸಾಗರ್ ರಾಠೋಡ್, ರಾಹುಲ್ ರಾಠೊಡ್, ರಮೇಶ್ ರಾಠೋಡ್‌, ಅಭಿಷಕ್ ರಾಠೋಡ್, ಶಂಕರ್ ರಾಠೋಡ್ ಹಾಗೂ ಪ್ರದೀಪ್ ಪವಾರ್ ಎಂದು ಗುರುತಿಸಲಾಗಿದೆ. ಇವೆರಲ್ಲರೂ ಪ್ರತಿಭಟನೆಯಲ್ಲಿ ಭಾಗಿದ್ದರು ಎಂದು ತಿಳಿದುಬಂದಿದೆ.

ಪ್ರತಿಭಟನೆಯಲ್ಲಿ ಬಿಜೆಪಿ ಮಾಜಿ ಸಂಸದ ಉಮೇಶ ಜಾಧವ್, ಮಾಜಿ ಸಚಿವ ರೇವು ನಾಯ್ಕ್ ಬೆಳಮಗಿ, ವಿಎಚ್‌ಪಿ ಮುಖಂಡ ಲಿಂಗರಾಜಪ್ಪ ಅಪ್ಪ, ಶ್ರೀರಾಮಸೇನೆ ರಾಜ್ಯ ಘಟಕದ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X