ಕಲಬುರಗಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ, ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಒತ್ತಾಯಿಸಿ ಪ್ರತಿಭಟನೆ

Date:

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸುವುದು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಿ ಕಾನೂನು ಕ್ರಮ ಜರುಗಿಸುವುದು ಹಾಗೂ ಮತದಾನದ ಹಕ್ಕಿನಿಂದ ವಂಚಿತರಾದ ನಾಗರಿಕರ ಹಕ್ಕುಗಳನ್ನು ಮರುಸ್ಥಾಪಿಸುವಂತೆ ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಮತ್ತು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಮ್‌) ನೇತೃತ್ವದಲ್ಲಿ ಶುಕ್ರವಾರ ನಗರದ ಜಗತ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

- Advertisement -

‘ರೈತರು, ಕಾರ್ಮಿಕರು, ದಲಿತರು, ವಿದ್ಯಾರ್ಥಿಗಳು, ಯುವಜನರು, ಮಹಿಳೆಯರು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿಪತ್ರ ಸಲ್ಲಿಸಿದರು. ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಬೇಕು ಹಾಗೂ ಅರ್ಹ ಮತದಾರರ ಹೆಸರುಗಳನ್ನು ಅನ್ಯಾಯವಾಗಿ ಕೈಬಿಡದಂತೆ ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

‘ಮುಖ್ಯ ಚುನಾವಣಾ ಆಯುಕ್ತರ ನೇಮಕಾತಿ ಪ್ರಕ್ರಿಯೆಯಲ್ಲಿ ಸುಧಾರಣೆ ತಂದು, ಆಯ್ಕೆ ಸಮಿತಿಯಲ್ಲಿ ಪ್ರಧಾನಿಯವರು ನಾಮನಿರ್ದೇಶನ ಮಾಡುವ ಸಚಿವರ ಬದಲಿಗೆ ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಸೇರಿಸಬೇಕು. ಚುನಾವಣೆಯಲ್ಲಿ ಹಣಬಲ ಮತ್ತು ತೋಳ್ಬಲದ ಪ್ರಭಾವ ತಡೆಯಲು ಪ್ರಮಾಣಾನುಪಾತದ ಪ್ರಾತಿನಿಧ್ಯ ಪದ್ಧತಿ ಜಾರಿಗೊಳಿಸುವುದರ ಜೊತೆಗೆ ಚುನಾವಣೆಗೆ ಸರ್ಕಾರಿ ಧನಸಹಾಯ ಒದಗಿಸುವ ವ್ಯವಸ್ಥೆ ಸೇರಿದಂತೆ ಸಮಗ್ರ ಚುನಾವಣಾ ಸುಧಾರಣೆಗಳನ್ನು ಜಾರಿಗೆ ತರಬೇಕು’ ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ದೆಹಲಿಯಲ್ಲಿ ಎಸ್‌ಐಆರ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು, ಯುವಜನರು ಹಾಗೂ ಇತರ ಹೋರಾಟಗಾರರ ಮೇಲೆ ಪೊಲೀಸರು ಮತ್ತು ಕೆಲವು ಸಂಘಟನೆಗಳ ಕಾರ್ಯಕರ್ತರು ನಡೆಸಿದ್ದಾರೆ ಎನ್ನಲಾದ ದೌರ್ಜನ್ಯ ಹಾಗೂ ಕಿರುಕುಳವನ್ನು ಪ್ರತಿಭಟನಾಕಾರರು ಖಂಡಿಸಿದರು.

‘ಶಾಂತಿಯುತ ಪ್ರತಿಭಟನೆ ನಡೆಸುವುದು ಪ್ರಜಾಪ್ರಭುತ್ವದ ಮೂಲಭೂತ ಹಕ್ಕಾಗಿದ್ದು, ಪ್ರತಿಭಟನಾಕಾರರ ಮೇಲಿನ ದಾಳಿಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ರಾಜಕೀಯ ಮತ್ತು ಸಾಮಾಜಿಕ ಕಾರ್ಯಕರ್ತರನ್ನು ಕಾನೂನುಬಾಹಿರವಾಗಿ ಗೃಹಬಂಧನದಲ್ಲಿಡುವ ಕ್ರಮಗಳನ್ನು ನಿಲ್ಲಿಸಿ, ನಾಗರಿಕರ ಖಾಸಗಿತನ, ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ರಕ್ಷಿಸಲು ರಾಷ್ಟ್ರಪತಿಗಳು ಮಧ್ಯಪ್ರವೇಶಿಸಬೇಕು’ ಎಂದು ಮನವಿ ಮಾಡಿದರು.

ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರಕ್ಕೆ ಆಗ್ರಹ

ತೀವ್ರ ಬರ ಪರಿಸ್ಥಿತಿಯಿಂದ ಸಂಕಷ್ಟದಲ್ಲಿರುವ ಕಲಬುರಗಿ ಜಿಲ್ಲೆಯ ರೈತರಿಗೆ ಸಮರ್ಪಕ ಬರ ಪರಿಹಾರ ಬಿಡುಗಡೆ ಮಾಡಬೇಕು. ಗ್ರಾಮೀಣ ಜನರಿಗೆ ವರ್ಷವಿಡೀ ಉದ್ಯೋಗ ಕಲ್ಪಿಸಬೇಕು, ಬೆಳೆ ನಷ್ಟ ಅನುಭವಿಸಿದ ರೈತರಿಗೆ ಎಕರೆಗೆ ಕನಿಷ್ಠ ₹50 ಸಾವಿರ ಪರಿಹಾರ ನೀಡಬೇಕು ಹಾಗೂ ಕಬ್ಬು ಬೆಳೆಗಾರರ ನ್ಯಾಯಯುತ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಶೇ.86.97ರಷ್ಟು ದಾಖಲೆ ಮತದಾನ

ಪ್ರತಿಭಟನೆಯಲ್ಲಿ ಸಂಯುಕ್ತ ಹೋರಾಟ ಕರ್ನಾಟಕದ ಸಂಚಾಲಕ ಹಾಗೂ ಎಐಕೆಕೆಎಂಎಸ್ ಜಿಲ್ಲಾ ಕಾರ್ಯದರ್ಶಿ ಮಹೇಶ್ ಎಸ್.ಬಿ., ಭೀಮಾಶಂಕರ್ ಮಾಡಿಯಾಳ, ಶರಣಬಸಪ್ಪ ಮಮಶೆಟ್ಟಿ, ಸೈಬಣ್ಣ ಗುಡುಬ, ಮೌಲಾ ಮುಲ್ಲಾ, ಉಮಾಪತಿ ಮಾಲಿಪಾಟೀಲ್, ನಾಗೇಂದ್ರಪ್ಪ ಥಂಬೆ, ಶಾಂತಾ ಘಂಟಿ, ಪ್ರಭುದೇವ ಯಳಸಂಗಿ, ಭೀಮಶೆಟ್ಟಿ ಯಂಪಳ್ಳಿ, ಸಾಜೀದ್ ಅಹ್ಮದ್ ಡಿಗ್ಗಾವ್‌ಕರ್, ದಸಂಸ ಮುಖಂಡ ಮರೆಪ್ಪ ಹಳ್ಳಿ, ದಸಂಸ ಮುಖಂಡ ಅರ್ಜುನ್ ಭದ್ರೆ, ಎಸ್.ಆರ್. ಕೊಲ್ಲೂರು, ಅರ್ಜುನ್ ಗೊಬ್ಬರ್, ಸುಧಾಮ ಧನ್ನಿ, ಪದ್ಮಣಿ ಕಿರಣಿಗಿ, ಇಮಾಮ್ ಸಾಬ್ ಹಾಗೂ ಪ್ರಮೋದ ಪಂಚಾಳ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಶೇ.86.97ರಷ್ಟು ದಾಖಲೆ ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯು ಶುಕ್ರವಾರ ಶಾಂತಿಯುತವಾಗಿ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...