ಕಲಬುರಗಿ | ಕುಡಿಯುವ ನೀರಿಗಾಗಿ ಖಾಲಿ ಕೊಡ ಹಿಡಿದು ಪಾಲಿಕೆ ಎದುರುಗಡೆ ಪ್ರತಿಭಟನೆ

Date:

ನಗರದ ವಾರ್ಡ್‌ ನಂ. 2ರ ಕೆ.ಕೆ. ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಕರ್ನಾಟಕ ಸ್ಲಂ ಜನಾಂದೋಲನದ ಜಿಲ್ಲಾ ಘಟಕದ ನೇತೃತ್ವದಲ್ಲಿ ನಿವಾಸಿಗಳು ಮಂಗಳವಾರ ಮಹಾನಗರ ಪಾಲಿಕೆ ಆಯುಕ್ತರ ಕಚೇರಿ ಎದುರು ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿ, ಪಾಲಿಕೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ಸ್ಲಂ ಜನಾಂದೋಲನದ ಜಿಲ್ಲಾ ಸಂಚಾಲಕಿ ರೇಣುಕಾ ಸರಡಗಿ, ಕೆ.ಕೆ. ನಗರದಲ್ಲಿ ಕುಡಿಯುವ ನೀರಿನ ಕೊರತೆಯಿಂದ ಜನರು ಪ್ರತಿದಿನ ಸಂಕಷ್ಟ ಅನುಭವಿಸುತ್ತಿದ್ದಾರೆ. ನೀರು ಸಂಗ್ರಹಿಸಲು ಹೆಚ್ಚಿನ ಸಮಯ ವ್ಯಯವಾಗುತ್ತಿರುವುದರಿಂದ ಮಕ್ಕಳು ಶಾಲೆಗೆ ತಡವಾಗಿ ತೆರಳುವಂತಾಗಿದೆ. ಕೂಲಿ ಕಾರ್ಮಿಕರು ಹಾಗೂ ಮಹಿಳೆಯರು ಕೆಲಸಕ್ಕೆ ಹೋಗಲು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಂತೆ ಸೆಪ್ಟೆಂಬರ್ 29ರಂದು ಮಹಾನಗರ ಪಾಲಿಕೆಗೆ ಮನವಿ ಸಲ್ಲಿಸಿದ್ದರೂ ಅಧಿಕಾರಿಗಳು ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಜನರ ಮೂಲಭೂತ ಅಗತ್ಯವಾದ ಕುಡಿಯುವ ನೀರನ್ನು ಒದಗಿಸುವಲ್ಲಿ ಪಾಲಿಕೆ ನಿರ್ಲಕ್ಷ್ಯ ವಹಿಸಬಾರದು. ಕೂಡಲೇ ಕೆ.ಕೆ. ನಗರಕ್ಕೆ ಸಮರ್ಪಕ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Advertisements

ಸಮಸ್ಯೆಯನ್ನು ತಕ್ಷಣ ಬಗೆಹರಿಸದಿದ್ದರೆ ಮುಂದಿನ ದಿನಗಳಲ್ಲಿ ರಿಂಗ್ ರಸ್ತೆ ಬಂದ್ ಮಾಡಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

Advertisements

ಇದನ್ನು ಓದಿದ್ದೀರಾ? ಯಾದಗಿರಿ | ಪಂಚಾಯಿತಿ ಚುನಾವಣೆಗಳಲ್ಲೂ ಪರಿಶಿಷ್ಟ ಜಾತಿಗಳಿಗೆ ರಾಜಕೀಯ ಒಳಮೀಸಲಾತಿ ಕಲ್ಪಿಸಲು ಆಗ್ರಹ

ಈ ಸಂದರ್ಭದಲ್ಲಿ ಕರ್ನಾಟಕ ಸ್ಲಂ ಜನಾಂದೋಲನದ ಜಿಲ್ಲಾ ಅಧ್ಯಕ್ಷೆ ಗೌರಮ್ಮ ಮಾಕಾ, ಖಜಾಂಚಿ ಸುನೀತಾ ಎಂ. ಕೊಲ್ಲೂರ, ಕಾರ್ಯದರ್ಶಿ ಶರಣು ಕಣ್ಣಿ ಸೇರಿದಂತೆ ಕೆ.ಕೆ. ನಗರದ ನಿವಾಸಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಮಟಾ | ತದಡಿ ಬಂದರಿನಲ್ಲಿ ದುರಂತ: ಮೀನು ಸಂಗ್ರಹಣಾ ಸ್ಥಳ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರು ಸಾವು

ಕುಮಟಾ: ಸಮುದ್ರದಲ್ಲಿ ಮೀನುಗಾರಿಕೆ ಮುಗಿಸಿ ದಂಡೆಗೆ ಮರಳಿದ್ದ ಬೋಟ್‌ನ ಮೀನು ಸಂಗ್ರಹಣಾ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ: ಎರಡನೇ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2026ರ ಮತ...

ಕುಡಚಿ ರೈಲು ಮಾರ್ಗ ಕಾಮಗಾರಿಗೆ ವೇಗ ನೀಡಿ; ರೈಲ್ವೆ ಹೋರಾಟಕ್ಕೆ ರೈತರೂ ಕೈಜೋಡಿಸಿ: ಕುತ್ಬುದ್ದೀನ್ ಖಾಜಿ

ದಶಕಗಳಿಂದ ಕುಂಟುತ್ತ ಸಾಗುತ್ತಿರುವ ಕುಡಚಿ ರೈಲು ಮಾರ್ಗದ ಕಾಮಗಾರಿಯನ್ನು ತ್ವರಿತಗೊಳಿಸಿ, ಯೋಜನೆಯನ್ನು...