ಕಲಬುರಗಿ | ಸೋನಮ್ ವಾಂಗ್ಚುಕ್ ಬಂಧನ ಖಂಡಿಸಿ; ಮೋದಿ, ಧರ್ಮೇಂದ್ರ ಪ್ರಧಾನ ಪ್ರತಿಕೃತಿ ದಹಿಸಿ ಪ್ರತಿಭಟನೆ

Date:

ಕೇಂದ್ರ ಸರ್ಕಾರದ ಕೋಮು, ಫ್ಯಾಸಿಸ್ಟ್ ಧೋರಣೆ ಹಾಗೂ ಉಪವಾಸ ಸತ್ಯಾಗ್ರಹ ನಿರತ ವಿಜ್ಞಾನಿ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಖಂಡಿಸಿ ಸಿಪಿಐ(ಎಂ) ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಭಾನುವಾರ ನಗರದ ತಿಮ್ಮಾಪುರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

- Advertisement -

ಪ್ರತಿಭಟನಾಕಾರರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ಪ್ರತಿಕೃತಿಯನ್ನು ದಹಿಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಐ(ಎಂ) ಜಿಲ್ಲಾ ನಾಯಕಿ ಕೆ. ನೀಲಾ, ‘ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಹೊಣೆ ಹೊತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕೆಂದು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಮ್ ವಾಂಗ್ಚುಕ್ ಅವರನ್ನು ನಸುಕಿನ ಜಾವದಲ್ಲಿ ಪೊಲೀಸರು ಬಲವಂತವಾಗಿ ವಶಕ್ಕೆ ಪಡೆದಿರುವುದು ಸರ್ವಾಧಿಕಾರಿ ಕ್ರಮವಾಗಿದೆ. ಇದು ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದ್ದು, ಕೇಂದ್ರ ಸರ್ಕಾರ ಹೋರಾಟಗಾರರೊಂದಿಗೆ ಸಂವಾದ ನಡೆಸುವ ಬದಲು ದಮನದ ಮಾರ್ಗ ಅನುಸರಿಸುತ್ತಿದೆ,’ ಎಂದು ಆರೋಪಿಸಿದರು.

‘ಹೋರಾಟಗಾರರ ನ್ಯಾಯಯುತ ಬೇಡಿಕೆಗಳನ್ನು ಆಲಿಸದೆ ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ನಡೆಸಿರುವುದನ್ನು ತೀವ್ರವಾಗಿ ಖಂಡಿಸಿದ ಅವರು, ದಮನದಿಂದ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಉಪವಾಸ ಸತ್ಯಾಗ್ರಹ ಮುಂದುವರಿಯಲಿದೆ’ ಎಂದು ಹೇಳಿದರು.

‘ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳಲ್ಲಿನ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ–2020) ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಕಾರ್ಯವೈಫಲ್ಯವೇ ಕಾರಣವಾಗಿದೆ ಎಂದು ಆರೋಪಿಸಿದ ಅವರು, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ತಕ್ಷಣ ರಾಜೀನಾಮೆ ನೀಡಬೇಕು, ಎನ್‌ಟಿಎ ಹಾಗೂ ಎನ್‌ಇಪಿ–2020 ಅನ್ನು ರದ್ದುಗೊಳಿಸಬೇಕು’ ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಶಾಲಾ ವಾಹನ ಡಿಕ್ಕಿ : 5 ವರ್ಷದ ಬಾಲಕ ಸಾವು

ಈ ಸಂದರ್ಭದಲ್ಲಿ ಸುಧಾಮ ಧನ್ನಿ, ಭೀಮಶೆಟ್ಟಿ ಯಂಪಳ್ಳಿ, ಪಾಂಡುರಂಗ, ಶಾಂತಾ ಘಂಟಿ, ಚಂದಮ್ಮ ಗೋಳಾ, ಇಮಾಮ್ ಸಾಬ್, ಎಂ.ಬಿ. ಸಜ್ಜನ್, ಪದ್ಮಿನಿ ಕಿರಣಗಿ ಸೇರಿದಂತೆ ಪಕ್ಷದ ಮುಖಂಡರು, ವಿದ್ಯಾರ್ಥಿಗಳು ಹಾಗೂ ಯುವಜನರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...