ಕಲಬುರಗಿ | ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸಿ

Date:

ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ಸರ್ಕಾರಿ ಶಾಲೆಗೆ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆಯಿಂದ ಪ್ರತಿಭಟನೆ ನಡೆಸಿ ಶಿಕ್ಷಣ ಇಲಾಖೆ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.

- Advertisement -

ಎಐಯುಟಿಯುಸಿ ಕಾರ್ಮಿಕ ಸಂಘಟನೆ ಮುಖಂಡ ಶರಣು ಹೇರೂರು ಮಾತನಾಡಿ, ʼಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮವು ಅತೀ ಹೆಚ್ಚು ದಿನಗೂಲಿ-ರೈತ ಕಾರ್ಮಿಕರು, ವಲಸೆ ಕಾರ್ಮಿಕರು ವಾಸಿಸುವ ಗ್ರಾಮ. ಈ ಗ್ರಾಮದಲ್ಲಿ ಸರ್ಕಾರಿ ಕನ್ನಡ ಹಾಗೂ ಉರ್ದು ಮಾಧ್ಯಮ ಶಾಲೆಗಳು ಮೂಲಭೂತ ಸೌಕರ್ಯದಿಂದ ವಂಚಿತವಾಗಿವೆ. ಇದರಿಂದ ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗುತ್ತಿದೆʼ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಎಐಡಿಎಸ್ಓ ಜಿಲ್ಲಾ ಖಜಾಂಚಿ ವೆಂಕಟೇಶ ದೇವದುರ್ಗ ಮಾತನಾಡಿ, ʼಹರಿಜನವಾಡ ಬಡಾವಣೆಯ ಸರ್ಕಾರಿ ಶಾಲೆಗೆ ಕೊಠಡಿ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಸೌಲಭ್ಯಗಳಿಲ್ಲ. ಇನ್ನು ಶಿಕ್ಷಕರ ಕೊರತೆ ಎದುರಾಗಿದೆ.ಕೂಡಲೇ ಶಾಲೆಗೆ ಅಗತ್ಯ ಸೌಕರ್ಯ ಹಾಗೂ ಶಿಕ್ಷಕರನ್ನು ನೇಮಕ ಮಾಡಬೇಕುʼ ಎಂದು ಒತ್ತಾಯಿಸಿದರು.

ಯುವಜನ ಸಂಘಟನೆಯ ವಾಡಿ ಕಾರ್ಯದರ್ಶಿ ಗೌತಮ್ ಪರರ್ತುರಕ್ ಮಾತನಾಡಿ, ʼಕಡಿಮೆ ದಾಖಲಾತಿ ಹೊಂದಿರುವ ಹಲಕರ್ಟಿ ಗ್ರಾಮದ ಈ ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಿ, ಈ ಕೂಡಲೇ ನೂತನ ಕಟ್ಟಡಕ್ಕೆ ಮಂಜೂರಾತಿ ನೀಡಿ ಸರ್ಕಾರಿ ಶಾಲೆಗಳನ್ನು ಉಳಿಸಬೇಕು. ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಸರ್ಕಾರಿ ಶಾಲೆಗಳು ಮುಚ್ಚುವ ನಿರ್ಧಾರ ತೆಗೆದುಕೊಳ್ಳಬಾರದುʼ ಎಂದರು.

ಇದನ್ನೂ ಓದಿ : ಆರ್‌ಎಸ್‌ಎಸ್, ಬಿಜೆಪಿ ಚಿಂತನೆಗಳಿಗೆ ಕಲ್ಯಾಣ ಶರಣರ ನಾಡು ಅವಕಾಶ ಕೊಡುವುದಿಲ್ಲ : ಪ್ರಿಯಾಂಕ್‌ ಖರ್ಗೆ

ಪ್ರತಿಭಟನೆಯಲ್ಲಿ ಪ್ರಮುಖರಾದ ಮಲ್ಲಿನಾಥ ಹುಂಡೇಕಲ್, ಚೌಡಪ್ಪ ಗಂಜಿ, ಗೋವಿಂದ ಯಳವಾರ, ಸಿದ್ದಾರ್ಥ್ ತಿಪ್ಪನೂರು, ದತ್ತು ಹುಡೇಕರ್, ಸಂಪತ್ ಗೌಂಡಿ, ಮಹಾದೇವಿ, ಗೋದಾವರಿ ಕಾಂಬಳೆ, ಸುದೀಪ್, ಆಕಾಶ್, ಮೋಹನ್ ಅಕ್ಕಿ, ಕಾರ್ತಿಕ್, ಸಂತೋಷ್, ಅನಿತಾ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...