ಕಲಬುರಗಿ | ಬೆಳೆ ವಿಮೆ ಪರಿಹಾರ ಬಿಡುಗಡೆಗೆ ಪ್ರಾಂತ ರೈತ ಸಂಘ ಆಗ್ರಹ

Date:

ಜಿಲ್ಲೆಯಲ್ಲಿ ಅತಿವೃಷ್ಟಿ ಮಳೆಯಿಂದ ಬೆಳೆ ನಷ್ಟ ಸಮೀಕ್ಷೆ ನಡೆಸಿ ಪರಿಹಾರಕ್ಕಾಗಿ ಬೆಳೆ ವಿಮೆ ಜಾರಿ ಹಾಗೂ ಹಿಂದಿನ ವರ್ಷದ 315 ಕೋಟಿ ರೂಪಾಯಿ ಬಾಕಿ ಬೆಳೆ ವಿಮೆ ಹಣ ಬಿಡುಗಡೆಗಾಗಿ ಆಗ್ರಹಿಸಿ ಕಮಲಾಪುರ ತಾಲೂಕಿನ ಮಹಾಗಾಂವ ಕ್ರಾಸ್ ಹತ್ತಿರ ರಾಷ್ಟ್ರೀಯ ಹೆದ್ದಾರಿ ತಡೆದು ಕರ್ನಾಟಕ ಪ್ರಾಂತ ರೈತ ಸಂಘ ಪ್ರತಿಭಟನೆ ನಡೆಸಿದರು.

- Advertisement -

ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಮಾತನಾಡಿ, ʼಅತಿವೃಷ್ಟಿ ಹಾನಿಯಿಂದ ಬೆಳೆ ನಷ್ಟ ಸಮೀಕ್ಷೆ ನಡೆಸಿ ನೀಡಬೇಕು. ಮಹಾಗಾಂವ ಕ್ರಾಸ್ ದಿಂದ ಚಿಂಚೋಳಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ 32ರ ಹೇರೂರು ಸಮೀಪ ಸಂಪೂರ್ಣ ರಸ್ತೆ ಹಾಳಾಗಿದ್ದು ರಸ್ತೆಯುದ್ದಕ್ಕೂ ತಗ್ಗು, ಗುಂಡಿಗಳು ಬಿದ್ದು ವಾಹನ ಸವಾರರು ಪರದಾಡುತ್ತಿದ್ದಾರೆ. ಕೂಡಲೇ ರಸ್ತೆ ದುರಸ್ತಿ ಮಾಡಬೇಕುʼ ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಅತಿವೃಷ್ಟಿ ಮಳೆಯಿಂದ ಹಾನಿಯಾದ ಬೆಳೆ ವಿಮೆ ಮಾಡಿಸಿದ ರೈತರು ಇಫ್ಕೊ ಟೋಕಿಯೊ ಇನ್ಸೂರೆನ್ಸ್ ಕಂಪನಿ ಟೋಲ್ ಫ್ರೀ ನಂಬರ್‌ಗೆ ವಿಮೆ ಕಟ್ಟಿದ್ದ ರೈತರು ಕಂಪ್ಲೆಂಟ್ ಮಾಡಲಿಕ್ಕೆ ಗ್ರಾಮೀಣ ಪ್ರದೇಶದ ರೈತರು ಕರೆ ಮಾಡಿದ್ದರೆ ಟೋಲ್ ಫ್ರೀ ನಂಬರಿಗೆ ಕರೆ ಮಾಡಿದ್ರೆ ಕರೆ ಸ್ವೀಕರಿಸುತ್ತಿಲ್ಲ, ಕೆಲವೊಮ್ಮೆ ಪೋನ್ ಹತ್ತುತ್ತಿಲ್ಲ, ಕರೆ ಕಟ್ಟಾಗುತ್ತಿದೆ. ಅವರನ್ನು ಸಂಪರ್ಕಿಸಲು ಆಗುತ್ತಿಲ್ಲʼ ಎಂದರು.

ಈ ಬಗ್ಗೆ ಕೃಷಿ ಅಧಿಕಾರಿಗಳಿಗೆ ಸ್ಪಂದಿಸುತ್ತಿಲ್ಲ. ವಿಮೆ ಕಂಪನಿಗೆ ವಿಮೆ ಹಣ ಕಟ್ಟಿದ್ದ ರೈತರು ಕಂಗಾಲಾಗಿದ್ದಾರೆ. ವಿಮೆ ಕಟ್ಟಿದ್ದು, ನಮ್ಮ ಹಣ ವ್ಯರ್ಥ ಆಗುತ್ತದೆಂದು ರೈತರು ಭಯಭೀತರಾಗಿದ್ದಾರೆ. ತಕ್ಷಣವೇ ಜಿಲ್ಲಾಡಳಿತ ಮಧ್ಯೆಪ್ರವೇಶಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಬೆಳೆ ವಿಮೆ ಪರಿಹಾರ ಸಿಗುವಂತಾಗಬೇಕುʼ ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರೈತರ ಸಂಘಟನೆಯ ಹಲವಾರು ಮುಖಂಡರು ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.

ಇದನ್ನೂ ಓದಿ : ಕಲಬುರಗಿ | ನಿರಂತರ ಮಳೆ : ಮನೆ ಗೋಡೆ ಕುಸಿದು ಮಹಿಳೆ ಸಾವು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...