ಕಲಬುರಗಿ | ಪ್ರಚೋದನಾಕಾರಿ ಹೇಳಿಕೆ: ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲು

Date:

Advertisements

ಮುಸ್ಲಿಂ ಸಮುದಾಯದ ಕುರಿತು ಅವಹೇಳನಾಕಾರಿ ಹೇಳಿಕೆ ನೀಡಿರುವ ಆರೋಪದ ಮೇರೆಗೆ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಲಬುರಗಿ ನಗರದ ರೋಜಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಿಸಲಾಗಿದೆ.

ಖಿದ್ಮತ್ ಎ ಮಿಲ್ಲತ್ ಕಮಿಟಿಯ ಅಧ್ಯಕ್ಷರಾದ ಖಮರ್‌ ಜುನೈದ್ ಖುರೇಷಿ ಅವರು ನೀಡಿದ ದೂರಿನ ಮೇರೆಗೆ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

‘ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂಪಾಯಿಗಳ ನಗದು ಪ್ರೋತ್ಸಾಹ ಧನ ನೀಡಲಾಗುವುದು’ ಎಂದು ಆಗಸ್ಟ್ 11ರಂದು ಕೊಪ್ಪಳದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಾರ್ವಜನಿಕವಾಗಿ ಘೋಷಣೆ ಮಾಡಿದ್ದರು. ಈ ಹೇಳಿಕೆಯು ಒಂದು ಸಮುದಾಯವನ್ನು ಗುರಿಯಾಗಿಸಿ ಪ್ರಚೋದಿಸುವ ಕೆಲಸ ಮಾಡಿದ್ದಾರೆಂದು ಅವರು ಆರೋಪಿಸಿ ಶಾಸಕ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ತಮಿಳರ ವಿರೋಧಿ ಆರೋಪ: ರಾಜ್ಯಪಾಲ ಆರ್ ಎನ್ ರವಿ ಕೈಯಿಂದ ಪದವಿ ಸ್ವೀಕರಿಸಲು ನಿರಾಕರಿಸಿದ ಪಿಎಚ್‌ಡಿ ವಿದ್ಯಾರ್ಥಿನಿ!

ಈ ದೂರಿನನ್ವಯ ಕಲಬುರಗಿ ನಗರದ ರೋಜಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಉಡುಪಿ | ಬ್ರಹ್ಮಾವರ ಪೊಲೀಸ್ ಠಾಣೆಯ 500ಮೀ ವಾಪ್ತಿಯಲ್ಲಿ ಆ.22ರವರೆಗೆ ನಿಷೇಧಾಜ್ಞೆ: ಜಿಲ್ಲಾಧಿಕಾರಿ

ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 177/2025ಕ್ಕೆ ಸಂಬಂಧಿಸಿದಂತೆ ಸಕ್ರಿಯ ಹಿಂದೂ...

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

Download Eedina App Android / iOS

X