ಕಲಬುರಗಿ | ದಾರಿದೀಪ ದುರಸ್ತಿಗೆ ಸಾರ್ವಜನಿಕರ ಒತ್ತಾಯ

Date:

ನಗರದ ಹೊರವಲಯದ ರಾಮಮಂದಿರ ವೃತ್ತದಿಂದ ಕೋಟನೂರ (ಡಿ) ಗ್ರಾಮದ ಡಾ. ಬಾಬಾಸಾಹೇಬ ಅಂಬೇಡ್ಕರ್ ಪ್ರತಿಮೆಯವರೆಗೆ ಇರುವ ರಸ್ತೆ ಬದಿಯ ದಾರಿದೀಪಗಳನ್ನು ತುರ್ತಾಗಿ ದುರಸ್ತಿಪಡಿಸಿ ಮರು ಕಾರ್ಯಾರಂಭಗೊಳಿಸುವಂತೆ ಆಗ್ರಹಿಸಿ ಸಾರ್ವಜನಿಕರು ಹಾಗೂ ಗ್ರಾಮಸ್ಥರು ಶನಿವಾರ ಪಾಲಿಕೆ ಆಯುಕ್ತರು ಮತ್ತು ಪೊಲೀಸ್ ಇಲಾಖೆಯ ಆಯುಕ್ತರಿಗೆ ಪ್ರತ್ಯೇಕ ಮನವಿ ಸಲ್ಲಿಸಿದರು.

- Advertisement -

ಮನವಿ ಸಲ್ಲಿಸಿ ಮಾತನಾಡಿ ಮುಖಂಡರು ಈ ಮಾರ್ಗದಲ್ಲಿ ಸುಮಾರು 32 ದಾರಿದೀಪ ಕಂಬಗಳಿದ್ದು, ಬಹುತೇಕ ದೀಪಗಳು ಹಲವು ದಿನಗಳಿಂದ ಬೆಳಗುತ್ತಿಲ್ಲ. ಪರಿಣಾಮ ರಾತ್ರಿ ವೇಳೆ ಸಂಚರಿಸುವ ಸಾರ್ವಜನಿಕರು, ಮಹಿಳೆಯರು, ವಿದ್ಯಾರ್ಥಿಗಳು, ಕಾರ್ಮಿಕರು ಹಾಗೂ ವಯೋವೃದ್ಧರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಖಣದಾಳ, ಇಟಿಗಾ, ಸಿರನೂರು, ಪಣೆಗಾಂವ, ಸೀತನೂರು, ನಂದಿಕೂರು ಹಾಗೂ ಕೋಟನೂರ (ಡಿ) ಸೇರಿದಂತೆ ಹಲವು ಗ್ರಾಮಗಳ ಸಾವಿರಾರು ಜನರು ಪ್ರತಿದಿನ ಇದೇ ರಸ್ತೆಯನ್ನು ಬಳಸುತ್ತಿದ್ದಾರೆ. ರಾತ್ರಿ ಸಮಯದಲ್ಲಿ ಬಸ್‌ಗಾಗಿ ಕಾಯುವ ಪ್ರಯಾಣಿಕರು ಕತ್ತಲೆಯಲ್ಲೇ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಮಹಿಳೆಯರಲ್ಲಿ ಆತಂಕ ಹೆಚ್ಚಾಗಿದೆ ಎಂದು ದೂರಲಾಗಿದೆ.

ದಾರಿದೀಪಗಳು ಕಾರ್ಯನಿರ್ವಹಿಸದ ಕಾರಣ ಕಳ್ಳತನ, ದರೋಡೆ ಹಾಗೂ ಸಮಾಜಘಾತುಕ ಚಟುವಟಿಕೆಗಳಿಗೆ ಅವಕಾಶವಾಗುವ ಸಾಧ್ಯತೆ ಇದೆ. ಅಲ್ಲದೆ ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆಗೆ ತೆರಳುವುದು ಸೇರಿದಂತೆ ದೈನಂದಿನ ಸಂಚಾರಕ್ಕೂ ಸಾರ್ವಜನಿಕರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ರಾಮಮಂದಿರ ವೃತ್ತದಿಂದ ಕೋಟನೂರ (ಡಿ) ಗ್ರಾಮದವರೆಗೆ ಇರುವ ಎಲ್ಲಾ ದಾರಿದೀಪಗಳನ್ನು ಕೂಡಲೇ ದುರಸ್ತಿಪಡಿಸಿ ವಿದ್ಯುತ್ ವ್ಯವಸ್ಥೆಯನ್ನು ಪುನರಾರಂಭಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | 55 ವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ: ನಿರ್ಲಕ್ಷ್ಯಕ್ಕೆ ಇಬ್ಬರು ಅಧಿಕಾರಿಗಳ ಅಮಾನತು

ಬೇಡಿಕೆಯನ್ನು ಶೀಘ್ರವಾಗಿ ಈಡೇರಿಸದಿದ್ದರೆ ಸಾರ್ವಜನಿಕರ ಹಿತದೃಷ್ಟಿಯಿಂದ ರಾಮಮಂದಿರ ವೃತ್ತದಲ್ಲಿ ಪ್ರತಿಭಟನೆ ಹಾಗೂ ರಸ್ತೆ ತಡೆ ಹೋರಾಟ ನಡೆಸಲಾಗುವುದು. ಇದಕ್ಕೆ ಸಂಬಂಧಿಸಿದ ಅಧಿಕಾರಿಗಳೇ ಹೊಣೆ ಎಂದು ಸಾರ್ವಜನಿಕರು ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಪವನಕುಮಾರ್ ವಳಕೇರಿ, ರವೀಂದ್ರ ವಿಭೂತಿ, ಸಂಗಮೇಶ ನಾಗನಳ್ಳಿ, ಮಲ್ಲಿನಾಥ ನಾಗನಳ್ಳಿ, ಲೋಹಿತ್ ವಿಶ್ವಕರ್ಮ, ವೈಭವ ಬಬಲಾದ, ಹರ್ಷಾದ ಖಾನ್, ಚಂದ್ರಕಾಂತ, ಶರಣಬಸಪ್ಪ ಹೂಗರ್, ವೀರಣ್ಣಗೌಡ ಪಾಟೀಲ್ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ದಲಿತ ಸಭೆಯೋ, ಚಹಾ, ಫೋಟೋ ಕೂಟವೋ? ಅಧಿಕಾರಿಗಳ ವಿರುದ್ಧ ವಿಶ್ವ ನಾಟೇಕಾರ್ ಕಿಡಿ

ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆ, ಸಾಮಾಜಿಕ ಅಸ್ಪೃಶ್ಯತೆ, ಭೂಮಿ ಹಾಗೂ ಮೂಲಭೂತ...

​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ...

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...