ಕಲಬುರಗಿ | ಆಧಾರ್ ತಿದ್ದುಪಡಿಗೆ ಜನರ ಪರದಾಟ: ಹೆಚ್ಚುವರಿ ಕೇಂದ್ರ ತೆರೆಯಲು ಆಗ್ರಹ

Date:

ಜೇವರ್ಗಿ ಹಾಗೂ ಯಡ್ರಾಮಿ ಅವಳಿ ತಾಲೂಕಿನ ಗ್ರಾಮೀಣ ಪ್ರದೇಶಗಳ ಜನರು ಆಧಾರ್ ಕಾರ್ಡ್‌ನಲ್ಲಿರುವ ಲೋಪದೋಷಗಳನ್ನು ಸರಿಪಡಿಸಿಕೊಳ್ಳಲು ಜೇವರ್ಗಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ಹೆಚ್ಚುವರಿ ಆಧಾರ್ ತಿದ್ದುಪಡಿ ಕೇಂದ್ರಗಳನ್ನು ಆರಂಭಿಸಬೇಕು ಎಂದು ಸಾಮಾಜಿಕ ಹೋರಾಟಗಾರ ಸಿದ್ದರಾಮ ಕಟ್ಟಿ ಆಗ್ರಹಿಸಿದ್ದಾರೆ.

- Advertisement -

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು ‘ಜೇವರ್ಗಿ ವಿಧಾನಸೌಧದ ಕೆಳ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಧಾರ್ ಕೇಂದ್ರಕ್ಕೆ ಜೇವರ್ಗಿ ಹಾಗೂ ಯಡ್ರಾಮಿ ತಾಲೂಕಿನ ವಿವಿಧ ಗ್ರಾಮಗಳಿಂದ ಪ್ರತಿದಿನ ನೂರಾರು ಮಹಿಳೆಯರು, ಮಕ್ಕಳು, ವಿದ್ಯಾರ್ಥಿಗಳು ಹಾಗೂ ಪಾಲಕರು ಆಗಮಿಸುತ್ತಿದ್ದಾರೆ. ಆದರೆ ಎರಡು ತಾಲೂಕುಗಳಿಗೆ ಕೇವಲ ಎರಡು ಕೇಂದ್ರಗಳಿರುವುದರಿಂದ ತಿದ್ದುಪಡಿಗಾಗಿ ಜನರು ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ’ ಎದುರಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ಈ ದಿನ ಕವಿತೆ | ಎರಡು ದೀಪಗಳು- ಅಲಿ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಉರ್ದು ಕವಿ ಅಲಿ ಸರ್ದಾರ್ ಜಾಫ್ರಿಯವರ ಕವನವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ . ಕತ್ತಲ ಗವಿಯೊಳಗಿಂದರೆಕ್ಕೆಗಳು ಫಡಫಡಿಸುವ ಸದ್ದು ಕೇಳುವುದು.ನಿರ್ದಯಿ ಗಾಳಿಯುಮಂಜಿನ ಮೇಲೆ...

‘ಆಧಾರ್ ತಿದ್ದುಪಡಿ ಒಂದೇ ದಿನದಲ್ಲಿ ಪೂರ್ಣಗೊಳ್ಳದ ಸಂದರ್ಭಗಳಲ್ಲಿ ಜನರು ಎರಡು–ಮೂರು ದಿನಗಳ ಕಾಲ ಸತತವಾಗಿ ಜೇವರ್ಗಿಗೆ ಬರುವಂತಾಗಿದೆ. ಇದರಿಂದ ವಿದ್ಯಾರ್ಥಿಗಳು ಶಾಲಾ–ಕಾಲೇಜುಗಳಿಗೆ ಗೈರಾಗಬೇಕಾಗಿದ್ದು, ಪಾಲಕರು ತಮ್ಮ ದಿನನಿತ್ಯದ ಕೆಲಸಗಳನ್ನು ಬದಿಗೊತ್ತಿ ಮಕ್ಕಳೊಂದಿಗೆ ಕೇಂದ್ರಕ್ಕೆ ಬರುವ ಅನಿವಾರ್ಯತೆ ಎದುರಾಗಿದೆ’ ಎಂದು ತಿಳಿಸಿದ್ದಾರೆ.

‘ಜೇವರ್ಗಿ ಪಟ್ಟಣದ ಎಸ್‌ಬಿಐ ಬ್ಯಾಂಕ್ ಎದುರು ಖಾಸಗಿ ಕೇಂದ್ರವೊಂದರಲ್ಲಿ ಆಧಾರ್ ತಿದ್ದುಪಡಿ ಮಾಡಲಾಗುತ್ತಿದ್ದು, ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳಿವೆ. ಸರ್ಕಾರಿ ಕೇಂದ್ರಗಳಲ್ಲಿ ಜನದಟ್ಟಣೆ ಹೆಚ್ಚಿರುವುದರಿಂದ ಖಾಸಗಿ ಕೇಂದ್ರಗಳ ಮೊರೆ ಹೋಗಬೇಕಾದ ಸ್ಥಿತಿ ಸಾರ್ವಜನಿಕರಿಗೆ ಎದುರಾಗಿದೆ’ ಎಂದು ಅವರು ಹೇಳಿದ್ದಾರೆ.

‘ಯಡ್ರಾಮಿ ತಾಲೂಕಿನಲ್ಲಿ ಇಜೇರಿ, ಅರಳಗುಂಡಗಿ ಹಾಗೂ ಮಳ್ಳಿ ಗ್ರಾಮಗಳಲ್ಲಿ ಆಧಾರ್ ತಿದ್ದುಪಡಿ ಕೇಂದ್ರಗಳನ್ನು ಆರಂಭಿಸಬೇಕು. ಜೇವರ್ಗಿ ತಾಲೂಕಿನಲ್ಲಿ ನೆಲೋಗಿ, ಆಂದೋಲ, ಮಂದೇವಾಲ ಹಾಗೂ ಕೋಲ್ಕೂರು ಹೋಬಳಿಗಳಿಗೆ ಒಂದರಂತೆ ಕೇಂದ್ರ ಸ್ಥಾಪಿಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

‘ಜನರ ಸಮಸ್ಯೆಯನ್ನು ಜೇವರ್ಗಿ–ಯಡ್ರಾಮಿ ಕ್ಷೇತ್ರದ ಶಾಸಕರು ಹಾಗೂ ನೂತನ ಸಚಿವ ಡಾ. ಅಜಯ್ ಸಿಂಗ್ ಮತ್ತು ಎರಡೂ ತಾಲೂಕುಗಳ ತಹಸೀಲ್ದಾರರು ಗಂಭೀರವಾಗಿ ಪರಿಗಣಿಸಿ, ತಕ್ಷಣ ಹೆಚ್ಚುವರಿ ಕೇಂದ್ರಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಬೇಕು. ಇದರಿಂದ ಗ್ರಾಮೀಣ ಜನರು ಆಧಾರ್ ತಿದ್ದುಪಡಿಗಾಗಿ ಪದೇಪದೇ ಜೇವರ್ಗಿಗೆ ಆಗಮಿಸುವ ತೊಂದರೆ ತಪ್ಪಲಿದೆ’ ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಯಾದಗಿರಿ | ದಲಿತ ಸಭೆಯೋ, ಚಹಾ, ಫೋಟೋ ಕೂಟವೋ? ಅಧಿಕಾರಿಗಳ ವಿರುದ್ಧ ವಿಶ್ವ ನಾಟೇಕಾರ್ ಕಿಡಿ

‘ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಿ ಹೆಚ್ಚುವರಿ ಕೇಂದ್ರಗಳನ್ನು ಸ್ಥಾಪಿಸದಿದ್ದರೆ, ಸಾರ್ವಜನಿಕರೊಂದಿಗೆ ತಹಸೀಲ್ದಾರ್ ಕಚೇರಿ ಎದುರು ಹೋರಾಟ ನಡೆಸಲಾಗುವುದು’ ಎಂದು ಸಿದ್ದರಾಮ ಕಟ್ಟಿ ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಪಾರ್ಶ್ವವಾಯು ಲಕ್ಷಣ ಕಂಡರೆ ವಿಳಂಬ ಬೇಡ, ತಕ್ಷಣ ಆಸ್ಪತ್ರೆಗೆ ದಾಖಲಿಸಿ: ಡಾ. ಶಿವಾನಂದ ಮಾಸ್ತಿಹೋಳಿ

ಪಾರ್ಶ್ವವಾಯು ಸಂಭವಿಸಿದಾಗ ಪ್ರತಿಯೊಂದು ನಿಮಿಷವೂ ಅತ್ಯಮೂಲ್ಯವಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿ ಸೂಕ್ತ...

ರಸ್ತೆಯೋ, ಕೆಸರುಗದ್ದೆಯೋ? ಗುಂಡಿ ಬಿದ್ದ ರಸ್ತೆಯಲ್ಲಿ ಕುಚಿಗೇರಿ ಗ್ರಾಮಸ್ಥರ ನಿತ್ಯ ಯಾತನೆ

ಮಲೆನಾಡಿನ ಹಸಿರು ಸೌಂದರ್ಯಕ್ಕೆ ಮನಸೋತು ಪ್ರವಾಸಿಗರು ತಂಡೋಪತಂಡವಾಗಿ ಹರಿದುಬರುತ್ತಿದ್ದರೆ, ಇತ್ತ ಸೌಂದರ್ಯದ...

ಬಾಗಲಕೋಟೆ | ರಾಷ್ಟ್ರೀಯ ಏಕತಾ ದಿನಾಚರಣೆ; ಜಿಲ್ಲಾಧಿಕಾರಿಯಿಂದ ಪ್ರತಿಜ್ಞಾವಿಧಿ ಬೋಧನೆ

ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಶನಿವಾರ ರಾಷ್ಟ್ರೀಯ...

ಗದಗ | ಕಲೆಯ ಮೂಲ ಸತ್ವ ಉಳಿಸಿ ಬೆಳೆಸುವುದು ಕಲಾವಿದರ ಜವಾಬ್ದಾರಿ: ಪ.ಸ.ಕುಮಾರ

"ಕಲಾವಿದರು ತಮ್ಮ ಸೃಜನಶೀಲತೆಯನ್ನು ಯಾವುದೇ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಮೊರೆ...