ಕಲಬುರಗಿ | ಹಳೆಯ ದ್ವೇಷಕ್ಕೆ ಪಂಪ್ ಆಪರೇಟರ್ ಬಲಿ; ಚಾಕು ಇರಿದು ಬರ್ಬರ ಹತ್ಯೆ

Date:

ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಪಂಪ್ ಆಪರೇಟರ್‌ ಒಬ್ಬರ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ಆಳಂದ ತಾಲೂಕಿನ ಮಾಡಿಯಾಳ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ.

- Advertisement -

ಮಾಡಿಯಾಳ ಗ್ರಾಮ ಪಂಚಾಯಿತಿಯಲ್ಲಿ ಪಂಪ್ ಆಪರೇಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ ಹಣಮಂತ ನಿಂಬಾಳ (37) ಹತ್ಯೆಯಾದವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಸಂತೋಷ ಅವರ ಸಹೋದರ ಶ್ರೀಧರ ಹಾಗೂ ಗ್ರಾಮದ ಮಂಜುನಾಥ ಮತ್ತು ಕಲ್ಲಪ್ಪ ನಡುವೆ ಈ ಹಿಂದೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಈ ವಿಚಾರದಲ್ಲಿ ಸಂತೋಷ ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಬಗೆಹರಿಸಿದ್ದರು. ಆದರೆ, ಈ ಘಟನೆಗೆ ಸಂಬಂಧಿಸಿದ ವೈಷಮ್ಯ ಮುಂದುವರಿದಿದ್ದು, ಭಾನುವಾರ ರಾತ್ರಿ ಸಂತೋಷ ಅವರ ಮೇಲೆ ಮಂಜುನಾಥ, ಕಲ್ಲಪ್ಪ ಹಾಗೂ ಕಲಬುರಗಿ ನಗರದ ಭೀಮಾಶಂಕರ ಸೇರಿದಂತೆ ಕೆಲವರು ಚಾಕುವಿನಿಂದ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡ ಸಂತೋಷ ಮೃತಪಟ್ಟಿದ್ದಾರೆ. ಘಟನೆ ತಿಳಿದು ಸ್ಥಳಕ್ಕೆ ತೆರಳಿದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಶವಪರೀಕ್ಷೆಗೆ ರವಾನಿಸಿದ್ದಾರೆ.

Advertisements
Advertisements

ಇದನ್ನು ಓದಿದ್ದೀರಾ? ಕಲಬುರಗಿ | ನಾಪತ್ತೆಯಾಗಿದ್ದ ಹೋಟೆಲ್‌ ವ್ಯಾಪಾರಿ ಶವವಾಗಿ ಪತ್ತೆ; ಕೊಲೆ ಶಂಕೆ

ಹತ್ಯೆಯ ಹಿಂದಿನ ನಿಖರ ಕಾರಣ, ದಾಳಿಯಲ್ಲಿ ಭಾಗಿಯಾಗಿರುವವರ ಸಂಖ್ಯೆ ಹಾಗೂ ಆರೋಪಿಗಳ ಪಾತ್ರದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಗದಗ | ಕರ್ನಾಟಕ ಏಕೀಕರಣಕ್ಕಾಗಿ ನಾರಾಯಣರಾವ್ ಕೋಡುಗೆ ಅಪಾರ: ಹನುಮಂತಪ್ಪ ಅಬ್ಬಿಗೇರಿ

"ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ....

ಕಾರವಾರ | ಚಿತ್ತಾಕುಲದಲ್ಲಿ ಆತಂಕ ಮೂಡಿಸಿದ್ದ ಚಿರತೆ ಸುರಕ್ಷಿತವಾಗಿ ಸೆರೆ

ಕಾರವಾರ: ಗೋಪಶಿಟ್ಟಾ ವಲಯದ ಚಿತ್ತಾಕುಲ ಶಹರ ಶಾಖೆಯ ಹಳೇಭಾಗ ಗ್ರಾಮದಲ್ಲಿ ಕಳೆದ...