ಕಲಬುರಗಿ | ರೈತರ ಆತ್ಮಹತ್ಯೆಗಳನ್ನು ತಡೆಗಟ್ಟುವಂತೆ ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ

Date:

Advertisements

ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ರೈತರ ಆತ್ಮಹತ್ಯೆಗಳನ್ನು ತಡೆಗಟ್ಟುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಲಬುರಗಿ ವತಿಯಿಂದ ಜಿಲ್ಲಾಧಿಕಾರಿಗಳು ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿ, ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ರಾಜ್ಯದ ಜನತೆ ಬಹಳ ನಿರೀಕ್ಷೆಯೊಂದಿಗೆ ಕೋಮುವಾದಿ, ಪ್ರಜಾಪ್ರಭುತ್ವ ವಿರೋಧಿ ಭ್ರಷ್ಟಾಚಾರದಲ್ಲಿ ಮುಳುಗಿದ್ದ ಬಿ.ಜೆ.ಪಿ ಸರ್ಕಾರವನ್ನು ಕಿತ್ತೊಗೆದು ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದರೂ ಕೂಡ ಯಥಾಸ್ಥಿತಿ ಆಡಳಿತ ಮುಂದುವರೆಯುತ್ತಿದೆ. ಈ ಸರ್ಕಾರ ಬಂದು ಒಂದು ವರ್ಷ ಅವಧಿಯಲ್ಲೇ ಹಗರಣಗಳ ಆರೋಪಕ್ಕೆ ಒಳಗಾಗಿದೆ. ರೈತರ ಆತ್ಮಹತ್ಯೆ ಸರಣಿ ಮುಂದುವರೆಯುತ್ತಲೇ ಇದೆ. ಈ ಸರ್ಕಾರಕ್ಕೆ ಎಚ್ಚರಿಕೆ ನೀಡಿ ರೈತಪರ ನೀತಿಗಳನ್ನು ರೂಪಿಸಲು ರೈತರ ಆತ್ಮಹತ್ಯೆ ತಡೆಗಟ್ಟಲು ಒತ್ತಾಯಿಸಿ ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ನಾಗಣ್ಣ ತಂಬೆ, ಗೌರಮ್ಮ ಆರ್,ಚಿಂತಕೋಟ್ಟಿ, ಸಿದ್ದು ವೇದಶೆಟ್ಟಿ, ಸಿದ್ಧರೋಡ, ಶರಣಗೌಡ ಪಾಟೀಲ್, ಕರೆಪ್ಪ, ವಿಜಯಕುಮಾರ ಇನ್ನಿತರರು ಉಪಸ್ಥಿತರಿದ್ದರು.

Advertisements

ಹಕ್ಕೊತ್ತಾಯಗಳು

  1. ರೈತರ ಕೃಷಿ ಪಂಪ್‌ಸೆಟ್‌ಗೆ ವಿದ್ಯುತ್ ಸಂಪರ್ಕ ಪಡೆಯಲು ಸ್ವತಃ ವೆಚ್ಚವನ್ನು ಭರಿಸಬೇಕೆಂದು ಸರ್ಕಾರ ತೀರ್ಮಾನಿಸಿದೆ. ಈ ತೀರ್ಮಾನವು ರೈತರಿಗೆ ಹೊರೆಯಾಗಿದ್ದು 2-3 ಲಕ್ಷ ರೂಪಾಯಿ ದೊಡ್ಡ ಮೊತ್ತದ ವೆಚ್ಚವನ್ನು ರೈತರು ಭರಿಸಲು ಸಾಧ್ಯವಾಗುವುದಿಲ್ಲ. ಸರ್ಕಾರ ಈ ತೀರ್ಮಾನವನ್ನು ಹಿಂಪಡೆದು ಹಿಂದಿನ ಪದ್ಧತಿಯನ್ನು ಮುಂದುವರೆಸಬೇಕು. ಕರ ನಿರಾಕರಣೆ ಚಳುವಳಿಯಲ್ಲಿ ರೈತ ಕುಟುಂಬದವರು ಉಳಿಸಿಕೊಂಡಿರುವ ಗೃಹ ವಿದ್ಯುತ್ ಬಾಕಿಯನ್ನು ಮನ್ನಾ ಮಾಡಬೇಕು.
  2. ಕಳೆದ ವರ್ಷ ಏಪ್ರಿಲ್ ನಿಂದ ಇದುವರೆಗೆ 1182 ರೈತರ ಆತ್ಮಹತ್ಯೆಗೆ ಒಳಗಾಗಿದ್ದಾರೆ. ಈ ಆತ್ಮಹತ್ಯೆಗಳಲ್ಲಿ ಯುವಕರು ಹೆಚ್ಚು ಒಳಗಾಗಿದ್ದು ಆತಂಕಕ್ಕೀಡು ಮಾಡಿದ್ದು, ಸರ್ಕಾರ ಆತ್ಮಹತ್ಯೆ ತಡೆಗಟ್ಟಲು ರೈತ ಪರ ಕಾರ್ಯಕ್ರಮಗಳನ್ನು ರೂಪಿಸಿ ರೈತ ಸಮುದಾಯಕ್ಕೆ ಆತ್ಮಸ್ಥೆರ್ಯ ತುಂಬಬೇಕು ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಕೃಷಿ ಬೆಲೆ ಆಯೋಗವನ್ನು ಸಬಲೀಕರಣಗೊಳಿಸಬೇಕು.
  3. ರಾಜ್ಯ ಸರ್ಕಾರವೇ ಕೃಷಿ ಉತ್ಪನ್ನಗಳಿಗೆ ಎಂ.ಎಸ್.ಪಿ ನಿಗದಿಪಡಿಸಿ ಖರೀದಿಸಬೇಕು. ಹಿಂದೆಂದು ಕಂಡರಿಯದ ಬರಗಾಲವನ್ನು ರಾಜ್ಯ ಎದುರಿಸಿದೆ. ಇಂತಹ ಸಂದರ್ಭದಲ್ಲಿ ಬ್ಯಾಂಕುಗಳು ಸಾಲಬಾಕಿ ವಸೂಲಿಗಾಗಿ ರೈತರಿಗೆ ಕಿರುಕುಳ ನೀಡುತ್ತಿವೆ ಇದನ್ನು ತಪ್ಪಿಸಲು ರೈತರ ರಕ್ಷಣೆಗೆ ಬರಬೇಕು.
  4. ರೈತರ ಎಲ್ಲಾ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯನ್ನು ವಿಸ್ತರಿಸಿ ಗ್ರಾಮ ಮಟ್ಟದಲ್ಲಿ ಬೆಳೆ ಹಾನಿ ನಿರ್ಧರಿಸಬೇಕು ವಿಮಾ ಕಂಪೆನಿಗಳು ಉಳಿಸಿಕೊಂಡಿರುವ ಬಾಕಿಯನ್ನು ರೈತರ ಖಾತೆಗೆ ಕೂಡಲೇ ಹಾಕಬೇಕು.
  5. ಫಸಲು ಪಹಣಿ ದುರಸ್ಥಿ, ಪಕ್ಕಾಪೋಡು, ಹದ್ದುಬಸ್ತು ಶುಲ್ಕ ದುಬಾರಿಯಾಗಿದ್ದು ಅದನ್ನು ಕೂಡಲೇ ಇಳಿಸಬೇಕು.
  6. ಬರ ಪರಿಹಾರದ ಹಣ ವಿಮಾ ಪರಿಹಾರದ ಹಣವನ್ನು ಸಹ ಬ್ಯಾಂಕ್‌ನವರು ಸಾಲಕ್ಕಾಗಿ ಜಮೆ ಮಾಡಿಕೊಳ್ಳುತ್ತಿದ್ದಾರೆ ಬ್ಯಾಂಕ್‌ನವರಿಗೆ ಸೂಕ್ತ ನಿರ್ದೇಶನ ನೀಡಿ ಇದನ್ನು ತಪ್ಪಿಸಬೇಕು.
  7. ಅರಣ್ಯ ಭೂಮಿ ಸಾಗುವಳಿ ಮಾಡುತ್ತಿರುವ ರೈತರಿಗೆ ಅರಣ್ಯ ಇಲಾಖೆಯ ಕಿರುಕುಳವನ್ನು ತಪ್ಪಿಸಿ ಸಾಗುವಳಿ ಮಾಡುತ್ತಿರುವ ಎಲ್ಲಾ ರೈತರಿಗೆ ಪಟ್ಟಾ ನೀಡಬೇಕು.
  8. ಕಬ್ಬು ಬೆಳೆಗಾರರಿಗೆ ಕಾರ್ಖಾನೆಗಳು ಟನ್ ಒಂದಕ್ಕೆ 150/- ರೂ ಪಾವತಿಸಬೇಕೆಂದು ಹಿಂದಿನ ಸರ್ಕಾರ ತೀರ್ಮಾನಿಸಿದ್ದು ಇದಕ್ಕಿರುವ ತಾಂತ್ರಿಕ ತೊಂದರೆಗಳನ್ನು ಕೂಡಲೇ ನಿವಾರಿಸಿ ರೈತರಿಗೆ ಪಾವತಿಸಲು ಕ್ರಮ ಕೈಗೊಳ್ಳಬೇಕು ರಾಜ್ಯ ಸರ್ಕಾರ ಎಂ.ಎಸ್.ಪಿ ಘೋಷಿಸಬೇಕು.
  9. ಸರ್ಕಾರ ಮಾತಿನಂತೆ ಭೂಸ್ವಾಧೀನ ತಿದ್ದುಪಡಿ ಕಾಯ್ದೆ ಮತ್ತು ಗೋಹತ್ಯೆ ನಿಷೇಧ ಕಾಯ್ದೆಯನ್ನು ಕೂಡಲೇ ಹಿಂಪಡೆಯಬೇಕು.
  10. ಯಾದಗಿರಿ ಜಿಲ್ಲೆಯಾದ್ಯಂತ ಬರಪರಿಹಾರ ಸಮರ್ಪಕವಾಗಿ ವಿತರಿಸದೇ ಇದ್ದರೆ ಮುಂದಿನ ಯಾವುದೇ ಕೆಟ್ಟ ಪರಿಣಾಮಕ್ಕೆ ಜಿಲ್ಲಾಡಳಿತವೇ ನೇರ ಹೊಣೆ.
  11. ರೈತರಿಗೆ ಬರವಸೆ ನೀಡಿದಂತೆ ಸತತವಾಗಿ 7 ಗಂಟೆ ನೀಡಬೇಕಾಗಿರುವ ವಿದ್ಯುತ್‌ನ್ನು ಹಗಲು ಹೊತ್ತಿನಲ್ಲಿ ಕೊಡುವಂತೆ ಒತ್ತಾಯ.
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

Download Eedina App Android / iOS

X