ಕಲಬುರಗಿ | ಜೀ ಕನ್ನಡ ಸರಿಗಪಮದಲ್ಲಿ ಅಂಬೇಡ್ಕರ್‌ ಹಾಡು ಸರಣಿ ಆಯೋಜಿಸಲು ಆಗ್ರಹ

Date:

ಎಪ್ರಿಲ್ 14ರಂದು ನಡೆಯಲಿರುವ ಡಾ.ಬಿ.ಆರ್ ಅಂಬೇಡ್ಕರ್ ಅವರ ಜಯಂತಿ ಪ್ರಯುಕ್ತ ಜೀ ಕನ್ನಡ ವಾಹಿನಿಯ ಸರಿಗಮಪ ಕಾರ್ಯಕ್ರಮದಲ್ಲಿ ಬಾಬಾ ಸಾಹೇಬ್‌ ಅಂಬೇಡ್ಕರ್‌ ಹಾಡು ಸರಣಿ ಏರ್ಪಡಿಸಬೇಕೆಂದು ಕಲಬುರಗಿಯ ಉಪನ್ಯಾಸಕ ಪಂಡಿತ ಬಿ.ಮದಗುಣಕಿ ಮನವಿ ಮಾಡಿದ್ದಾರೆ.

- Advertisement -

ಈ ಸಂಬಂಧ ಜೀ ಕನ್ನಡ ವಾಹಿನಿ ಮುಖ್ಯಸ್ಥ ರಾಘವೇಂದ್ರ ಹುಣಸೂರ ಅವರಿಗೆ ಪತ್ರ ಬರೆದಿರುವ ಅವರು, ʼಜೀ ಕನ್ನಡ ವಾಹಿನಿಯಲ್ಲಿ ಬರುವ ಸರಿಗಮಪ ಕಾರ್ಯಕ್ರಮ ವೀಕ್ಷಕ ಅಭಿಮಾನಿಯಾಗಿದ್ದು, ಈ ಹಿಂದೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾದ ಡಾ.ಅಂಬೇಡ್ಕರ್ ಅವರ ಜೀವನಾಧಾರಿತ ʼಮಹಾನಾಯಕʼ ಧಾರವಾಹಿ ಕೋಟ್ಯಾಂತರ ವೀಕ್ಷಕರ ಮೆಚ್ಚುಗೆಗೆ ಪಾತ್ರವಾಗಿ ಕಿರುತೆರೆಯಲ್ಲಿಯೇ ಹೊಸ ದಾಖಲೆ ಸೃಷ್ಟಿಸಿತುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ʼಈಗ ಜೀ ಕನ್ನಡ ವಾಹಿನಿಯಲ್ಲಿ ಜರುಗುತ್ತಿರುವ ಸರಿಗಮಪ ಶೋನಲ್ಲಿ ರಾಜ್ಯದ ಎಲ್ಲಾ ಸಮುದಾಯದ ಹೊಸ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿದ ಶ್ರೇಯಸ್ಸು ತಮ್ಮದಾಗಿದೆ. ಹೀಗಾಗಿ ಸಾವಿರಾರು ವರ್ಷಗಳಿಂದ ಜಾತಿ, ಅನ್ಯಾಯ, ಅಸಮಾನತೆ, ಅಸ್ಪೃಶ್ಯತೆ ಬೇರೂರಿದ್ದ ಸಮಾಜದಲ್ಲಿ ಶ್ರೇಷ್ಠ ಸಂವಿಧಾನ ರಚಿಸುವ ಮುಖಾಂತರ ಮಾನವೀಯ ನೆಲೆಯಲ್ಲಿ ಸಾಮಾಜಿಕ ಸಮಾನತೆ ನೀಡಿದ ಬಾಬಾ ಸಾಹೇಬ್‌ ಅವರ ಚಿಂತನೆಗಳು ಇಂದಿನ ಸಮಾಜಕ್ಕೆ ಮುಟ್ಟಿಸುವುದು ಅತ್ಯಂತ ಅವಶ್ಯಕವಾಗಿದೆʼ ಎಂದರು.

ಈ ಸುದ್ದಿ ಓದಿದ್ದೀರಾ? ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ ಗರ್ಭಪಾತ ಮಾಡಿಸಿದ ದುರುಳ ಪೊಲೀಸರ ಬಲೆಗೆ

ʼಸರಿಗಮಪ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಕುರಿತಾದ ಜನಪದ, ಕ್ರಾಂತಿಗೀತೆಗಳು ಲಭ್ಯವಿದ್ದು, ಏಪ್ರಿಲ್‌ ತಿಂಗಳಲ್ಲಿ ಡಾ.ಅಂಬೇಡ್ಕರ್‌ ಅವರ ಜಯಂತಿ ಆಚರಣೆಯ ವೇಳೆ ಜೀ ಕನ್ನಡ ವಾಹಿನಿಯ ಸರಿಗಮಪ ಶೋನಲ್ಲಿ ʼಡಾ.ಬಿ.ಆರ್.ಅಂಬೇಡ್ಕರ್ ಗೀತೆಗಳುʼ ಎಂಬ ಹೆಸರಿನಲ್ಲಿ ಹಾಡು ಸರಣಿ ಏರ್ಪಡಿಸಿ ಬಾಬಾ ಸಾಹೇಬರಿಗೆ ಗೌರವ ಸಲ್ಲಿಸಬೇಕುʼ ಎಂದು ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಭೂಮಿ ಹಕ್ಕು ವೇದಿಕೆ ಹೇಳುವುದೇನು?

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA)...

ಅ.15ರಿಂದ ಬಾಗಲಕೋಟೆ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ತರಗತಿ ಆರಂಭ

ಬಾಗಲಕೋಟೆ ಜಿಲ್ಲೆಯ ಬಹು ವರ್ಷಗಳ ಬೇಡಿಕೆಯ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ...

ರಾಯಚೂರು | ಅನಧಿಕೃತ ವಿದ್ಯುತ್ ಬಳಕೆ; ಜೆಸ್ಕಾಂನಿಂದ ₹18.95 ಲಕ್ಷ ದಂಡ

ಜೆಸ್ಕಾಂ ಇಲಾಖೆಯಿಂದ ಜಿಲ್ಲೆಯಲ್ಲಿ ಆಗಸ್ಟ್‌ನಲ್ಲಿ ಜೆಸ್ಕಾಂ ಅಧಿಕಾರಿಗಳು, ಜಾಗೃತದಳದವರು ದಾಳಿ ಮಾಡಿ...