ಕಲಬುರಗಿ | ಸಿಬ್ಬಂದಿ ಕಡಿತ ಆದೇಶ ಹಿಂಪಡೆಯುವಂತೆ ವಸತಿಶಾಲೆ ಹೊರಗುತ್ತಿಗೆ ನೌಕರರ ಸಂಘ ಆಗ್ರಹ

Date:

Advertisements

ವಸತಿಶಾಲೆಯಲ್ಲಿ ಅಡುಗೆ ಮಾಡುವ ಸಿಬ್ಬಂದಿಗಳ ಬಾಕಿವೇತನ ಪಾವತಿಸಲು, ಸಿಬ್ಬಂದಿ ಕಡಿತ ಮಾಡಿದ ಆದೇಶ ವಾಪಸ್‌ ಪಡೆಯಲು ಹಾಗೂ ಸಮಯಕ್ಕೆ ಸರಿಯಾಗಿ ವೇತನ ಪಾವತಿಸದ ಶಾರ್ಪ್‌ ಏಜೆನ್ಸಿ ಮೇಲೆ ಶಿಸ್ತು ಕ್ರಮ ಜರುಗಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾ‌ಸ್ಟೆಲ್ ಮತ್ತು ವಸತಿಶಾಲೆ ಹೊರಗುತ್ತಿಗೆ ನೌಕರರ ಸಂಘ ಆಗ್ರಹಿಸಿದೆ.

ಕಲಬುರಗಿ ಜಿಲ್ಲಾಸಮಿತಿಯಿಂದ ನಗರದ ಜಿಲ್ಲಾ ಪಂಚಾಯತ್ ಎದುರು ಧರಣಿ ಸತ್ಯಗ್ರಹ ನಡೆಸಿ ಮುಖ್ಯ ಕಾರ್ಯಾನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಿದರು.

ರಾಜ್ಯಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ ಮಾತನಾಡಿ, “ಕಲಬುರಗಿ ಜಿಲ್ಲೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ, ಕ್ರೈಸ್ ವಸತಿ ನಿಲಯಗಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರ ಬಾಕಿ ವೇತನ ಪಾವತಿಸದೇ ಇರುವುದರಿಂದ ನೌಕರರು ಅತ್ಯಂತ ಸಂಕಷ್ಟದಲ್ಲಿ ಒದ್ದಾಡುತ್ತಿದ್ದಾರೆ. ಅಲ್ಲದೇ ಸಿಬ್ಬಂದಿ ಕಡಿತ ಮಾಡಿರುವುದರಿಂದ ಕೆಲಸದ ಹೊರೆ ಹೆಚ್ಚಾಗಿ ನೌಕರರು ಅನಾರೋಗ್ಯದಿಂದ ಬಳಲುವಂತಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

Advertisements

“ಕ್ರೈಸ್ ವಸತಿನಿಲಯಗಳ ವೇತನಕ್ಕಾಗಿ ಅನುದಾನವಿದ್ದರೂ ಕೂಡಾ ಶಾರ್ಪ್‌ ಏಜನ್ಸಿ ನಿರ್ಲಕ್ಷ್ಯತನದಿಂದ ವೇತನ ಸಮಯಕ್ಕೆ ಸರಿಯಾಗಿ ಪಾವತಿಸದೇ ನೌಕರರು ಗೋಳಾಡುವಂತಾಗಿದೆ. ಕೂಡಲೇ ಬಾಕಿ ವೇತನ ಪಾವತಿಸಬೇಕು. ಸಿಬ್ಬಂದಿ ಕಡಿತ ಮಾಡಿದ ಆದೇಶ ವಾಪಸ್ ಪಡೆಯಬೇಕು. ಮಕ್ಕಳ ಸಂಖ್ಯೆಗೆ ಅನುಗುಣವಾಗಿ 50‌ ಮಂದಿ ವಿದ್ಯಾರ್ಥಿಗಳಿಗೆ 3 ಜನರಂತೆ ಹಿಂದಿನ ಆದೇಶ ಜಾರಿಮಾಡಬೇಕು. ಕಳೆದ ಮೂರು ವರ್ಷಗಳಿಂದ ಕಡಿಮೆ ವೇತನ ಪಾವತಿಸಿದ ಶಾರ್ಪ್‌ ಏಜೆನ್ಸಿಯಿಂದ ‘ವ್ಯತ್ಯಾಸದ ಹಣ ಕೊಡಿಸಬೇಕು ಮತ್ತು ಇಡೀ ರಾಜ್ಯದಲ್ಲಿ ವಸತಿ ಶಾಲೆಗಳಲ್ಲಿ ಅಲ್ಲಲ್ಲಿ ಲೈಂಗಿಕ ಕಿರುಕುಳ ಪ್ರಕರಣಗಳು ನಡೆಯುತ್ತಿರುವದರಿಂದ ಎಲ್ಲ ವಸತಿ ಶಾಲೆಗಳಲ್ಲಿ ಪ್ರಿನ್ಸಿಪಾಲ್‌, ವಾರ್ಡನ್ ಮತ್ತು ದೈಹಿಕ ಶಿಕ್ಷಕರು ಮಹಿಳಾ ಸಿಬ್ಬಂದಿಗಳೇ ಇರಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಟಿಪ್ಪರ್ ಸಂಚಾರದಿಂದ ಹದಗೆಟ್ಟ ರಸ್ತೆ; ಸೂಕ್ತ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಪರಶುರಾಮ ಹಡಲಗಿ, ಉಪಾಧ್ಯಕ್ಷ ಮೇಘರಾಜ ಕಠಾರ, ಅಧ್ಯಕ್ಷ ಬಾಬುರಾವ ಹೊಸಮನಿ, ಅದ್ಯಕ್ಷ ರಾಮಚಂದ್ರ ಪವಾರ, ಬಂಡೆ ಜಿಲ್ಲಾ ಕಾರ್ಯದರ್ಶಿ ಕಾಶಿನಾಥ, ಅಧ್ಯಕ್ಷೆ ನರಸಮ್ಮ ಚಂದಕೇರಾ, ಅಧ್ಯಕ್ಷ ನಾಗರಾಜ ಕಟ್ಟಿಮನಿ, ಅಧ್ಯಕ್ಷೆ ನಾಗರತ್ನ ಮದನಕರ, ಮಲ್ಲಮ್ಮ ಕೋಡ್ಲಿ, ಶಿವರಾಜ ಆಡಕಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X