ಕಲಬುರಗಿ | ಹಳೆಯ ನೆನಪುಗಳಿಗೆ ಮರುಜೀವ: ಹಳೆಯ ವಿದ್ಯಾರ್ಥಿಗಳ ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ

Date:

ಅಫಜಲಪುರ ತಾಲ್ಲೂಕಿನ ಮಾಶಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 2000ನೇ ಸಾಲಿನ ಹಳೆಯ ವಿದ್ಯಾರ್ಥಿಗಳ ವತಿಯಿಂದ ಮಂಗಳವಾರ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಸಲಾಯಿತು.

- Advertisement -

ಹಲವು ವರ್ಷಗಳ ಬಳಿಕ ಒಂದೆಡೆ ಸೇರಿದ ಹಳೆಯ ವಿದ್ಯಾರ್ಥಿಗಳು ತಮ್ಮ ಶಾಲಾ ದಿನಗಳ ಸವಿ ನೆನಪುಗಳನ್ನು ಮೆಲುಕು ಹಾಕಿ, ಜೀವನದಲ್ಲಿ ತಾವು ಸಾಧಿಸಿದ ಸಾಧನೆ ಹಾಗೂ ಅನುಭವಗಳನ್ನು ಶಿಕ್ಷಕರೊಂದಿಗೆ ಹಂಚಿಕೊಂಡರು. ಇದೇ ವೇಳೆ ತಮಗೆ ಅಕ್ಷರ ಕಲಿಸಿ ಜೀವನಕ್ಕೆ ದಾರಿ ತೋರಿದ ಹಾಲಿ ಹಾಗೂ ನಿವೃತ್ತ ಶಿಕ್ಷಕರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯೋಪಾಧ್ಯಾಯ ರಾಜು ಪಾಯದ ಮಾತನಾಡಿ, ಗ್ರಾಮೀಣ ಭಾಗದಲ್ಲಿ ನಡೆಯುವ ಇಂತಹ ಕಾರ್ಯಕ್ರಮಗಳು ಹಳೆಯ ವಿದ್ಯಾರ್ಥಿಗಳನ್ನು ಮತ್ತೆ ಒಂದೆಡೆ ಸೇರಿಸುವುದರೊಂದಿಗೆ ಶಾಲಾ ದಿನಗಳ ನೆನಪುಗಳನ್ನು ಮರುಕಳಿಸುತ್ತವೆ. ಶಿಕ್ಷಕರ ಆಶೀರ್ವಾದ ಮತ್ತು ಮಾರ್ಗದರ್ಶನದಿಂದ ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯವಾಗುತ್ತದೆ. ನಮ್ಮ ಶಾಲೆಯ ಹಲವು ವಿದ್ಯಾರ್ಥಿಗಳು ಇಂದು ವಿವಿಧ ಕ್ಷೇತ್ರಗಳಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿರುವುದು ಹೆಮ್ಮೆಯ ಸಂಗತಿ ಎಂದರು.

ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಗಡಲಿಂಗಯ್ಯ ನಂದಿಕೋಲಮಠ ಹಾಗೂ ಚೌಡೇಶ್ವರಿ ದೇವಿ ಅರ್ಚಕರಾದ ದುಂಡಪ್ಪ ಕುಂಬಾರ, ಚಂದ್ರಮಪ್ಪ ಕುಂಬಾರ ವಹಿಸಿದ್ದರು. ಡಾ. ಪಿರಪ್ಪ ಎಸ್. ಬಾಂಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.

Advertisements
Advertisements

ಗುರುಗಳು ಜೀವನದಲ್ಲಿ ಸರಿ–ತಪ್ಪುಗಳ ನಡುವಿನ ವ್ಯತ್ಯಾಸ ತಿಳಿಸುವುದರ ಜೊತೆಗೆ, ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಉತ್ತಮ ಮಾರ್ಗದಲ್ಲಿ ಮುನ್ನಡೆಸುತ್ತಾರೆ. ತಾಯಿ ಜನ್ಮ ನೀಡಿದರೆ, ಗುರು ಆ ಜನ್ಮಕ್ಕೆ ಸಾರ್ಥಕತೆ ಹಾಗೂ ಸನ್ಮಾರ್ಗ ತೋರಿಸುತ್ತಾರೆ ಎಂದು ಕಾರ್ಯಕ್ರಮ ಸಂಯೋಜಕ ಡಾ. ಪಿರಪ್ಪ ಎಸ್. ಬಾಂಗೆ ಹೇಳಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಸಂಚಾರ ನಿಯಮ ಪಾಲನೆಗೆ ಜಾಗೃತಿ: ಹೆಲ್ಮೆಟ್, ಪರವಾನಗಿ, ವಿಮೆ ಕಡ್ಡಾಯ

ಈ ಸಂದರ್ಭದಲ್ಲಿ ವಿಶ್ವನಾಥ ರೇವೂರ, ಸತೀಶ್ ಪೊದ್ದಾರ, ದಿಲೀಪ್ ಅಡವಿತೋಟ, ವಿಶ್ವನಾಥ ಗಡೇದ, ಲಕ್ಷ್ಮೀಬಾಯಿ ಗೌರಗಾಂವ, ಬಾನೂಬಿ ನಿಗೇವಾನ್ ಸೇರಿದಂತೆ ಹಳೆಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...

ರಾಯಚೂರು | ಎಸ್‌ಐಆರ್ ರದ್ದತಿಗೆ ಆಗ್ರಹ: ಅ.9ರಂದು ಮತ ಕಾವಲು ಸಮಿತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಎಸ್‌ಐಆರ್...

ಉಡುಪಿ | SIR ಫಾರಂ–7 ದುರ್ಬಳಕೆ ತಡೆಗೆ ಮುಸ್ಲಿಮ್ ಒಕ್ಕೂಟ ಆಗ್ರಹ

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳನ್ನು ತೆಗೆದುಹಾಕಲು...