ಕಲಬುರಗಿ | ಪರಿವರ್ತನೆಯಲ್ಲಿ ಸಮೂಹ ಮಾಧ್ಯಮಗಳ ಪಾತ್ರ ಅನನ್ಯ: ಜ್ಯೋತಿ ಬೊಮ್ಮ

Date:

ಸಮೂಹ ಮಾಧ್ಯಮಗಳು ಯಾವಾಗಲೂ ಸಮಾಜದ ಮಹತ್ವದ ಸ್ತಂಭಗಳಾಗಿ ಉಳಿದಿವೆ ಹಾಗೂ ಶೈಕ್ಷಣಿಕ ಸಾಮಾಜಿಕ ಕುರಿತಂತೆ ಎಲ್ಲ ಕ್ಷೇತ್ರಗಳ ಪ್ರಚಲಿತ ವಿದ್ಯಮಾನಗಳ ಬಗ್ಗೆ ವರದಿ ನೀಡುವುದಲ್ಲದೆ ಸಮಾಜದ ಸ್ವಾಸ್ಥ್ಯವನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಮಹಿಳಾ ಪ್ರಗತಿಪರ ಸಾಹಿತಿ ಜ್ಯೋತಿ ಡಿ ಬೊಮ್ಮಾ ಹೇಳಿದರು.

- Advertisement -

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಚಂದಾಪುರದ ಸಮಾಜ ಕಲ್ಯಾಣ ಇಲಾಖೆಯ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಭಾರತ ಜನ-ಸಂಗಮ ಸಮಿತಿ ಹಾಗೂ ಯೂನಿಟಿ ಆಫ್ ಮೂಲನಿವಾಸಿ ಬಹುಜನ ಸಂಘಟನೆಯಿಂದ ಹಮ್ಮಿಕೊಂಡಿದ್ದ ʼವಿದ್ಯಾರ್ಥಿಗಳ ಮೇಲೆ ಸಮೂಹ ಮಾಧ್ಯಮಗಳ ಪ್ರಭಾವ ಸರಣಿʼ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಪ್ರಜಾಪ್ರಭುತ್ವದಲ್ಲಿ ಮಾಧ್ಯಮಗಳು ಪ್ರಮುಖವಾದ ಸ್ಥಾನವನ್ನು ಅಲಂಕರಿಸಿವೆ ಅದಕ್ಕಾಗಿ ವಿದ್ಯಾರ್ಥಿಗಳು ಸಮೂಹ ಮಾಧ್ಯಮಗಳ ಸದುಪಯೋಗ ಪಡೆದುಕೊಳ್ಳಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಸಮೂಹ ಮಾಧ್ಯಮಗಳಿಂದ ದುರುಪಯೋಗ ಪಡೆದುಕೊಂಡು ಜೀವನ ವ್ಯರ್ಥಮಾಡಿಕೊಳ್ಳುತ್ತಿದ್ದಾರೆ. ತಮ್ಮ ಜೀವನದ ಉತ್ತಮ ಭವಿಷ್ಯಕ್ಕಾಗಿ ಮಾಧ್ಯಮಗಳನ್ನು ಬಳಸಿಕೊಂಡಾಗ ಮಾತ್ರ ಆದರ್ಶ ವ್ಯಕ್ತಿಗಳಾಗಲು ಸಾಧ್ಯ” ಎಂದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಹಾಸ್ಟೆಲ್‌ನಲ್ಲಿ ಫಂಗಸ್ ಸೋಂಕು; ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಅನಾರೋಗ್ಯ

ಚಿಂಚೋಳಿ ಡಿವೈಎಸ್‌ಪಿ ಸಂಗಮೇಶ ಹಿರೇಮಠ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ನರಸಮ್ಮ ಆವುಂಟಿ, ವೀರಣ್ಣಾ ಸುಗಂಧಿ, ಶೈಲಜಾ ಸಾಗರ, ಆನಂದಿ ಮಾತನಾಡಿದರು. ಮಾರುತಿ ಗಂಜಗಿರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗೋಪಾಲ ಗಾರಂಪಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಿಟಿಜನ್‌ ಜರ್ನಲಿಸ್ಟ್‌: ಮಾರುತಿ ಗಂಜಗಿರಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...