ಕಲಬುರಗಿ | ರೌಡಿ ಶೀಟರ್ ಅಶೋಕ ವಿಠಲರಾವ ಸಿಂಗೆ ಗಡಿಪಾರು

Date:

ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಆರೋಪದ ಹಿನ್ನೆಲೆಯಲ್ಲಿ ನಗರದ ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ‘ಎ’ ರೌಡಿ ಶೀಟರ್ ಅಶೋಕ ವಿಠಲರಾವ ಸಿಂಗೆ (40) ಅವರನ್ನು ಕಲಬುರಗಿ ನಗರದಿಂದ ಗಡಿಪಾರು ಮಾಡಲಾಗಿದೆ.

- Advertisement -

ಕೆಎಸ್‌ಆರ್‌ಟಿಸಿ ಕಾಲೋನಿ ನಿವಾಸಿಯಾಗಿರುವ ಅಶೋಕ ಸಿಂಗೆ ವಿರುದ್ಧ 2003ರಿಂದ 2026ರವರೆಗೆ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 16 ಪ್ರಕರಣಗಳು ದಾಖಲಾಗಿವೆ. ಕೊಲೆ ಯತ್ನ, ಸುಲಿಗೆ, ಮಹಿಳೆಯರ ಮೇಲೆ ಹಲ್ಲೆ, ಮಾರಕಾಸ್ತ್ರಗಳಿಂದ ಹಲ್ಲೆ, ಜೀವ ಬೆದರಿಕೆ, ಅಪರಾಧಿಕ ಬೆದರಿಕೆ ಹಾಗೂ ಗಾಂಜಾ ಅಕ್ರಮ ಸಂಗ್ರಹಣೆ ಸೇರಿದಂತೆ ಹಲವು ಗಂಭೀರ ಆರೋಪಗಳಿಗೆ ಸಂಬಂಧಿಸಿದ ಪ್ರಕರಣಗಳು ಆತನ ವಿರುದ್ಧ ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಪೊಲೀಸ್ ಇಲಾಖೆಯ ಪ್ರಕಾರ, ಅಶೋಕ ಸಿಂಗೆ ವಿರುದ್ಧ ಭಾರತೀಯ ದಂಡ ಸಂಹಿತೆಯಡಿ 8, ಎನ್‌ಡಿಪಿಎಸ್ ಕಾಯ್ದೆಯಡಿ 4 ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಡಿ 4 ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಆತನನ್ನು ‘ಎ’ ರೌಡಿ ಎಂದು ಗುರುತಿಸಿ ರೌಡಿ ಶೀಟ್ ತೆರೆಯಲಾಗಿದ್ದು, ಅದು ಪ್ರಸ್ತುತವೂ ಚಾಲ್ತಿಯಲ್ಲಿದೆ.

ಆತನ ನಿರಂತರ ಕಾನೂನುಬಾಹಿರ ಚಟುವಟಿಕೆಗಳಿಂದ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿರುವುದಲ್ಲದೆ, ಮುಂದಿನ ದಿನಗಳಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆಯಿದೆ ಎಂಬ ಪೊಲೀಸ್ ವರದಿಯ ಆಧಾರದ ಮೇಲೆ ಗಡಿಪಾರು ಕ್ರಮ ಕೈಗೊಳ್ಳಲಾಗಿದೆ.

ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಐಪಿಎಸ್ ಅವರ ನಿರ್ದೇಶನದಂತೆ ಅಶೋಕ ನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸತೀಶ ಕಣಿಮೇಶ್ವರ ಅವರು ಕರ್ನಾಟಕ ಪೊಲೀಸ್ ಕಾಯ್ದೆ-1963ರ ಕಲಂ 55ರಡಿ ಗಡಿಪಾರು ಮಾಡುವಂತೆ ವರದಿ ಸಲ್ಲಿಸಿದ್ದರು.

ಈ ವರದಿಯ ಆಧಾರದ ಮೇಲೆ ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಶಾಲೂ ಅವರು ವಿಚಾರಣೆ ನಡೆಸಿ, ಅಶೋಕ ಸಿಂಗೆ ಅವರನ್ನು ಕಲಬುರಗಿ ನಗರದಿಂದ ಹೊರಹಾಕಿ ಬೆಂಗಳೂರು ನಗರದ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇರುವಂತೆ ಗಡಿಪಾರು ಆದೇಶ ಹೊರಡಿಸಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಕೇಂದ್ರ ಕಾರಾಗೃಹದ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ

ಗಡಿಪಾರು ಆದೇಶದ ಮೂಲಕ ಸಾರ್ವಜನಿಕ ಶಾಂತಿಗೆ ಧಕ್ಕೆ ಉಂಟುಮಾಡುವ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಸಗಿ ಬಸ್‌ಗಳ ಮುಖಾಮುಖಿ ಢಿಕ್ಕಿ : ಮೂವರ ಸ್ಥಿತಿ ಗಂಭೀರ, 28 ಮಂದಿಗೆ ಗಾಯ

ಎರಡು ಖಾಸಗಿ ಬಸ್‌ಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರ...

ಉಡುಪಿ | ಹಿರಿಯ ಸಾಧಕರಿಗೆ ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ ಪ್ರದಾನ

ಮಂಗಳೂರು ಅಮ್ಮೆಂಬಳ ಶಂಕರ ನಾರಾಯಣ ನಾವಡ ಸಾಹಿತ್ಯ ಪ್ರತಿಷ್ಠಾನ, ಕನ್ನಡ ಸಾಹಿತ್ಯ...

ಉಡುಪಿ | ‘ನಡಿಗೆ’ ಅಭಿಯಾನದಲ್ಲಿ 20 ಸಾವಿರ ಜೋಡಿ ಪಾದರಕ್ಷೆ ಸಂಗ್ರಹ

ಮನೆಯಲ್ಲಿ ಬಳಸಿದ ಅಥವಾ ಬಳಕೆಯಾಗದ ಉತ್ತಮ ಗುಣಮಟ್ಟದಲ್ಲಿರುವ ಪಾದರಕ್ಷೆಗಳನ್ನು ಹೊಸ ಪಾದರಕ್ಷೆಗಳಾಗಿ...

ಉಡುಪಿ | ಸಾಮಾಜಿಕ, ಶೈಕ್ಷಣಿಕ ಸೇವೆಗಳಿಗೆ ಸಹಕಾರಿ ಸಂಸ್ಥೆಗಳು ಆದ್ಯತೆ ನೀಡಲಿ: ದುಗ್ಗಣ್ಣ ಸಾವಂತ್

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಿಯದರ್ಶಿನಿ...