ಕಲಬುರಗಿ | ರೌಡಿ ಶೀಟರ್ ಹಡ್ಡಿ ಪಿಂಟ್ಯಾ ಬಳ್ಳಾರಿಗೆ ಗಡಿಪಾರು

Date:

ನಗರದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ನಿತೀನಕುಮಾರ ಅಲಿಯಾಸ್ ಹಡ್ಡಿ ಪಿಂಟ್ಯಾ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಂಡಿದ್ದು, ಒಂದು ವರ್ಷದ ಅವಧಿಗೆ ಬಳ್ಳಾರಿ ಜಿಲ್ಲೆಯ ಕೌಲಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.

- Advertisement -

ಕುವೆಂಪು ನಗರದ ನಿವಾಸಿಯಾಗಿರುವ ನಿತೀನಕುಮಾರ ದೇವಿದಾಸ್ ಸೂರ್ಯವಂಶಿ ವಿರುದ್ಧ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ಜೀವ ಬೆದರಿಕೆ, ಮಾರಣಾಂತಿಕ ಹಲ್ಲೆ, ಸಾರ್ವಜನಿಕ ಶಾಂತಿಭಂಗ ಸೇರಿದಂತೆ ಒಟ್ಟು 13 ಪ್ರಕರಣಗಳು ದಾಖಲಾಗಿವೆ. 2012ರಿಂದ ಈವರೆಗೆ ವಿವಿಧ ಕಾನೂನುಗಳ ಅಡಿಯಲ್ಲಿ ದಾಖಲಾಗಿರುವ ಪ್ರಕರಣಗಳ ಹಿನ್ನೆಲೆ ಆತನು ರೂಢಿಗತ ಅಪರಾಧಿ ಪಟ್ಟಿಯಲ್ಲಿ ಗುರುತಿಸಿಕೊಂಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಸಾರ್ವಜನಿಕ ಸ್ಥಳಗಳಲ್ಲಿ ಗಲಾಟೆ ನಡೆಸುವುದು, ಅಪಾಯಕಾರಿ ಆಯುಧಗಳನ್ನು ಬಳಸಿಕೊಂಡು ಹಲ್ಲೆ ನಡೆಸುವುದು ಹಾಗೂ ಜನರಲ್ಲಿ ಭಯದ ವಾತಾವರಣ ಸೃಷ್ಟಿಸುವಂತಹ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೆ ಎಂಬ ಆರೋಪಗಳು ಆತನ ವಿರುದ್ಧ ಇವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಗಡಿಪಾರು ಕ್ರಮ ಕೈಗೊಳ್ಳಲಾಗಿದೆ.

ಸ್ಟೇಷನ್ ಬಜಾರ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಜಿ.ಎಂ. ಪಾಟೀಲ್ ಅವರು ಕರ್ನಾಟಕ ಪೊಲೀಸ್ ಕಾಯ್ದೆ-1963ರ ಕಲಂ 55ರಡಿ ಗಡಿಪಾರು ಕ್ರಮಕ್ಕೆ ಸಂಬಂಧಿಸಿದ ವರದಿಯನ್ನು ಸಲ್ಲಿಸಿದ್ದರು. ಬಳಿಕ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರ ಮಾರ್ಗದರ್ಶನದಲ್ಲಿ ಪ್ರಕರಣದ ಪರಿಶೀಲನೆ ನಡೆಸಲಾಯಿತು.

ಇದನ್ನು ಓದಿದ್ದೀರಾ? ಯಾದಗಿರಿ | ಸಾಲದ ಒತ್ತಡ; ಬೈಲಾಪುರ ತಾಂಡಾದ ವ್ಯಕ್ತಿ ಆತ್ಮಹತ್ಯೆ

ವರದಿ ಹಾಗೂ ದಾಖಲೆಗಳ ಪರಿಶೀಲನೆಯ ನಂತರ ಉಪ ಪೊಲೀಸ್ ಆಯುಕ್ತೆ (ಕಾನೂನು ಮತ್ತು ಸುವ್ಯವಸ್ಥೆ) ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಶಾಲೂ ಐಪಿಎಸ್ ಅವರು, ನಿತೀನಕುಮಾರ ಅಲಿಯಾಸ್ ಹಡ್ಡಿ ಪಿಂಟ್ಯಾನನ್ನು ಒಂದು ವರ್ಷದ ಅವಧಿಗೆ ಬಳ್ಳಾರಿ ಜಿಲ್ಲೆಯ ಕೌಲಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡುವ ಆದೇಶ ಹೊರಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ ಮದ್ಯದಂಗಡಿ ಕೊಲೆ ಪ್ರಕರಣದ ಆರೋಪಿ ಬಂಧನ

ತಾಲ್ಲೂಕಿನ ಕೊಂಡರೆಡ್ಡಿಪಲ್ಲಿ ಗ್ರಾಮದ ಬಳಿಯ ಮದ್ಯ ಮಾರಾಟ ಮಳಿಗೆಯಲ್ಲಿ ಸೆ.5ರಂದು ನಡೆದ...

ಗ್ರೌಂಡ್ ರಿಪೋರ್ಟ್ | ಮೆರವಣಿಗೆಯ ದಾರಿಯಿಂದ ರಾಜಕೀಯದ ದಾರಿಗೆ: ಟಿ. ನರಸೀಪುರದಲ್ಲಿ ಸಹಬಾಳ್ವೆಯ ಪ್ರಶ್ನೆ

2023ರ ವೇಣುಗೋಪಾಲ ನಾಯಕ್ ಹತ್ಯೆಯಿಂದ 2026ರ ಗಣೇಶೋತ್ಸವ ವಿವಾದದವರೆಗೆ; ಪೊಲೀಸ್ ಎಚ್ಚರಿಕೆ,...

ಧಾರವಾಡ | 50 ಲಕ್ಷ ಲಂಚ ಪಡೆಯುವಾಗ ಲೋಕಾ ಬಲೆಗೆ ರೆಡ್ ಹ್ಯಾಂಡ್ ಸಿಕ್ಕ ತಹಶೀಲ್ದಾರ

ಭೂಮಿ ಅ ಖರಾಬ್ ತೆಗೆಯಲು ಒಂದು‌ ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ ರೈತರ ಒತ್ತಾಯ

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು...