ಕಲಬುರಗಿ | ಹಿಂದೂ ಮಹಾಗಣಪತಿ ಉತ್ಸವಕ್ಕೆ ರೌಡಿ ಶೀಟರ್ ಶ್ರೀಕಾಂತ್ ಶೆಟ್ಟಿ ಎಂಟ್ರಿಗೆ ಬ್ರೇಕ್; 4 ದಿನ ನಗರ ಪ್ರವೇಶ ನಿರ್ಬಂಧ

Date:

ನಗರದ ಕೋಟೆ ಎದುರು ನಡೆಯುತ್ತಿರುವ ಹಿಂದೂ ಮಹಾಗಣಪತಿ ಉತ್ಸವದ ಹಿನ್ನೆಲೆಯಲ್ಲಿ ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ ಕಾರ್ಯಾಚರಣೆ ಸದಸ್ಯ ಶ್ರೀಕಾಂತ್ ಶೆಟ್ಟಿ ಕಾರ್ಕಳ ಅವರಿಗೆ ನಾಲ್ಕು ದಿನಗಳ ಕಾಲ ಕಲಬುರಗಿ ನಗರ ಪ್ರವೇಶಿಸದಂತೆ ಪೊಲೀಸರು ನಿರ್ಬಂಧ ವಿಧಿಸಿದ್ದಾರೆ.

- Advertisement -

ಅಕ್ಟೋಬರ್ 1ರಂದು ನಡೆಯಲಿರುವ ಹಿಂದೂ ಮಹಾಗಣಪತಿ ಕಾರ್ಯಕ್ರಮಕ್ಕೆ ಶ್ರೀಕಾಂತ್ ಶೆಟ್ಟಿ ಅವರನ್ನು ಆಹ್ವಾನಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಚೌಕ್ ಪೊಲೀಸ್ ಠಾಣೆ ಹಾಗೂ ಉತ್ತರ ಉಪವಿಭಾಗದ ಎಸಿಪಿ ಸಲ್ಲಿಸಿದ ವರದಿಗಳನ್ನು ಪರಿಶೀಲಿಸಿದ ಬಳಿಕ, ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಮುನ್ನೆಚ್ಚರಿಕಾ ಕ್ರಮವಾಗಿ ಉಪ ಪೊಲೀಸ್ ಆಯುಕ್ತರು ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಶ್ರೀಕಾಂತ್ ಶೆಟ್ಟಿ ಅವರನ್ನು ‘ಬಿ’ ರೌಡಿಶೀಟರ್ ಎಂದು ಉಲ್ಲೇಖಿಸಿರುವ ಆದೇಶದಲ್ಲಿ, ಅವರ ವಿರುದ್ಧ ಉಡುಪಿ ವ್ಯಾಪ್ತಿಯಲ್ಲಿ ದಾಖಲಾಗಿರುವ ನಾಲ್ಕು ಪ್ರಕರಣಗಳು ಹಾಗೂ ಮಂಗಳೂರು ಮತ್ತು ದಕ್ಷಿಣ ಕನ್ನಡದ ಪುತ್ತೂರು ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳ ವಿವರಗಳನ್ನು ಪರಿಗಣಿಸಲಾಗಿದೆ. ಹಿಂದಿನ ಕಾರ್ಯಕ್ರಮಗಳಿಗೆ ಸಂಬಂಧಿಸಿದ ಪೊಲೀಸ್ ವರದಿಯಲ್ಲಿನ ಅಂಶಗಳನ್ನೂ ಅಧಿಕಾರಿಗಳು ಪರಿಶೀಲಿಸಿದ್ದಾರೆ.

ಶ್ರೀಕಾಂತ್ ಶೆಟ್ಟಿ ನಗರಕ್ಕೆ ಆಗಮಿಸಿದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ ಎಂಬ ಪೊಲೀಸ್ ವರದಿಯ ಹಿನ್ನೆಲೆಯಲ್ಲಿ, ಅ.1ರಿಂದ ಅ.4ರವರೆಗೆ ಕಲಬುರಗಿ ನಗರ ಪ್ರವೇಶಿಸದಂತೆ ನಿರ್ಬಂಧದ ಆದೇಶ ಜಾರಿಗೊಳಿಸಲಾಗಿದೆ.

Advertisements
Advertisements

ಇದನ್ನು ಓದಿದ್ದೀರಾ? ಕಲಬುರಗಿ | ಬಸ್, ಬೈಕ್ ಡಿಕ್ಕಿ: ಬೈಕ್ ಹಿಂಬದಿ ಸವಾರ ಸಾವು

ಹಿಂದೂ ಮಹಾಗಣಪತಿ ಉತ್ಸವದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆಯ ಮೇಲೆ ನಿಗಾ ವಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಓರ್ವ ಸಾವು; ಸುರಕ್ಷತಾ ಲೋಪದ ಸಮಗ್ರ ತನಿಖೆಗೆ ಆಗ್ರಹ

ಜೋಕಟ್ಟೆ ಸಮೀಪದ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ (ಎಂಆರ್‌ಪಿಎಲ್) ಘಟಕದಲ್ಲಿ...

ಮಡಗಾಂವ್- ಮಂಗಳೂರು ವಂದೇ ಭಾರತ್ ರೈಲು ಬೆಂಗಳೂರಿಗೆ ವಿಸ್ತರಣೆ

ಮಂಗಳೂರು-ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಬೆಂಗಳೂರಿನವರೆಗೆ ವಿಸ್ತರಿಸಲಾಗಿದೆ....

ಉಡುಪಿ | ಸ್ವಯಂ ನಿರೋಧಕ ಕಾಯಿಲೆಗಳ ನಿರ್ವಹಣೆಗೆ ಆಯುರ್ವೇದ–ಆಧುನಿಕ ವಿಜ್ಞಾನ ಸಂಯೋಜನೆ ಅಗತ್ಯ

ಸ್ವಯಂ ನಿರೋಧಕ ಕಾಯಿಲೆಗಳ ನಿರ್ವಹಣೆಯಲ್ಲಿ ಆಯುರ್ವೇದದ ಸಾಂಪ್ರದಾಯಿಕ ಜ್ಞಾನವನ್ನು ಆಧುನಿಕ ವೈಜ್ಞಾನಿಕ...