ಕಲಬುರಗಿ | ಆರ್‌ಎಸ್‌ಎಸ್ ಭಗವಾಧ್ವಜ, ಬ್ಯಾನರ್‌ ಹಾಗೂ ಕಟೌಟ್‌ ತೆರವು ; ನಗರದಲ್ಲಿ ಸಂಚಲನ

Date:

ಚಿತ್ತಾಪುರ ಪಟ್ಟಣದಲ್ಲಿ ಭಾನುವಾರ ನಡೆಯಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಪಥಸಂಚಲನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅಳವಡಿಸಲಾದ ಭಗವಾಧ್ವಜ, ಬ್ಯಾನರ್‌ಗಳು ಹಾಗೂ ಕಟೌಟ್‌ಗಳನ್ನು ಅಧಿಕಾರಿಗಳು ತಡರಾತ್ರಿ ತೆರವುಗೊಳಿಸಿರುವುದು ಉದ್ವಿಗ್ನತೆ ಸೃಷ್ಟಿಸಿದೆ.

- Advertisement -

ಪುರಸಭೆ ಅಧಿಕಾರಿಗಳು ಹಾಗೂ ಪೊಲೀಸರು ಜಂಟಿಯಾಗಿ ಶುಕ್ರವಾರ ಮಧ್ಯರಾತ್ರಿ ಕ್ರಮ ಕೈಗೊಂಡು ಲಾಡ್ಜಿಂಗ್ ಕ್ರಾಸ್, ಮುಖ್ಯರಸ್ತೆ ಹಾಗೂ ಮಾರುಕಟ್ಟೆ ಪ್ರದೇಶ ಸೇರಿದಂತೆ ಹಲವು ಸ್ಥಳಗಳಲ್ಲಿ ಅಳವಡಿಸಲಾಗಿದ್ದ ಆರ್‌ಎಸ್‌ಎಸ್ ಭಗವಾಧ್ವಜ, ಬ್ಯಾನರ್‌ಗಳು ಹಾಗೂ ಕಟೌಟ್‌ಗಳನ್ನು ತೆರವುಗೊಳಿಸಿದರು. ಈ ಕ್ರಮ ಸರ್ಕಾರದ ಆದೇಶದಡಿ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

‘ರಾಜ್ಯ ಸರ್ಕಾರ ಇತ್ತೀಚೆಗೆ ಸರ್ಕಾರಿ ಜಾಗ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಸಂಘ ಸಂಸ್ಥೆಗಳ ಕಾರ್ಯಕ್ರಮ ಆಯೋಜನೆಗೆ ಪೂರ್ವಾನುಮತಿ ಕಡ್ಡಾಯ ಎಂದು ಆದೇಶ ಹೊರಡಿಸಿದ್ದು, ಅದರ ಅನುಸಾರ ಸ್ಥಳೀಯ ಆಡಳಿತ ಕ್ರಮ ಕೈಗೊಂಡಿದೆ’ ಎಂದು ತಿಳಿದು ಬಂದಿದೆ.

403384

‘ಆದರೆ ಈ ಕ್ರಮದ ವಿರುದ್ಧ ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತೆರವು ಕಾರ್ಯಾಚರಣೆ ನಡೆದಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಹಲವು ಬಿಜೆಪಿ ಮುಖಂಡರು ಸ್ಥಳಕ್ಕಾಗಮಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸ್ಥಳೀಯ ಆಡಳಿತದ ಕ್ರಮವನ್ನು ಅವರು ‘ಹಿಂದೂ ವಿರೋಧಿ ನಿಲುವು’ ಎಂದು ಆರೋಪಿಸಿದರು.

‘ಪಥಸಂಚಲನಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್‌ ವತಿಯಿಂದ ತಾಲೂಕು ಆಡಳಿತಕ್ಕೆ ಅರ್ಜಿ ಸಲ್ಲಿಸಲಾಗಿದ್ದು, ತಹಶೀಲ್ದಾರ್‌ ಅವರು ಪೊಲೀಸ್‌ ಇಲಾಖೆಗೆ ವರದಿ ಕೋರಿರುವ ಕಾರಣದಿಂದ ಅಧಿಕೃತ ಅನುಮತಿ ಇನ್ನೂ ನೀಡಲಾಗಿಲ್ಲ’ ಎಂದು ಮೂಲಗಳು ತಿಳಿಸಿವೆ.

ಇದನ್ನು ಓದಿದ್ದೀರಾ? ಕಲಬುರಗಿ | ಆರ್‌ಎಸ್‌ಎಸ್ ನಿಷೇಧಿಸುವಂತೆ ಆಗ್ರಹಿಸಿ : ಕರಾದಸಂಸ ಬೃಹತ್ ಪ್ರತಿಭಟನಾ ಮೆರವಣಿಗೆ

‘ಈ ವಿಚಾರ ರಾಜಕೀಯ ಬಣ್ಣ ಪಡೆದುಕೊಂಡಿದ್ದು, ಚಿತ್ತಾಪುರ ಕ್ಷೇತ್ರದ ಶಾಸಕರಾದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಕಾರ್ಯಕ್ರಮಗಳನ್ನು ನಿಷೇಧಿಸಬೇಕೆಂದು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದ ಹಿನ್ನೆಲೆ ಆಡಳಿತದ ಕ್ರಮ ಕೈಗೊಳ್ಳಲಾಗಿದೆ’ ಎಂದು ತಿಳಿದು ಬಂದಿದೆ.

‘ಸ್ಥಳೀಯ ಮಟ್ಟದಲ್ಲಿ ಪೊಲೀಸರು ಶಾಂತಿ ಸುವ್ಯವಸ್ಥೆ ಕಾಪಾಡಲು ಬಿಗಿ ಭದ್ರತೆ ಒದಗಿಸಿದ್ದು, ಪಥಸಂಚಲನಕ್ಕೆ ಅನುಮತಿ ನೀಡುವ ಬಗ್ಗೆ ಅಂತಿಮ ನಿರ್ಧಾರ ತಾಲ್ಲೂಕು ಆಡಳಿತದ ಕೈಯಲ್ಲಿದೆ’ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...