ಪರವಾನಗಿ ಇಲ್ಲದೆ ನಿಷೇಧಿತ ಶೆಡ್ಯೂಲ್ -ಎಚ್ (Schedule-H) ಔಷಧ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಸಬ್ ಅರ್ಬನ್ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿ, ₹8,274 ಮೌಲ್ಯದ 42 ಬಾಟಲ್ ಕಫ್ ಸಿರಪ್ಗಳನ್ನು ವಶಪಡಿಸಿಕೊಂಡಿದ್ದಾರೆ.
ನಗರದ ಡಬರಾಬಾದ ಕ್ರಾಸ್ ಬಳಿ ಸೆ.8ರಂದು ಕಾರ್ಯಾಚರಣೆ ನಡೆಸಿದ ಪೊಲೀಸರು, ಅಬ್ರಾರ (28) ಹಾಗೂ ರಿಹಾನ್ ಪಟೇಲ್ (23) ಎಂಬುವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಯಾವುದೇ ಪರವಾನಗಿ ಇಲ್ಲದೆ ಶೆಡ್ಯೂಲ್- ಎಚ್ (Schedule-H) ಔಷಧ ಮಾರಾಟ ಮಾಡುತ್ತಿದ್ದುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಐಪಿಎಸ್ ಅವರ ನಿರ್ದೇಶನದಂತೆ, ಡಿಸಿಪಿಗಳಾದ ಶಾಲೂ ಐಪಿಎಸ್ ಹಾಗೂ ಪ್ರವೀಣ್ ಹೆಚ್. ನಾಯಕ್, ಎಸಿಪಿ ಬಸವೇಶ್ವರ ಹೀರಾ ಅವರ ಮಾರ್ಗದರ್ಶನದಲ್ಲಿ ಪಿಐ ನಟರಾಜ ಲಾಡೆ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ.
ಇದನ್ನು ಓದಿದ್ದೀರಾ? ಕಲ್ಯಾಣ ಕರ್ನಾಟಕ | 4,904 ಅಂಗನವಾಡಿ ಕೇಂದ್ರಕ್ಕಿಲ್ಲ ಸ್ವಂತ ಕಟ್ಟಡ: ಅಡುಗೆ ಕೋಣೆ, ಶೌಚಾಲಯ ಮರೀಚಿಕೆ
ಕಾರ್ಯಾಚರಣೆಯಲ್ಲಿ ಪಿಎಸ್ಐ ಶಶಿಕಲಾ, ಎಎಸ್ಐ ಭೀಮಾಶಂಕರ ಹಾಗೂ ಸಿಬ್ಬಂದಿ ರಾಜಕುಮಾರ ಮತ್ತು ಫಿರೋಜ್ ಭಾಗವಹಿಸಿದ್ದರು. ತಂಡದ ಕಾರ್ಯವನ್ನು ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ.





