ಕಲಬುರಗಿ | ಸರ್ಕಾರಿ ಪದವಿ ಮಹಾವಿದ್ಯಾಲಯ ಉಳಿಸುವಂತೆ ಎಐಡಿಎಸ್‌ಒ ಆಗ್ರಹ

Date:

Advertisements

ಸರ್ಕಾರಿ ಪದವಿ ಕಾಲೇಜು ಸ್ಥಳವನ್ನು ಶಿಕ್ಷಣೇತರ ಕೆಲಸಕ್ಕೆ ನೀಡುವ ಸರ್ಕಾರದ ನಿಲುವನ್ನು ಖಂಡಿಸಿ ಸರ್ಕಾರಿ ಪದವಿ ಮಹಾವಿದ್ಯಾಲಯ ಉಳಿಸಿ ಹೋರಾಟ ಸಮಿತಿ ಹಾಗೂ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಕಲಬುರಗಿಯಲ್ಲಿ ಬೃಹತ್‌ ಪ್ರತಿಭಟನೆ ನಡೆಯಿತು.

ಸರ್ಕಾರಿ ಪದವಿ ಮಹಾವಿದ್ಯಾಲಯದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.

“ಸರ್ಕಾರಿ ಪದವಿ ಮಹಾವಿದ್ಯಾಲಯಕ್ಕೆ ಸೇರಿದ ಭೂಮಿಯನ್ನು ಕರ್ನಾಟಕ ಪ್ರದೇಶ ಕುರುಬರ ಸಂಘಕ್ಕೆ ಕೊಡಬೇಕೆಂದು ಸಚಿವ ಸಂಪುಟದಲ್ಲಿ ನಿರ್ಧರಿಸಿರುವುದು ಖಂಡನೀಯ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

Advertisements

ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ತುಳಜರಾಮ ಎನ್ ಕೆ ಮಾತನಾಡಿ, “ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ(ಸ್ವಾಯತ್ತ) ಐದು ಸಾವಿರಕ್ಕೂ ಅಧಿಕ ಮಂದಿ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ. ಈ ಪದವಿ ಕಾಲೇಜಿಗೆ ಸೇರಿದ ಮೂರು ಎಕರೆ ಏಳು ಗುಂಟೆ ಜಮೀನನ್ನು ಕರ್ನಾಟಕ ಪ್ರದೇಶ ಕುರುಬರ ಸಂಘಕ್ಕೆ ಕೊಡಬೇಕೆಂದು ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧರಿಸಿರುವುದು ಖಂಡನೀಯವಾಗಿದೆ” ಎಂದರು.

“ವಿದ್ಯಾರ್ಥಿಗಳ ಶೈಕ್ಷಣಿಕ ಏಳಿಗೆಗೆ ತೊಂದರೆ ಉಂಟುಮಾಡುತ್ತದೆ. ಸರ್ಕಾರ ಉನ್ನತ ಶಿಕ್ಷಣವನ್ನು ಬಲಪಡಿಸಿ ವಿದ್ಯಾರ್ಥಿಗಳಲ್ಲಿ ಆದರ್ಶ ಮೌಲ್ಯಗಳನ್ನು ತುಂಬಬೇಕು. ಅದನ್ನು ಬಿಟ್ಟು ಸರ್ಕಾರಗಳು ಶಿಕ್ಷಣಕ್ಕೆ ಸಂಬಂಧಪಟ್ಟ ಭೂಮಿಯನ್ನು ಶಿಕ್ಷಣೇತರ ಕೆಲಸಕ್ಕೆ ಬಳಸುತ್ತಿರುವುದು ಅತ್ಯಂತ ಆಘಾತಕಾರಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಜಿಲ್ಲಾ ಖಜಾಂಚಿ ವೆಂಕಟೇಶ ದೇವದುರ್ಗ ಮಾತನಾಡಿ, “ಶಿಕ್ಷಣಕ್ಕೆ ಸಂಬಂಧಿಸಿದ ಜಾಗವನ್ನು ಯಾವುದೇ ಸಮುದಾಯಗಳಿಗೆ ಅಥವಾ ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳುವುದನ್ನು ನಿಲ್ಲಿಸಬೇಕು, ಕಾಲೇಜು ಭೂಮಿ ಕಾಲೇಜಿಗೆ ಬಳಸಿಕೊಳ್ಳಬೇಕು. ಸಚಿವ ಸಂಪುಟದ ಈ ನಿರ್ಧಾರ ವಿದ್ಯಾರ್ಥಿಗಳ ಶೈಕ್ಷಣಿಕ ವಾತಾವರಣಕ್ಕೆ ಧಕ್ಕೆ ತರುತ್ತದೆ. ಕರ್ನಾಟಕ ರಾಜ್ಯ ಸರ್ಕಾರವು ಈ ಕೂಡಲೇ ಈ ವಿಷಯದ ಕುರಿತು ಗಮನಹರಿಸಬೇಕು ಹಾಗೂ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಇರುವ ಜಾಗವನ್ನು ಯಾವುದೇ ಸಮುದಾಯಕ್ಕೆ ಕೊಡಬಾರದು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಮನಗರ | ಕೆಪಿಟಿಸಿಎಲ್ ಸಿಬ್ಬಂದಿಗಳಿಂದಲೇ ವಿದ್ಯುತ್‌ ಕಂಬ ಕಳ್ಳತನ: ಸ್ವಾಮಿ ಹೆಚ್ ಎಸ್ ಆರೋಪ

ಈ ಸಂದರ್ಭದಲ್ಲಿ ಎಐಡಿಎಸ್‌ಒ ರಾಜ್ಯ ಉಪಾಧ್ಯಕ್ಷ ಹಣಮಂತ ಎಸ್ ಎಚ್, ಜಿಲ್ಲಾ ಸಮಿತಿ ಸದಸ್ಯರಾದ ಸಿದ್ದಾರ್ಥ್ ತಿಪ್ಪನೋರ, ಸರ್ಕಾರಿ ಪದವಿ ಮಹಾವಿದ್ಯಾಲಯ ಉಳಿಸಿ ಹೋರಾಟ ಸಮಿತಿ ಸದಸ್ಯರಾದ ಅಭಿಷೇಕ್, ಕಾಶಿನಾಥ್, ಭೀಮಾಶಂಕರ, ಸಂತೋಷಿ, ಯುವರಾಜ, ರಾಹುಲ್, ಸ್ಪೂರ್ತಿ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X