ಕಲಬುರಗಿ | ‘ವೋಟ್ ಬಚಾವೋ, ದೇಶ್ ಬಚಾವೋ’; ಎಸ್‌ಐಆರ್ ವಿರುದ್ಧ ಇಂಡಿಯಾ ಒಕ್ಕೂಟ ಪ್ರತಿಭಟನೆ

Date:

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆ‌ರ್) ಪ್ರಕ್ರಿಯೆಯನ್ನು ರದ್ದುಗೊಳಿಸಿ, ಮತದಾನದ ಹಕ್ಕಿನಿಂದ ವಂಚಿತರಾಗಿರುವ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಮರುಸೇರ್ಪಡೆಗೊಳಿಸಬೇಕು ಎಂದು ಆಗ್ರಹಿಸಿ ಇಂಡಿಯಾ ಒಕ್ಕೂಟದ ವತಿಯಿಂದ ಗುರುವಾರ ನಗರದ ಜಗತ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

- Advertisement -

ಎಸ್‌ಐಆ‌ರ್ ಪ್ರಕ್ರಿಯೆಯ ಮೂಲಕ ದೇಶದ ಕೋಟ್ಯಂತರ ಅರ್ಹ ಮತದಾರರನ್ನು ಮತದಾನದ ಹಕ್ಕಿನಿಂದ ವಂಚಿಸುವ ಷಡ್ಯಂತ್ರ ನಡೆಯುತ್ತಿದೆ. ಫಾರಂ-7ರ ದುರ್ಬಳಕೆ ಮೂಲಕ ಅರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗುತ್ತಿದೆ. ರಾಜ್ಯದ 99.32 ಲಕ್ಷಕ್ಕೂ ಅಧಿಕ ಹಾಗೂ ದೇಶದ 14 ಕೋಟಿಗೂ ಹೆಚ್ಚು ಮತದಾರರು ಮತದಾನದ ಹಕ್ಕು ಕಳೆದುಕೊಳ್ಳುವ ಆತಂಕ ಎದುರಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿನಮನ | ಕೆವಿಎನ್: ಕನ್ನಡದ ಘನವಿವೇಕ

ಕೆವಿಎನ್ ಅವರು ಮಂಡಿಸುತ್ತಿರುವ ಮಾರುಕಟ್ಟೆ ಶಕ್ತಿಗಳ ಭಾಷೆಯೊಂದಿಗಿನ ಅನುಕೂಲಸಿಂಧು ಚಲನಶೀಲ ಸಂಬಂಧಗಳ ಕುರಿತ ಗ್ರಹಿಕೆಗಳು, 'ಸಾಮ್ರಾಜ್ಯಶಾಹಿಗಳು ಮತ್ತು ದೇಶೀಯ ಆಳುವ ವರ್ಗಗಳು ಭಾಷೆಯನ್ನು ರಾಜಕಾರಣದ ಅಸ್ತ್ರವನ್ನಾಗಿ ಬಳಸುತ್ತಿವೆ' ಎನ್ನುವ ಕನ್ನಡ ವಿಚಾರ ಸಾಹಿತ್ಯದಲ್ಲಿನ...

ಅಕ್ಕಿ ಬೆಲೆ ಏರಿಕೆಯ ಹಿಂದಿನ ಆಟ ಯಾರದ್ದು?: ಕಾರ್ಪೋರೇಟ್...

ಅಕ್ಕಿ ಬೆಲೆ ಏರಿಕೆಯನ್ನು ಕೇವಲ ಭತ್ತದ ಉತ್ಪಾದನೆ ಕುಸಿತದ ಪರಿಣಾಮ ಎಂದು ವ್ಯಾಖ್ಯಾನಿಸುವುದು ಸರಿಯಲ್ಲ. ಏಕೆಂದರೆ ಮಾರುಕಟ್ಟೆಯಲ್ಲಿ ಈಗ ಮಾರಾಟವಾಗುತ್ತಿರುವ ಅಕ್ಕಿ ಬಹುತೇಕ ಹಿಂದಿನ ಬೆಳೆ ವರ್ಷಗಳಲ್ಲಿ ಉತ್ಪಾದನೆಯಾಗಿ ಸಂಗ್ರಹಿಸಲ್ಪಟ್ಟಿರುವ ಅಕ್ಕಿ. ಪ್ರಸಕ್ತ...

ಬಡವರ ನಿವೇಶನಗಳ ಮೇಲೆ ಕೆಎಐಡಿಬಿ ಕರಿ ನೆರಳು: ಸೂರು...

ಮಂಗಳೂರಿನ ಪ್ರವಾಸೋದ್ಯಮಕ್ಕೆ ಹೊಸ ಮೆರುಗನ್ನು ನೀಡಿರುವುದೇ ತಣ್ಣೀರುಬಾವಿ ಸಮುದ್ರ ತೀರ. ಈ ಸಮುದ್ರ ತೀರ ಇತ್ತೀಚಿನ ದಿನಗಳಲ್ಲಿ ತನ್ನ ಸೌಂದರ್ಯದಿಂದ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ. ವಿಭಿನ್ನ ಶೈಲಿಯ ಮನರಂಜನೆಗೆ ಹೆಸರುವಾಸಿಯಾಗಿರುವ ತಣ್ಣೀರುಬಾವಿ ಬೀಚ್...

ಚುನಾವಣಾ ಆಯೋಗದ ಲೋಪದಿಂದ ಮತದಾರರ ಪಟ್ಟಿಯಿಂದ ಹೊರಗುಳಿದ ಅರ್ಹ ಮತದಾರರಿಗೆ ಮತ್ತೆ ಫಾರಂ-6 ಸಲ್ಲಿಸುವಂತೆ ಸೂಚಿಸುತ್ತಿರುವುದು ಕಾನೂನುಬಾಹಿರವಾಗಿದೆ. ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದ್ದವರನ್ನೇ ಹೊಸ ಮತದಾರರಂತೆ ಅರ್ಜಿ ಸಲ್ಲಿಸುವಂತೆ ಒತ್ತಾಯಿಸುವ ಮೂಲಕ ಆಯೋಗ ಮತದಾರರನ್ನು ಸಂಕಷ್ಟಕ್ಕೆ ದೂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ನಡೆಸುವುದು ನಾಗರಿಕರ ಹಕ್ಕಾಗಿದೆ. ಆದರೆ, ದೆಹಲಿಯಲ್ಲಿ ಪ್ರತಿಭಟನಾಕಾರರಿಗೆ ನಿರ್ಬಂಧ ವಿಧಿಸಿ, ಪೊಲೀಸರು ಹಾಗೂ ಅರೆಸೈನಿಕ ಪಡೆಗಳನ್ನು ನಿಯೋಜಿಸುವ ಮೂಲಕ ಭಯದ ವಾತಾವರಣ ಸೃಷ್ಟಿಸಲಾಗುತ್ತಿದೆ. ಹೋರಾಟಗಾರರ ಬಂಧನ ಮತ್ತು ದಮನಕಾರಿ ಕ್ರಮಗಳು ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ಪ್ರತಿಬಿಂಬಿಸುತ್ತಿವೆ ಎಂದು ಟೀಕಿಸಿದರು.

ಏಕಪಕ್ಷೀಯವಾಗಿ ಎಸ್‌ಐಆ‌ರ್ ಪ್ರಕ್ರಿಯೆ ಜಾರಿಗೊಳಿಸಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾ‌ರ್ ಅವರನ್ನು ಹುದ್ದೆಯಿಂದ ವಜಾಗೊಳಿಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಪ್ರತಿಭಟನಾಕಾರರ ಮೇಲೆ ದೌರ್ಜನ್ಯ ಎಸಗಿದ ಪೊಲೀಸರ ವಿರುದ್ಧ ಕ್ರಮ ಜರುಗಿಸಬೇಕು ಹಾಗೂ ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

ಹಕ್ಕೊತ್ತಾಯಗಳು: ದೆಹಲಿ ಪೊಲೀಸರ ಕಿರುಕುಳ ಮತ್ತು ಬೇಕಾಬಿಟ್ಟಿ ಬಂಧನಗಳನ್ನು ತಕ್ಷಣ ನಿಲ್ಲಿಸಬೇಕು. ಕಲಬುರಗಿ ಜಿಲ್ಲೆಯ 4.77 ಲಕ್ಷ ಸೇರಿದಂತೆ ರಾಜ್ಯದ 99.32 ಲಕ್ಷ ಅರ್ಹ ಮತದಾರರನ್ನು ಮತದಾರರ ಪಟ್ಟಿಗೆ ಮರುಸೇರ್ಪಡೆಗೊಳಿಸಬೇಕು. ಎಸ್‌ಐಆ‌ರ್ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು. ಫಾರಂ-7 ದುರ್ಬಳಕೆ ಮಾಡಿದವರ ಹಾಗೂ ಅದಕ್ಕೆ ಪ್ರೇರಣೆ ನೀಡಿದ ಬಿಜೆಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಬೇಡಿಕೆಗಳು ಈಡೇರದಿದ್ದರೆ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ‘ಮತ ಉಳಿಸಿ, ದೇಶ ಉಳಿಸಿ’ ಅಭಿಯಾನ; ಎಸ್‌ಐಆರ್ ರದ್ದತಿಗೆ ‘ಇಂಡಿಯಾ’ ಮೈತ್ರಿಕೂಟ ಆಗ್ರಹ

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಡಾ. ಕಿರಣ ದೇಶಮುಖ, ಎಂಎಲ್‌ಸಿ ಜಗದೇವ ಗುತ್ತೇದಾರ, ಮಾಜಿ ಸಚಿವ ರೇವೂನಾಯಕ್ ಬೆಳಮಗಿ, ಇಂಡಿಯಾ ಒಕ್ಕೂಟದ ಮುಖಂಡರಾದ ಮಹೇಶಕುಮಾರ ರಾಠೋಡ, ಮಜ‌ರ್ ಅಲಂಖಾನ್, ಪ್ರವೀಣ ಪಾಟೀಲ ಹರವಾಳ, ಶಕೀಲ್‌ ಸರಡಗಿ, ಲಿಂಗರಾಜ ತಾರಫೈಲ್, ಶ್ಯಾಮ್ ನಾಟೀಕಾರ, ಮೌಲಾ ಮುಲ್ಲಾ, ಭೀಮಣ್ಣ ಸಾಲಿ, ಲವಿತ್ರ ವಸ್ತ್ರದ, ಭೀಮಾಶಂಕರ ಮಾಡಿಯಾಳ, ಪವನಕುಮಾರ ವಳಕೇರಿ, ಪರಶುರಾಮ ನಾಟೇಕಾರ, ಚಂದ್ರಶೇಖರ ಹಡಪದ ತೋನಸನಹಳ್ಳಿ, ಮಂಜು ಸಿ.ಕೆ. ಕಮಲಾಪೂರ, ಧರ್ಮರಾಜ ಹೇರೂರ, ಟೈಗರ್ ವಿಘನೇಶ, ಮಲ್ಲಿಕಾರ್ಜುನ ನಿಲೂರೆ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts
Advertisements

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಯುವಕರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರಿತುಕೊಳ್ಳಬೇಕು: ಶಾಸಕ ಎಸ್.ವಿ. ಸಂಕನೂರ

"ದೇಶದ ಭವಿಷ್ಯ ಯುವಜನತೆಯ ಕೈಯಲ್ಲಿದ್ದು, ಯುವಕರೇ ದೇಶದ ನಿಜವಾದ ಸಂಪತ್ತು ಹಾಗೂ...

ಹಾವೇರಿಯಲ್ಲಿ ನವೆಂಬರ್ 7ರಂದು ಪ್ರಜಾಸೇವೆ ಆಂದೋಲನ

ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಅವರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸರ್ಕಾರ...

ರೋಹನ್ ಕಾರ್ಪೋರೇಶನ್‌ನ ನೂತನ ಕಚೇರಿ ಉದ್ಘಾಟನೆ: ನ. 6ರಿಂದ ಮೂರು ದಿನಗಳ ಪ್ರಾಜೆಕ್ಟ್ ಎಕ್ಸಿಬಿಷನ್

ನ. 6ರಿಂದ ಮೂರು ದಿನಗಳ ಪ್ರಾಜೆಕ್ಟ್ ಎಕ್ಸಿಬಿಷನ್; ವಿಶೇಷ ದರಗಳಲ್ಲಿ ಖರೀದಿಗೆ...

ಬಡವರ ನಿವೇಶನಗಳ ಮೇಲೆ ಕೆಎಐಡಿಬಿ ಕರಿ ನೆರಳು: ಸೂರು ಕಳೆದುಕೊಳ್ಳುವ ಭೀತಿಯಲ್ಲಿ ಬಡ ಕುಟುಂಬಗಳು!

ಮಂಗಳೂರಿನ ಪ್ರವಾಸೋದ್ಯಮಕ್ಕೆ ಹೊಸ ಮೆರುಗನ್ನು ನೀಡಿರುವುದೇ ತಣ್ಣೀರುಬಾವಿ ಸಮುದ್ರ ತೀರ. ಈ...