ಕಲಬುರಗಿ | ಎಸ್‌ಸಿಎಸ್ಪಿ, ಟಿಎಸ್ಪಿ ಅನುದಾನ ದಲಿತರ ಸಬಲೀಕರಣಕ್ಕೆ ಬಳಕೆಯಾಗಲಿ : ಅರ್ಜುನ ಭದ್ರೆ

Date:

Advertisements

ದಲಿತರ ಅಭಿವೃದ್ಧಿಗೆ ಮೀಸಲಿರುವ ಎಸ್‌ಸಿಎಸ್ಪಿ, ಟಿಎಸ್ಪಿ ಅನುದಾನವನ್ನು ರಾಜ್ಯ ಸರ್ಕಾರ ಪಂಚ ಗ್ಯಾರಂಟಿಗಳಿಗೆ ಬಳಕೆ ಮಾಡಲು ಹೊರಟಿರುವುದು ಖಂಡನೀಯ ಎಂದು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ ) ರಾಜ್ಯ ಸಂಘಟನಾ ಸಂಚಾಲಕ ಅರ್ಜುನ ಭದ್ರೆ ಎಂದರು.

2013ರಲ್ಲಿ ಸಿದ್ರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕರ್ನಾಟಕ ಅನುಸೂಚಿತ ಜಾತಿಗಳ ವಿಶೇಷ ಹಂಚಿಕೆ ಮತ್ತು ಬುಡಕಟ್ಟುಗಳ ಉಪಹಂಚಿಕೆ ಅಧಿನಿಯಮವನ್ನು ಜಾರಿಗೆ ತರಲಾಯಿತು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಸಂಖ್ಯೆಗೆ ತಕ್ಕಂತೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನ ಹಂಚಿಕೆ ಮಾಡಬೇಕಾಗುತ್ತದೆ. ದಲಿತರ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಅನುದಾನ ಖರ್ಚು ಮಾಡಬೇಕಾಗುತ್ತದೆ. ಸರಕಾರ ಈ ಕಾಯ್ದೆ ಉಲ್ಲಂಘಿಸಿ ಅನ್ಯ ಯೋಜನೆಗಳಿಗೆ ಬಳಕೆ ಮಾಡುತ್ತಿರುವುದು ಖಂಡನೀಯʼ ಎಂದು ಪತ್ರಿಕಾಗೋಷ್ಠಿಯಲ್ಲಿ ಅವರು ದೂರಿದರು.

ʼರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನ ಬೇರೆ ಯೋಜನೆಗಳಿಗೆ ಬಳಸಿಕೊಳ್ಳಬಾರದು. ಈ ಬಗ್ಗೆ ಎಲ್ಲ ದಲಿತಪರ ಸಂಘಟನೆಗಳು ಒಗ್ಗೂಡಿ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲು ಇಚ್ಚಾಶಕ್ತಿ ಪ್ರದರ್ಶಿಸಬೇಕು. ಇದರ ವಿರುದ್ಧ ದಲಿತ ಸಂಘಟನೆಗಳು ಐಕ್ಯತೆಯಿಂದ ಹೋರಾಡಬೇಕು. ಇಲ್ಲದಿದ್ದರೆ ಯೋಜನೆಯ ಉದ್ದೇಶವೇ ಬುಡಮೇಲಾಗುವ ಸಾಧ್ಯತೆ ಇದೆ ಎಂದ ಅವರು, ಈ ಬಗ್ಗೆ ಚಳುವಳಿ ರೂಪಿಸಲು ಆಗಸ್ಟ್ 5 ರಂದು ರಂದು ಸಭೆ ಸೇರಲಾಗುವುದುʼ ಎಂದು ಮಾಹಿತಿ ನೀಡಿದರು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X