ಕಲಬುರಗಿ | ಕಾಂಗ್ರೆಸ್ ಅಭ್ಯರ್ಥಿ ಅಜಯ್ ಸಿಂಗ್‌ಗೆ ಬೆಂಬಲ ಘೋಷಿಸಿದ ಎಸ್‌ಡಿಪಿಐ

Date:

  • ಎಸ್‌ಡಿಪಿಐ ಮುಖಂಡ ಮೋಹಿಯುದ್ದಿನ್ ಇನಾಂದಾರ ಘೋಷಣೆ
  • 10 ಬೇಡಿಕೆಗಳನ್ನು ಇಟ್ಟು ಬೆಂಬಲ ಸೂಚಿಸಿದ ಹೋರಾಟಗಾರ

ಜೇವರ್ಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಾ. ಅಜಯ್‌ ಸಿಂಗ್‌ಗೆ ಎಸ್‌ಡಿಪಿಐ ಮುಖಂಡರು ಬೆಂಬಲ ಘೋಷಿಸಿದ್ದಾರೆ. ಚುನಾವಣೆಯಲ್ಲಿ ಕೋಮುವಾದಿ ಪಕ್ಷವನ್ನು ದೂರವಿಡುವ ಉದ್ದೇಶದಿಂದ ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲಿಸುವುದಾಗಿ ಪಣ ತೊಟ್ಟಿದ್ದಾರೆ.

- Advertisement -

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಯಡ್ರಾಮಿ ಗ್ರಾಮದ ಸಾಮಾಜಿಕ ಹೋರಾಟಗಾರ, ನ್ಯಾಯವಾದಿ ಮೋಹಿಯುದ್ದಿನ್ ಇನಾಂದಾರ ಪತ್ರಿಕಾ ಗೋಷ್ಠಿ ನಡೆಸಿದ್ದಾರೆ. “ಮೇ. 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಜೇವರ್ಗಿ ಮತ್ತು ಯಡ್ರಾಮಿ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗೆ ಸ್ವತಂತ್ರವಾಗಿ ಮತ್ತು ಷರತ್ತುಬದ್ಧವಾಗಿ ಬೆಂಬಲ ನೀಡುತ್ತಿದ್ದೇವೆ” ಎಂದು ಘೋಷಣೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಈ ಸುದ್ದಿ ಓದಿದ್ದೀರಾ?: ಕಲಬುರಗಿ | ಜಿಲ್ಲೆಗೆ ರಾಹುಲ್ ಗಾಂಧಿ ಭೇಟಿ; ಜಿಲ್ಲಾ ಕಾಂಗ್ರೆಸ್‌ ತುರ್ತು ಪತ್ರಿಕಾಗೋಷ್ಠಿ

“ಜೇವರ್ಗಿ ತಾಲೂಕಿನ ಜನತೆಗೆ ಗೊತ್ತಿರುವಂತೆ ನಾನು 8 ವರ್ಷದಿಂದ ಜೇವರ್ಗಿ, ಯಡ್ರಾಮಿ ತಾಲೂಕಿನ ಅಭಿವೃದ್ಧಿಗೆ ಮತ್ತು ಶಿಕ್ಷಣಕ್ಕೆ ನ್ಯಾಯದ ಪರವಾಗಿ, ಅನ್ಯಾಯದ ವಿರುದ್ಧ ಹೋರಾಟಗಳು, ಚಳುವಳಿಗಳು ಹಾಗೂ ಸಾಮಾಜಿಕ ಸೇವೆ ಮಾಡುತ್ತ ಬಂದಿದ್ದೇನೆ” ಎಂದು ತಿಳಿಸಿದರು.

ಕಾಂಗ್ರೆಸ್‌ ಅಭ್ಯರ್ಥಿ ಎದುರು ಎಸ್‌ಡಿಪಿಐ ಇಟ್ಟಿರುವ ಷರತ್ತುಗಳು

  1. ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ, ಪುರಸಭೆ ಚುನಾವಣೆಯಲ್ಲಿ ನಮ್ಮ ಸಮುದಾಯದವರಿಗೆ ಹೆಚ್ಚಿನ ಆದ್ಯತೆ ಕೊಟ್ಟು ಗೆಲ್ಲಿಸಿ ತರಬೇಕು. ಮುಖ್ಯವಾಗಿ ಅಲ್ಪಸಂಖ್ಯಾತರನ್ನು ರಾಜಕೀಯವಾಗಿ ಬೆಳಸಬೇಕು.
  2. ಜೇವರ್ಗಿ ಮತ್ತು ಯಡ್ರಾಮಿ ತಾಲೂಕಿನಲ್ಲಿರುವ ಸರ್ಕಾರಿ ಅಲ್ಪಸಂಖ್ಯಾತ ವಸತಿ ಶಾಲೆಗಳಿಗೆ ಹೆಚ್ಚಿನ ಆದ್ಯತೆ ಕೊಡಬೇಕು ಹಾಗೂ ಇವುಗಳನ್ನು ಹೆಚ್ಚಾಗಿ ಅಭಿವೃದ್ಧಿಪಡಿಸಬೇಕು.
  3. ಅಲ್ಪಸಂಖ್ಯಾತರಿಗೆ ಸಂಬಂಧಪಟ್ಟಂತೆ ದರ್ಗಾ ಆಶೂರಖಾನ ಮಸಿದಿ, ಈದ್ಗಾ ಮತ್ತು ಖಬರಸ್ತಾನಗಳ ದುರಸ್ತಿ ಮಾಡಲು ಹೆಚ್ಚಿನ ಅನುದಾನ ಕೊಡಬೇಕು.
  4. ಅಲ್ಪಸಂಖ್ಯಾತರ ಯಾವುದೇ ಕಾರ್ಯಾಲಯದಲ್ಲಿ ಯಾವುದೇ ಕೆಲಸಗಳು ಇದ್ದರೆ ಕಾನೂನು ರೀತಿಯಲ್ಲಿ ಸಹಕಾರ ಮಾಡಬೇಕು.
  5. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಜೇವರ್ಗಿ ಮತ್ತು ಯಡ್ರಾಮಿಯಿಂದ ನಿಗಮ ಮಂಡಳಿಗಳಲ್ಲಿ ಕೂಡ ಅಲ್ಪಸಂಖ್ಯಾತರಿಗೆ ಒಂದುಸ್ಥಾನ ಕೊಡಬೇಕು. ಇನ್ನಿತರ ಅನೇಕ ಷರತ್ತುಗಳು ಇಟ್ಟಿದ್ದೇವೆ ನಮ್ಮ ಷರತ್ತುಗಳಿಗೆ ಒಪ್ಪಿಕೊಂಡಿದ್ದಾರೆ.
  6. ತಮ್ಮ ಸರ್ಕಾರ ಬಂದಲ್ಲಿ ಅಮಾಯಕರ ಮೇಲೆ ಆದಂತಹ ಸುಳ್ಳು ಪ್ರಕರಣಗಳು ಮತ್ತು ರೌಡಿಶೀಟರಗಳು ಹಿಂಪಡೆಯಬೇಕು.

    “ಈ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕೆಂದು ಕೇಳಿಕೊಂಡಿದ್ದು, ಇದಕ್ಕೆ ಡಾ. ಅಜಯ್ ಸಿಂಗ್ ಒಪ್ಪಿಕೊಂಡಿದ್ದಾರೆ. ಆದ್ದರಿಂದ ನಾವು ಸ್ವತಂತ್ರವಾಗಿ ಷರತ್ತುಬದ್ಧವಾಗಿ ಕಾಂಗ್ರೆಸ್‌ಗೆ ಸಂಪೂರ್ಣ ಬೆಂಬಲ ನೀಡುತ್ತಿದ್ದೇವೆ” ಎಂದು ಹೇಳಿದರು.

    “ನಾನು ಮತ್ತು ನನ್ನ ಬೆಂಗಲಿಗರು ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಸೇರುತ್ತಿಲ್ಲ. ಕೇವಲ ಚುನಾವಣೆ ನಿಮಿತ್ತವಾಗಿ ಬೆಂಬಲ ಇರುತ್ತದೆ. ಒಂದುವೇಳೆ ಡಾ. ಅಜಯ್ ಸಿಂಗ್ ಚುನಾವಣೆ ಮುಗಿದ ನಂತರ ಅಲ್ಪಸಂಖ್ಯಾತರನ್ನು ಶೈಕ್ಷಣಿಕವಾಗಿ, ರಾಜಕೀಯವಾಗಿ, ಸಾಮಾಜಿಕವಾಗಿ ಕಡೆಗಣಿಸಿದರೆ ನಾನು ಹಿಂದೆ ಕೂಡ ಅಜಯ್ ಸಿಂಗ್ ಅವರಿಗೆ ಟೀಕೆ ಟಿಪ್ಪಣಿಗಳು ಮತ್ತು ವಿರೋಧ ಮಾಡಿದ ನನ್ನ ಇತಿಹಾಸ ಇದೆ. ಮುಂದಿನ ದಿನಗಳಲ್ಲಿ ಕೂಡ ಜನರ ಮತ್ತು ಅಭಿವೃದ್ಧಿಯ ಕಾರ್ಯಗಳು ಮಾಡಿಲ್ಲ ಅಂದರೆ ನಾನು ವಿರೋಧ ಮಾಡುತ್ತೇನೆ” ಎಂದು ಎಚ್ಚರಿಸಿದರು.

    “ನನ್ನ ಬೆಂಬಲಿಗರ, ಅಭಿಮಾನಿಗಳ, ಹಿತೈಷಿಗಳ ಜೊತೆ ಸಭೆಮಾಡಿ, ಚರ್ಚೆಮಾಡಿ ಅವರ ಅನಿಸಿಕೆಗಳು ಹಾಗೂ ಒಪ್ಪಿಗೆ ಮೇರೆಗೆ ಕೋಮುವಾದಿ, ಜಾತಿವಾದಿ, ಅಲ್ಪಸಂಖ್ಯಾತರ ವಿರೋಧಿ ಬಿಜೆಪಿಗೆ ಸೋಲಿಸುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಲಾಗಿದೆ. ನನ್ನ ವಿರುದ್ಧ ಕೆಲವು ಊಹಾ ಪೋಹಗಳು, ಅಪ ಪ್ರಚಾರಗಳು, ಸುಳ್ಳು ಸುದ್ದಿಗಳು ಕೇಳಿ ಬರುತ್ತಿವೆ. ಅದಕ್ಕೆ ನಾನು ವೇದಿಕೆಯ ಮೇಲೆ ನೇರವಾಗಿ ಉತ್ತರ ಕೊಡುತ್ತೇನೆ. ಮುಂದಿನ ದಿನಗಳಲ್ಲಿ ಚುನಾವಣೆ ನಂತರವೂ ಕೂಡ ನಾನು ನ್ಯಾಯದ ಪರ, ಅನ್ಯಾಯದ ವಿರುದ್ಧ, ಅಭಿವೃದ್ಧಿಗೆ ಸಂಬಂಧಪಟ್ಟಂತೆ ನಿರಂತರವಾಗಿ ನನ್ನ ಹೋರಾಟ ಮುಂದುವರೆಸುತ್ತೇನೆ“ ಎಂದು ಭರವಸೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...