ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ಮೂರನೇ ಹಿರಿಯ ನ್ಯಾಯಾಧೀಶರೊಬ್ಬರು ಸೋಮವಾರ ಬೆಳಿಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಜಿಲ್ಲಾ ನ್ಯಾಯಾಲಯದ ಹಿರಿಯ ಶ್ರೇಣಿಯ ನ್ಯಾಯಾಧೀಶ ವಿಶ್ವನಾಥ್ ಮುಗುಟಿ (44) ಮೃತರು.
ಕಳೆದ ವಾರವಷ್ಟೇ ಕಲಬುರಗಿ ಕೋರ್ಟ್‌ಗೆ ವಿಶ್ವನಾಥ್ ಅವರು ವರ್ಗಾವಣೆಯಾಗಿದ್ದರು. ಸೋಮವಾರ ಬೆಳಗ್ಗೆ ಎಂದಿನಂತೆ ನ್ಯಾಯಾಲಯಕ್ಕೆ ತೆರಳಿದ್ದರು. ಕೋರ್ಟ್ ಹಾಲ್‌ಗೆ ತೆರಳುವ ಮುನ್ನವೇ ಈ ಘಟನೆ ನಡೆದಿದೆ.
ಬೆಳಿಗ್ಗೆ ನ್ಯಾಯಾಲಯಕ್ಕೆ ಬಂದು ಕೋರ್ಟ್ ಹಾಲ್‌ಗೆ ತೆರಳುವ ಮುನ್ನವೇ ಎದೆನೋವು ಕಾಣಿಸಿಕೊಂಡಿತು. ತಕ್ಷಣವೇ ಅವರನ್ನು ನಗರದ ಜಯದೇವ ಹೃದ್ರೋಗ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರು ತಪಾಸಣೆ ನಡೆಸಿದಾಗ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.