ಕಲಬುರಗಿ | ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯ ಸಾಬೀತು; ಆರೋಪಿಗೆ 20 ವರ್ಷ ಶಿಕ್ಷೆ

Date:

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿತ ಮಲತಂದೆಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿರುವ ವಿಶೇಷ ಪೋಕ್ಸೊ ನ್ಯಾಯಾಲಯ, ಸಂತ್ರಸ್ತ ಬಾಲಕಿಗೆ ₹5 ಲಕ್ಷ ಪರಿಹಾರ ನೀಡುವಂತೆಯೂ ಆದೇಶಿಸಿದೆ.

- Advertisement -

ನಗರದ ಸಬ್ ಅರ್ಬನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ ಕಲಬುರಗಿಯ ವಿಶೇಷ ಪೋಕ್ಸೊ ನ್ಯಾಯಾಲಯ (ಎಫ್‌ಟಿಎಸ್‌ಸಿ-1), ಆರೋಪಿಯ ವಿರುದ್ಧದ ಆರೋಪಗಳು ಸಾಕ್ಷ್ಯಾಧಾರಗಳಿಂದ ಸಾಬೀತಾಗಿವೆ ಎಂದು ತೀರ್ಮಾನಿಸಿ ಶಿಕ್ಷೆ ಪ್ರಕಟಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಪ್ರಕರಣದ ವಿವರಗಳ ಪ್ರಕಾರ, ಬಾಲಕಿಯ ತಾಯಿ ಮನೆಯಿಂದ ಹೊರಗಡೆ ತೆರಳುತ್ತಿದ್ದ ಸಂದರ್ಭಗಳಲ್ಲಿ ಆರೋಪಿ ಮಲತಂದೆ ಬಾಲಕಿಯನ್ನು ಬೆದರಿಸಿ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದನು. ಈ ವಿಷಯವು ಬೆಳಕಿಗೆ ಬಂದ ಬಳಿಕ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ನಡೆಸಿದ ಪೊಲೀಸರು ಭಾರತೀಯ ನ್ಯಾಯ ಸಂಹಿತೆ ಹಾಗೂ ಪೋಕ್ಸೊ ಕಾಯ್ದೆಯ ವಿವಿಧ ಕಲಂಗಳಡಿ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ವಿಚಾರಣೆ ವೇಳೆ ಸಂತ್ರಸ್ತೆಯ ಹೇಳಿಕೆ, ವೈದ್ಯಕೀಯ ದಾಖಲೆಗಳು ಹಾಗೂ ಇತರೆ ಪುರಾವೆಗಳನ್ನು ಪರಿಶೀಲಿಸಿದ ನ್ಯಾಯಾಲಯ ಆರೋಪಿಯ ಅಪರಾಧವನ್ನು ದೃಢಪಡಿಸಿತು.

ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ಎಲ್. ಚವ್ಹಾಣ ಅವರು ಪೋಕ್ಸೊ ಕಾಯ್ದೆಯ ಕಲಂ 6ರ ಅಡಿಯಲ್ಲಿ ಆರೋಪಿ ಹರಿಶ್ಚಂದ್ರ ಚವ್ಹಾಣಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿದರು. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ ಆರು ತಿಂಗಳ ಸರಳ ಜೈಲು ಶಿಕ್ಷೆ ಅನುಭವಿಸುವಂತೆ ಆದೇಶಿಸಿದರು.

ಜೊತೆಗೆ ಸಂತ್ರಸ್ತ ಬಾಲಕಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ ₹5 ಲಕ್ಷ ಪರಿಹಾರಧನ ವಿತರಿಸಲು ಸೂಚನೆ ನೀಡಿದ್ದು, ಒಂದು ತಿಂಗಳೊಳಗೆ ಪರಿಹಾರ ನೀಡುವಂತೆ ಆದೇಶಿಸಲಾಗಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ₹20 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ, ಕಾನ್‌ಸ್ಟೆಬಲ್‌

ಪ್ರಕರಣದ ತನಿಖೆಯನ್ನು ಸಬ್ ಅರ್ಬನ್ ಪೊಲೀಸ್ ಠಾಣೆಯ ತನಿಖಾಧಿಕಾರಿ ಸಂತೋಷ ಎಲ್. ತಟ್ಟೆಪಳ್ಳಿ ನಡೆಸಿದ್ದು, ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ. ತುಪ್ಪದ ವಾದ ಮಂಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳುವಿಗೆ ಆಡಳಿತ ಭಾಷೆಯ ಮಾನ್ಯತೆ: ಕರಾವಳಿಯ ದಶಕಗಳ ಕನಸಿಗೆ ಹೊಸ ಅಧ್ಯಾಯ

ಕರಾವಳಿಯ ಜನರ ಬಹುಕಾಲದ ಬೇಡಿಕೆಯಾಗಿದ್ದ ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ...

ಚಿಕ್ಕಮಗಳೂರು | ನೂರಾರು ವರ್ಷ ಕೃಷಿ ಮಾಡಿದ್ದೇವೆ; ಕಾಯ್ದೆಯಿಂದ ಒಕ್ಕಲೆಬ್ಬಿಸಬೇಡಿ: ಶಾಸಕಿ ನಯನ ಮೋಟಮ್ಮ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿರಂಗನ್ ವರದಿ...

ಚಿಕ್ಕಮಗಳೂರು | ಅರಣ್ಯ ಕಾಯ್ದೆ: ಭೂಮಿ, ವಸತಿ ಇಲ್ಲದೆ ಜನರ ಬದುಕು ಕಷ್ಟ; ಟಿ.ಡಿ ರಾಜೇಗೌಡ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...