ವಸತಿ ಯೋಜನೆಯಡಿ ಮನೆ ಮಂಜೂರು ಮಾಡುವುದಾಗಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರ ವಿರುದ್ಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆ ನೀಡಿದ ದೂರಿನ ಮೇರೆಗೆ ಮರಗುತ್ತಿ ಗ್ರಾಮ ಪಂಚಾಯಿತಿ ಸದಸ್ಯ, ಮಳಸಾಪುರ ತಾಂಡಾ ನಿವಾಸಿ ನೀಲಕಂಠ ರಾಠೋಡ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈತನ ವಿರುದ್ಧ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ 2019ರಲ್ಲಿ ಅತ್ಯಾಚಾರ ಪ್ರಕರಣವೊಂದು ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
‘ಚುನಾವಣೆಯಲ್ಲಿ ಗೆಲ್ಲಿಸಿದ್ದಕ್ಕೆ ನಿಮಗೆ ವಸತಿ ಯೋಜನೆಯಡಿ ಮನೆ ಮಂಜೂರು ಮಾಡಿಸುವುದಾಗಿ ಆಶ್ವಾಸನೆ ಕೊಟ್ಟು, ಫೋನ್ ನಂಬರ್ ಪಡೆದ. ವಿನಾಕಾರಣ ಗೃಹಿಣಿಗೆ ಫೋನ್ ಕರೆ ಮಾಡಿ, ಲೈಂಗಿಕ ಕ್ರಿಯೆಗೆ ಒಪ್ಪಿಕೊಳ್ಳುವಂತೆ ಪೀಡಿಸುತ್ತಿದ್ದ ಎಂದು ಆರೋಪಿಸಿ ಸಂತ್ರಸ್ತೆ ದೂರು ಕೊಟ್ಟಿದ್ದಾರೆʼ ಎಂದು ಮಾಹಿತಿ ನೀಡಿದ್ದಾರೆ.
ಈ ಕುರಿತು ಕಮಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.