ಕಲಬುರಗಿ | ಯುವತಿಗೆ ಲೈಂಗಿಕ ಕಿರುಕುಳ: ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

Date:

ಖಾಸಗಿ ಫೋಟೋಗಳನ್ನು ದುರ್ಬಳಕೆ ಮಾಡಿಕೊಂಡು ವಿವಾಹಿತ ಯುವತಿಗೆ ಬೆದರಿಕೆ ಹಾಕಿ, ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಜೇವರ್ಗಿ ತಾಲೂಕಿನ ವ್ಯಕ್ತಿಯೊಬ್ಬರ ವಿರುದ್ಧ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಆರೋಪಿಯನ್ನು ಜೇವರ್ಗಿ ತಾಲೂಕಿನ ಎಸ್.ಎನ್. ಹಿಪ್ಪರಗಾ ಗ್ರಾಮದ ಮಡಿವಾಳಪ್ಪ ಅಮರಾವತಿ ಎಂದು ಗುರುತಿಸಲಾಗಿದ್ದು, ಆತ ರಾಷ್ಟ್ರ ರಕ್ಷಣಾ ಪಡೆಯ ಜಿಲ್ಲಾಧ್ಯಕ್ಷನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಪೊಲೀಸರಿಗೆ ನೀಡಿರುವ ದೂರಿನ ಪ್ರಕಾರ, ಮಹಿಳೆಯ ಕುಟುಂಬಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ನೆರವು ನೀಡುವ ನೆಪದಲ್ಲಿ ಆರೋಪಿ ಪರಿಚಯ ಬೆಳೆಸಿಕೊಂಡಿದ್ದಾನೆ. ನಂತರ ಮಹಿಳೆಗೆ ತಿಳಿಯದಂತೆ ಆಕೆಯ ಖಾಸಗಿ ಫೋಟೋಗಳನ್ನು ತನ್ನ ಮೊಬೈಲ್‌ನಲ್ಲಿ ಸಂಗ್ರಹಿಸಿಕೊಂಡಿದ್ದು, ವಿವಾಹದ ಬಳಿಕ ಅವುಗಳನ್ನು ಪತಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ದೂರಿನಲ್ಲಿ ಮತ್ತಷ್ಟು ಆರೋಪಿಸಿರುವಂತೆ, ಫೋಟೋಗಳನ್ನು ಅಳಿಸುವುದಾಗಿ ಹೇಳಿ ಹಣಕ್ಕೆ ಬೇಡಿಕೆ ಇಟ್ಟಿದ್ದಲ್ಲದೆ, ಕಲಬುರಗಿಗೆ ಬರುವಂತೆ ಒತ್ತಾಯಿಸಿದ್ದಾನೆ. ಬಳಿಕ ಜುಲೈ 11ರಂದು ನಗರದ ಪಬ್ಲಿಕ್ ಗಾರ್ಡನ್‌ಗೆ ಬಂದಿದ್ದ ಮಹಿಳೆಯನ್ನು ಕಾರಿನಲ್ಲಿ ಬೇರೆಡೆಗೆ ಕರೆದೊಯ್ದು ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಮಹಿಳೆ ಪೊಲೀಸರಿಗೆ ಕರೆ ಮಾಡಲು ಮುಂದಾದಾಗ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಈ ವೇಳೆ ಪೊಲೀಸರು ಸ್ಥಳಕ್ಕೆ ಬರುತ್ತಿರುವುದನ್ನು ಗಮನಿಸಿದ ಆರೋಪಿ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ

ಮಹಿಳೆಯ ದೂರಿನ ಆಧಾರದ ಮೇಲೆ ಜುಲೈ 12ರಂದು ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು,

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಕಾಣೆಯಾದ ಮಕ್ಕಳ ಪತ್ತೆಗೆ ವಿಶೇಷ ಕಾರ್ಯಪಡೆ ಸಮಿತಿ ಸಭೆ

ನಗರ ಪೊಲೀಸ್ ಆಯುಕ್ತಾಲಯದ ಪೊಲೀಸ್ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ,...

ಕಲಬುರಗಿ | ಕುಡಿಯುವ ನೀರಿಗಾಗಿ ಖಾಲಿ ಕೊಡ ಹಿಡಿದು ಪಾಲಿಕೆ ಎದುರುಗಡೆ ಪ್ರತಿಭಟನೆ

ನಗರದ ವಾರ್ಡ್‌ ನಂ. 2ರ ಕೆ.ಕೆ. ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ...

ಯಾದಗಿರಿ | ಪಂಚಾಯಿತಿ ಚುನಾವಣೆಗಳಲ್ಲೂ ಪರಿಶಿಷ್ಟ ಜಾತಿಗಳಿಗೆ ರಾಜಕೀಯ ಒಳಮೀಸಲಾತಿ ಕಲ್ಪಿಸಲು ಆಗ್ರಹ

ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪರಿಶಿಷ್ಟ ಜಾತಿಗಳನ್ನು ಪ್ರವರ್ಗ-ಎ, ಪ್ರವರ್ಗ-ಬಿ...

ಕಲಬುರಗಿ | ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯಕ್ಕೆ ಆಗ್ರಹ

ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸುವುದು ಹಾಗೂ ಸರ್ಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ...