ಕಲಬುರಗಿ | ಸಾರ್ವಜನಿಕ ಶಿಕ್ಷಣ ಬಲವರ್ಧನೆಗೆ ಎಸ್‌ಎಫ್‌ಐ ಆಗ್ರಹ: 17ನೇ ರಾಜ್ಯ ಸಮ್ಮೇಳನದ ಬಹಿರಂಗ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಕೆ

Date:

ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸುವುದು, ಕೋಮು ಸೌಹಾರ್ದತೆ ಕಾಪಾಡುವುದು ಹಾಗೂ ಕಲ್ಯಾಣ ಕರ್ನಾಟಕದಲ್ಲಿ 371(ಜೆ) ಮೀಸಲಾತಿ ಸಮರ್ಪಕವಾಗಿ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) 17ನೇ ರಾಜ್ಯ ಸಮ್ಮೇಳನದ ಅಂಗವಾಗಿ ಶುಕ್ರವಾರ ನಗರದ ಜಗತ್ ವೃತ್ತದಲ್ಲಿ ಬೃಹತ್ ಬಹಿರಂಗ ಸಭೆ ನಡೆಯಿತು.

- Advertisement -

ಇದಕ್ಕೂ ಮುನ್ನ ನಗರದ ತಿಮ್ಮಾಪುರಿ ವೃತ್ತದಿಂದ ಜಗತ್ ವೃತ್ತದವರೆಗೆ ವಿದ್ಯಾರ್ಥಿಗಳು ಹಾಗೂ ಸಂಘಟನೆಯ ಕಾರ್ಯಕರ್ತರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ಶಿಕ್ಷಣ ಮತ್ತು ವಿದ್ಯಾರ್ಥಿಗಳ ಹಕ್ಕುಗಳ ಪರ ಘೋಷಣೆಗಳನ್ನು ಮೊಳಗಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಸಭೆಯನ್ನುದ್ದೇಶಿಸಿ ಮಾತನಾಡಿದ ಡಾ. ಮೀನಾಕ್ಷಿ ಬಾಳಿ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಡತನ, ನಿರುದ್ಯೋಗ ಮತ್ತು ಶೈಕ್ಷಣಿಕ ಹಿಂದುಳಿದಿರುವಿಕೆ ಗಂಭೀರ ಸಮಸ್ಯೆಗಳಾಗಿವೆ. ಈ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉನ್ನತ ಶಿಕ್ಷಣ ದೊರೆಯುತ್ತಿಲ್ಲ. ರಾಜ್ಯದಲ್ಲಿ ಸುಮಾರು 22 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್, ವಿಜ್ಞಾನ ಮತ್ತು ಗಣಿತ ಬೋಧಿಸುವ ಶಿಕ್ಷಕರ ಕೊರತೆ ಇದೆ. ಅನೇಕ ಶಾಲೆಗಳು ಏಕೋಪಾಧ್ಯಾಯ ಶಾಲೆಗಳಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.

Advertisements

ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಜನಸಂಖ್ಯೆ ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ.20ರಷ್ಟಿದ್ದರೂ ಅಭಿವೃದ್ಧಿಯಲ್ಲಿ ಈ ಭಾಗ ಇನ್ನೂ ಹಿಂದುಳಿದಿದೆ. ಕೆಕೆಆರ್‌ಡಿಬಿಯಲ್ಲಿ ಸಾವಿರಾರು ಕೋಟಿ ರೂಪಾಯಿ ಅನುದಾನವಿದ್ದರೂ ವಸತಿ ನಿಲಯಗಳ ಸ್ಥಿತಿ ಶೋಚನೀಯವಾಗಿದೆ. ಹೀಗಾಗಿ ಹೊಸ ವಸತಿ ನಿಲಯಗಳನ್ನು ನಿರ್ಮಿಸಲು ವಿಶೇಷ ಅನುದಾನ ಮೀಸಲಿಡಬೇಕು. ಈಗಿರುವ ಹಾಸ್ಟೆಲ್‌ಗಳ ನಿರ್ವಹಣೆಗೆ ಮಾತ್ರ ಅನುದಾನ ಬಳಸದೆ,
ವಿದ್ಯಾರ್ಥಿಗಳ ಹೆಚ್ಚುತ್ತಿರುವ ಅಗತ್ಯಕ್ಕೆ ತಕ್ಕಂತೆ ಹೊಸ ಹಾಸ್ಟೆಲ್‌ಗಳನ್ನು ಆರಂಭಿಸಬೇಕು ಎಂದು ಒತ್ತಾಯಿಸಿದರು.

ಶಿಕ್ಷಣ ಇಂದು ಉಳ್ಳವರ ಸ್ವತ್ತಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಜಿಲ್ಲಾಧಿಕಾರಿಗಳ ಮಕ್ಕಳಿಗೂ ಕೂಲಿ ಕಾರ್ಮಿಕರ ಮಕ್ಕಳಿಗೂ ಸಮಾನ ಗುಣಮಟ್ಟದ ಶಿಕ್ಷಣ ದೊರೆಯಬೇಕು. ಶಿಕ್ಷಣದಲ್ಲಿ ಆರ್ಥಿಕ ಅಸಮಾನತೆ ನಿವಾರಣೆಯಾದಾಗ ಮಾತ್ರ ಡಾ.ಬಿ.ಆರ್. ಅಂಬೇಡ್ಕರ್ ಅವರ ಸಮಾನತೆಯ ಕನಸು ನನಸಾಗಲಿದೆ. ಶಿಕ್ಷಣ, ಉದ್ಯೋಗ ಮತ್ತು ಸಮಾನ ಹಕ್ಕುಗಳಿಗಾಗಿ ವಿದ್ಯಾರ್ಥಿಗಳು ಸಂಘಟಿತರಾಗಿ ಹೋರಾಡಬೇಕು ಎಂದು ಕರೆ ನೀಡಿದರು.

ಕಲ್ಯಾಣ ಕರ್ನಾಟಕದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಬೆಂಗಳೂರಿಗೆ ವಲಸೆ ಹೋಗಿ ಓಲಾ, ಉಬರ್ ಹಾಗೂ ಭದ್ರತಾ ಸಿಬ್ಬಂದಿಯಂತಹ ಕೆಲಸಗಳನ್ನು ಮಾಡಬೇಕಾದ ಪರಿಸ್ಥಿತಿ ಇದೆ. ಈ ಭಾಗದಲ್ಲೇ ಕೈಗಾರಿಕೆಗಳನ್ನು ಸ್ಥಾಪಿಸಿ ಸ್ಥಳೀಯ ಯುವಕರಿಗೆ ಉದ್ಯೋಗ ಕಲ್ಪಿಸಬೇಕು. ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಶಾಲೆ ತೊರೆಯುವ ಪ್ರವೃತ್ತಿಯನ್ನು ತಡೆಯಲು ಸರ್ಕಾರ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಎಸ್‌ಎಫ್‌ಐ ಕರ್ನಾಟಕ ರಾಜ್ಯಾಧ್ಯಕ್ಷ ಅಂಬ್ಲಿಕಲ್ ಶಿವಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ರಕ್ಷಣೆಗಾಗಿ ಎಸ್‌ಎಫ್‌ಐ ನಿರಂತರ ಹೋರಾಟ ನಡೆಸುತ್ತಿದೆ. ದೇಶಾದ್ಯಂತ ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ವಿರುದ್ಧ ಧ್ವನಿ ಎತ್ತಲಾಗಿದೆ. ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಶಿಕ್ಷಣ ವ್ಯವಸ್ಥೆಯಲ್ಲಿನ ಗಂಭೀರ ಸಮಸ್ಯೆಗಳನ್ನು ಪ್ರತಿಬಿಂಬಿಸುತ್ತಿವೆ ಎಂದರು.

ಕರ್ನಾಟಕದಲ್ಲಿ ಕೆಪಿಎಸ್ ಶಾಲೆಗಳ ಹೆಸರಿನಲ್ಲಿ ಸರ್ಕಾರಿ ಶಿಕ್ಷಣ ವ್ಯವಸ್ಥೆಯ ಮೂಲ ಆಶಯಕ್ಕೆ ಧಕ್ಕೆಯಾಗಬಾರದು. ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿ ಸಮರ್ಪಕವಾಗಿ ಜಾರಿಯಾಗಬೇಕು. ಮುಂದಿನ ದಿನಗಳಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಬಜೆಟ್ ಮೀಸಲಿಡುವ ಮೂಲಕ ಸರ್ಕಾರಿ ಶಾಲೆ, ಕಾಲೇಜು ಹಾಗೂ ವಸತಿ ನಿಲಯಗಳನ್ನು ಬಲಪಡಿಸಬೇಕು ಎಂದು ಒತ್ತಾಯಿಸಿದರು.

3509279

ಜಾತಿ ಮತ್ತು ಧರ್ಮದ ಹೆಸರಿನಲ್ಲಿ ವಿದ್ಯಾರ್ಥಿಗಳನ್ನು ವಿಭಜಿಸುವ ಪ್ರಯತ್ನಗಳು ನಡೆಯುತ್ತಿವೆ. ಆದರೆ ವಿದ್ಯಾರ್ಥಿಗಳಲ್ಲಿ ರಕ್ತದ ಬಣ್ಣ ಒಂದೇ, ಅದು ಕೆಂಪು ರಕ್ತ ಎಂಬ ಸಮಾನತೆಯ ಸಂದೇಶವನ್ನು ಎಸ್‌ಎಫ್‌ಐ ಸಾರುತ್ತಿದೆ. ಭಗತ್ ಸಿಂಗ್ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಯಲ್ಲಿ ಬೆಳೆದಿರುವ ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ರಕ್ಷಣೆಗಾಗಿ ಹೋರಾಡಲಿದ್ದಾರೆ. ಪೊಲೀಸ್ ಲಾಠಿ ಮತ್ತು ಬೆದರಿಕೆಗಳಿಗೆ ಹೆದರುವುದಿಲ್ಲ. ಕಲ್ಯಾಣ ಕರ್ನಾಟಕದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿ ಉದ್ಯೋಗ ಸೃಷ್ಟಿಸುವ ಮೂಲಕ ಅಭಿವೃದ್ಧಿ ಮಾಡಿ ತೋರಿಸಬೇಕು ಎಂದು ಸರ್ಕಾರಕ್ಕೆ ಸವಾಲು ಹಾಕಿದರು.

ರಾಜ್ಯ ಕಾರ್ಯದರ್ಶಿ ವಿಜಯಕುಮಾರ್ ಟಿ.ಎಸ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಎಸ್‌ಎಫ್‌ಐ ರಾಷ್ಟ್ರೀಯ ಉಪಾಧ್ಯಕ್ಷೆ ಶಿಲ್ಪಾ, ತಮಿಳುನಾಡು ರಾಜ್ಯಾಧ್ಯಕ್ಷ ತಮಿಳ್ ವಿರುದುಲ, ತೆಲಂಗಾಣ ರಾಜ್ಯ ಕಾರ್ಯದರ್ಶಿ ನಾಗರಾಜ್ ಭಾಗವಹಿಸಿದ್ದರು.

ಸ್ವಾಗತ ಸಮಿತಿ ಅಧ್ಯಕ್ಷ ಆರ್.ಜಿ. ಶೆಟ್ಟಗಾರ್, ಎಸ್‌ಎಫ್‌ಐ ಉಪಾಧ್ಯಕ್ಷ ಡಾ.ದೊಡ್ಡ ಬಸವರಾಜ ಗುಳೇದಾಳ, ರಾಜ್ಯ ಉಪಾಧ್ಯಕ್ಷರಾದ ಬಸವರಾಜ್ ಎಸ್. ಹಾಗೂ ಗಣೇಶ ರಾಠೋಡ್, ಡಿವೈಎಫ್‌ಐ ಕೇಂದ್ರ ಸಮಿತಿ ಸದಸ್ಯ ಬಸವರಾಜ ಪೂಜಾರಿ, ಡಿವೈಎಫ್‌ಐ ರಾಜ್ಯಾಧ್ಯಕ್ಷೆ ಲವಿತ್ರ ವಸ್ತ್ರದ ಸೇರಿದಂತೆ ವಿವಿಧ ಮುಖಂಡರು ಉಪಸ್ಥಿತರಿದ್ದರು.

ಇದನ್ನು ಓದಿದ್ದೀರಾ? ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ, ಊರಲ್ಲಿ ಪಡಿತರವೂ ಇಲ್ಲ!

ಎಸ್‌ಎಫ್‌ಐ ಜಿಲ್ಲಾಧ್ಯಕ್ಷೆ ಸುಜಾತ ವೈ. ಸ್ವಾಗತಿಸಿದರು. ಜಿಲ್ಲಾ ಕಾರ್ಯದರ್ಶಿ ಇಮಾಮ್ ಸಾಬ್ ನದಾಫ್ ನಿರೂಪಿಸಿದರು. ಗಣೇಶ ರಾಠೋಡ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website | + posts
Advertisements

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ, ಊರಲ್ಲಿ ಪಡಿತರವೂ ಇಲ್ಲ!

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು...

ಮಹಿಳಾ ಶಕ್ತಿಯ ಅನಾವರಣ: ಮಂಡ್ಯ ಜಿಲ್ಲಾ ಪಂಚಾಯತ್ ಸ್ತಬ್ಧಚಿತ್ರಕ್ಕೆ ಈಶ್ವರ ಖಂಡ್ರೆ ಮೆಚ್ಚುಗೆ

ಮೈಸೂರು ದಸರಾ ಜಂಬೂಸವಾರಿಯಲ್ಲಿ ಜನಮೆಚ್ಚುಗೆ ಗಳಿಸುವುದರ ಜೊತೆಗೆ ಪ್ರಥಮ ಬಹುಮಾನ ಪಡೆದ...

ಕಬ್ಬಿನ ದರ ನಿಗದಿಗೆ ಆಗ್ರಹಿಸಿ ಮೈಶುಗರ್ ಸಕ್ಕರೆ ಗೋದಾಮಿಗೆ ರೈತರ ಮುತ್ತಿಗೆ

ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ನೀಡಬೇಕು ಹಾಗೂ ಪ್ರತಿ ಟನ್ ಕಬ್ಬಿಗೆ...

ಕಬ್ಬು ಬೆಳೆಗಾರರ ರಕ್ಷಣೆಗೆ ಪ್ರತ್ಯೇಕ ವಿಮೆ, ನ್ಯಾಯಯುತ ಬೆಲೆ ಸೇರಿದಂತೆ 12 ಬೇಡಿಕೆ

ಕಬ್ಬು ಬೆಳೆಗಾರರಿಗೆ ಪ್ರಸಕ್ತ ಸಾಲಿನಲ್ಲಿ ಪ್ರತಿ ಟನ್ ಕಬ್ಬಿಗೆ ₹6,000 ಕನಿಷ್ಠ...