ಕಲಬುರಗಿ | ಸರ್ಕಾರಿ ಶಾಲೆಗಳನ್ನು ಖಾಸಗಿಯವರೊಂದಿಗೆ ಜೋಡಿಸುವ ಯೋಜನೆಗೆ ಎಸ್‌ಎಫ್‌ಐ ತೀವ್ರ ವಿರೋಧ

Date:

ರಾಜ್ಯದ 2 ಸಾವಿರ ಸರ್ಕಾರಿ ಶಾಲೆಗಳನ್ನು ಖಾಸಗಿ ಸಂಸ್ಥೆಗಳೊಂದಿಗೆ ಜೋಡಿಸುವ ಹಾಗೂ ಕೆಪಿಎಸ್‌ (ಕರ್ನಾಟಕ ಪಬ್ಲಿಕ್ ಶಾಲೆ) ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ರಾಜ್ಯ ಸರ್ಕಾರದ ಯೋಜನೆಗೆ ಭಾರತ ವಿದ್ಯಾರ್ಥಿ ಫೆಡರೇಷನ್‌ (ಎಸ್‌ಎಫ್‌ಐ) ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಯೋಜನೆಯು ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ದುರ್ಬಲಗೊಳಿಸಿ, ಸರ್ಕಾರಿ ಶಾಲೆಗಳನ್ನು ಖಾಸಗಿಯವರ ಹಿಡಿತಕ್ಕೆ ಒಪ್ಪಿಸುವ ಪ್ರಯತ್ನವಾಗಿದೆ ಎಂದು ಸಂಘಟನೆ ಆರೋಪಿಸಿದೆ.

- Advertisement -

ಈ ಕುರಿತು ನವೆಂಬರ್ 7ರಂದು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಎಸ್‌ಎಫ್‌ಐ ಕಲಬುರಗಿ ಜಿಲ್ಲಾ ಸಮಿತಿ, ಸರ್ಕಾರ ಕೂಡಲೇ ಈ ಯೋಜನೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

ಹಂತಕ ಗೋಡ್ಸೆಯ ಹೇಳಿಕೆಯೇ ಇತಿಹಾಸವಲ್ಲ; ಸ್ವಾತಂತ್ರ್ಯ ಹೋರಾಟಗಾರರ ಚಾರಿತ್ರ್ಯಹರಣಕ್ಕೆ...

ಅಡ್ಡಂಡ ಕಾರ್ಯಪ್ಪನವರ ‘ಗಾಂಧಿ ಹತ್ಯೆಯ ಸತ್ಯ’ ಪುಸ್ತಕ ಮತ್ತು ನಾಟಕವನ್ನು ನಿಷೇಧಿಸಬೇಕೆಂಬ ಆಗ್ರಹಕ್ಕೆ ಬಲವಾದ ಐತಿಹಾಸಿಕ ಕಾರಣಗಳಿವೆ. ಮನಶಾಸ್ತ್ರದ ದೃಷ್ಟಿಯಿಂದಲೂ ಹಂತಕನ ಸಮರ್ಥನೆಗೆ ಎಚ್ಚರಿಕೆ ಅಗತ್ಯ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಗೆ ಸಂಬಂಧಿಸಿದಂತೆ ಅಡ್ಡಂಡ...

ಕಲ್ಯಾಣ ಯೋಜನೆಗಳಿಗೆ ‘ಆಧಾರ್’ ಬದಲು ‘ಎಪಿಕ್’: ಬಡಜನರ ಹೊಟ್ಟೆಯ...

ರಾಜಕೀಯ ಮತ್ತು ಸಾಮಾಜಿಕ ವಿಶ್ಲೇಷಕರು ಎಚ್ಚರಿಸುವಂತೆ, ಕಳೆದ ಒಂದು ದಶಕದ ಡಿಜಿಟಲ್ ಪರಿಶೀಲನಾ ವ್ಯವಸ್ಥೆಯ ಇತಿಹಾಸವನ್ನು ನೋಡಿದರೆ, ಹೊಸ ತಂತ್ರಜ್ಞಾನಗಳು ಬಂದಾಗಲೆಲ್ಲ ಅತ್ಯಂತ ದುರ್ಬಲ ವರ್ಗದವರನ್ನು ವ್ಯವಸ್ಥೆಯಿಂದ ಹೊರಗಿಡುತ್ತಲೇ ಬರಲಾಗಿದೆ. ಆಧಾರ್ ಜೋಡಣೆ...

ಮುಖ್ಯಮಂತ್ರಿ ಅವರು ‘ನಮ್ಮ ಶಾಲೆ, ನಮ್ಮ ಜವಾಬ್ದಾರಿ’ ಕಾರ್ಯಕ್ರಮದಡಿ 2 ಸಾವಿರ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳೊಂದಿಗೆ ಜೋಡಿಸುವ ಯೋಜನೆ ಪ್ರಕಟಿಸಿದ್ದಾರೆ. ಮೊದಲ ಹಂತದಲ್ಲಿ 6 ಸಾವಿರ ಪಂಚಾಯಿತಿಗಳನ್ನು ಮೂರು ವಿಭಾಗಗಳಾಗಿ ವಿಂಗಡಿಸಿ, 1 ಸಾವಿರ ಸರ್ಕಾರಿ ಶಾಲೆಗಳನ್ನು ಖಾಸಗಿ ಸಂಸ್ಥೆಗಳೊಂದಿಗೆ ಜೋಡಿಸುವ ಉದ್ದೇಶವಿದೆ. ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿದರೆ, ಆ ಶಾಲೆಗಳ ಹೆಸರಿನೊಂದಿಗೆ ಖಾಸಗಿ ಶಾಲೆಗಳ ಹೆಸರು ಸೇರಿಸಲು ಅವಕಾಶ ನೀಡುವ ಪ್ರಸ್ತಾಪವೂ ಇದೆ. ಇದು ಸರ್ಕಾರಿ ಶಿಕ್ಷಣ ವ್ಯವಸ್ಥೆಯ ಮೇಲೆ ಖಾಸಗಿ ಸಂಸ್ಥೆಗಳ ಪ್ರಭಾವ ಹೆಚ್ಚಿಸುವ ಕ್ರಮವಾಗಿದೆ ಎಂದು ಎಸ್‌ಎಫ್‌ಐ ಕಳವಳ ವ್ಯಕ್ತಪಡಿಸಿದೆ.

ಸರ್ಕಾರಿ ಶಾಲೆಗಳ ದಾಖಲಾತಿ ಕುಸಿತಕ್ಕೆ ಸರ್ಕಾರವೇ ಹೊಣೆ

ಕರ್ನಾಟಕದಲ್ಲಿ 47,493 ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿದ್ದು, ಅವುಗಳಲ್ಲಿ 19,603 ಪ್ರಾಥಮಿಕ ಶಾಲೆಗಳು, 21,676 ಹಿರಿಯ ಪ್ರಾಥಮಿಕ ಶಾಲೆಗಳು, 4,895 ಪ್ರೌಢಶಾಲೆಗಳು ಹಾಗೂ 1,319 ಪದವಿ ಪೂರ್ವ ಕಾಲೇಜುಗಳಿವೆ. ಜೊತೆಗೆ ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಶಿಕ್ಷಣ ನೀಡುವ 309 ಕರ್ನಾಟಕ ಪಬ್ಲಿಕ್ ಶಾಲೆಗಳಿವೆ ಎಂದು ಪ್ರಕಟಣೆ ತಿಳಿಸಿದೆ.

2015-16ರಲ್ಲಿ ಸರ್ಕಾರಿ ಶಾಲೆಗಳಲ್ಲಿ 47.1 ಲಕ್ಷ ವಿದ್ಯಾರ್ಥಿಗಳ ದಾಖಲಾತಿ ಇದ್ದರೆ, 2025-26ರಲ್ಲಿ ಅದು 38.2 ಲಕ್ಷಕ್ಕೆ ಕುಸಿದಿದೆ. ಒಟ್ಟು ದಾಖಲಾತಿಯಲ್ಲಿ ಸರ್ಕಾರಿ ಶಾಲೆಗಳ ಪಾಲು ಶೇ.46ರಿಂದ ಶೇ.38ಕ್ಕೆ ಇಳಿದಿದೆ. ಇದೇ ಅವಧಿಯಲ್ಲಿ ಖಾಸಗಿ ಅನುದಾನರಹಿತ ಶಾಲೆಗಳ ದಾಖಲಾತಿ 36.3 ಲಕ್ಷದಿಂದ 47 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಎಸ್‌ಎಫ್‌ಐ ಉಲ್ಲೇಖಿಸಿದೆ.

2025-26ನೇ ಸಾಲಿನಲ್ಲಿ 50 ಅಥವಾ ಅದಕ್ಕಿಂತ ಕಡಿಮೆ ವಿದ್ಯಾರ್ಥಿಗಳ ದಾಖಲಾತಿ ಹೊಂದಿರುವ ಸರ್ಕಾರಿ ಶಾಲೆಗಳ ಸಂಖ್ಯೆ 25,683ಕ್ಕೆ ಏರಿಕೆಯಾಗಿದೆ. ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕುಸಿಯಲು ಕಳಪೆ ಗುಣಮಟ್ಟದ ಶಿಕ್ಷಣವೇ ಕಾರಣ ಎಂದು ಕರ್ನಾಟಕ ಜ್ಞಾನ ಆಯೋಗದ ಶಿಫಾರಸುಗಳು ತಿಳಿಸಿರುವುದಾಗಿ ಸಂಘಟನೆ ಹೇಳಿದೆ.

ಆದರೆ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕಡಿಮೆಯಾಗಲು ಕಾರಣಗಳನ್ನು ಸಮಗ್ರವಾಗಿ ಅಧ್ಯಯನ ಮಾಡದೆ, ಶಾಲೆಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸದೆ, ಶಿಕ್ಷಕರ ನೇಮಕಾತಿ ಮಾಡದೆ ಹಾಗೂ ಪಠ್ಯಪುಸ್ತಕಗಳನ್ನು ಸಮಯಕ್ಕೆ ಸರಿಯಾಗಿ ವಿತರಿಸದೆ ಸರ್ಕಾರವೇ ಶಿಕ್ಷಣ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತಿದೆ ಎಂದು ಎಸ್‌ಎಫ್‌ಐ ಆರೋಪಿಸಿದೆ.

79 ಸಾವಿರಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳು ಖಾಲಿ

ರಾಜ್ಯದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ 79,694 ಹುದ್ದೆಗಳು ಖಾಲಿ ಇವೆ ಎಂದು ಪ್ರಕಟಣೆ ತಿಳಿಸಿದೆ. 43,553 ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ಶಿಕ್ಷಣ ಸಚಿವರು ಹೇಳಿದ್ದರೂ, ಮುಂದಿನ ಶೈಕ್ಷಣಿಕ ವರ್ಷದೊಳಗೆ 18 ಸಾವಿರ ಶಿಕ್ಷಕರ ನೇಮಕಾತಿ ಮಾಡುವ ಭರವಸೆ ಈಡೇರಿಲ್ಲ ಎಂದು ಸಂಘಟನೆ ಟೀಕಿಸಿದೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಶಿಕ್ಷಕರ ನೇಮಕಾತಿ ಕುರಿತು ಭರವಸೆಗಳನ್ನು ನೀಡುತ್ತಿದೆಯೇ ಹೊರತು, ಖಾಲಿ ಹುದ್ದೆಗಳನ್ನು ಸಮರ್ಪಕವಾಗಿ ಭರ್ತಿ ಮಾಡುತ್ತಿಲ್ಲ. 2026-27ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಶೂಗಳನ್ನು ವಿತರಿಸಿರುವುದೂ ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂದು ಎಸ್‌ಎಫ್‌ಐ ಆರೋಪಿಸಿದೆ.

ಹೊಸ ಪಬ್ಲಿಕ್ ಶಾಲೆಗಳ ಬದಲು ಇರುವ ಶಾಲೆಗಳ ವಿಲೀನಕ್ಕೆ ಮುಂದಾಗಿರುವ ಸರ್ಕಾರ

ಕರ್ನಾಟಕ ಪಬ್ಲಿಕ್ ಶಾಲೆಗಳ ಮೂಲಕ ಎಲ್‌ಕೆಜಿಯಿಂದ ಪದವಿ ಪೂರ್ವ ಶಿಕ್ಷಣದವರೆಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್‌ನಿಂದ ₹2,500 ಕೋಟಿ ಸಾಲ ಪಡೆಯುವ ಹಾಗೂ ಸಿಎಸ್‌ಆರ್‌ ನಿಧಿಯಡಿ 500 ಹೊಸ ಪಬ್ಲಿಕ್ ಶಾಲೆಗಳನ್ನು ಆರಂಭಿಸುವ ಯೋಜನೆ ಪ್ರಕಟಿಸಲಾಗಿತ್ತು. ಕಲ್ಯಾಣ ಕರ್ನಾಟಕದಲ್ಲಿ 200 ಶಾಲೆಗಳನ್ನು ತೆರೆಯುವ ಭರವಸೆಯೂ ನೀಡಲಾಗಿತ್ತು.

ಆದರೆ ಹೊಸ ಶಾಲೆಗಳನ್ನು ಆರಂಭಿಸುವ ಬದಲು ಈಗಿರುವ ಸರ್ಕಾರಿ ಶಾಲೆಗಳನ್ನು ಪಂಚಾಯಿತಿಗೊಂದು ಶಾಲೆಯಾಗಿ ಉನ್ನತೀಕರಿಸುವ ಹೆಸರಿನಲ್ಲಿ ವಿಲೀನಗೊಳಿಸಲು ಸರ್ಕಾರ ಮುಂದಾಗಿದೆ. ಇದರಿಂದ ಗ್ರಾಮೀಣ ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳು ಮುಚ್ಚುವ ಅಪಾಯ ಎದುರಾಗಲಿದೆ.

ಸರ್ಕಾರದ ಘೋಷಣೆಗಳು ಮತ್ತು ಕಾರ್ಯಾಚರಣೆಗಳ ನಡುವೆ ವ್ಯತ್ಯಾಸವಿದ್ದು, ಶಿಕ್ಷಣ ಕ್ಷೇತ್ರವನ್ನು ಖಾಸಗಿಯವರಿಗೆ ಹಸ್ತಾಂತರಿಸುವ ವ್ಯವಸ್ಥಿತ ಪ್ರಯತ್ನ ನಡೆಯುತ್ತಿದೆ ಎಂದು ಎಸ್‌ಎಫ್‌ಐ ಆರೋಪಿಸಿದೆ.

ಶಿಕ್ಷಣ ಹಕ್ಕಿಗೆ ಧಕ್ಕೆ: ಯೋಜನೆ ಹಿಂಪಡೆಯಲು ಆಗ್ರಹ

6ರಿಂದ 14 ವರ್ಷ ವಯಸ್ಸಿನ ಪ್ರತಿಯೊಂದು ಮಗುವಿಗೂ ನೆರೆಹೊರೆಯ ಶಾಲೆಯಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣ ಪಡೆಯುವ ಹಕ್ಕಿದೆ. ಇದು ಶಿಕ್ಷಣ ಹಕ್ಕು ಕಾಯ್ದೆ (RTE) ಹಾಗೂ ಸಂವಿಧಾನದ ಅನುಚ್ಛೇದ 21(ಎ) ಅಡಿಯಲ್ಲಿ ಖಾತರಿಪಡಿಸಿರುವ ಹಕ್ಕಾಗಿದೆ ಎಂದು ಸಂಘಟನೆ ಪ್ರತಿಪಾದಿಸಿದೆ.

ಸರ್ಕಾರಿ ಶಾಲೆಗಳನ್ನು ಖಾಸಗಿ ಸಂಸ್ಥೆಗಳೊಂದಿಗೆ ಜೋಡಿಸುವುದು ಹಾಗೂ ಕೆಪಿಎಸ್‌ ಹೆಸರಿನಲ್ಲಿ ಗ್ರಾಮೀಣ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವುದು ಮಕ್ಕಳ ಶಿಕ್ಷಣದ ಹಕ್ಕಿಗೆ ಧಕ್ಕೆ ತರುವ ಕ್ರಮವಾಗಿದೆ. ಗ್ರಾಮೀಣ ಮಕ್ಕಳಿಗೆ ತಮ್ಮ ಊರಿನಲ್ಲಿಯೇ ಶಿಕ್ಷಣ ಪಡೆಯುವ ಅವಕಾಶವನ್ನು ಕಸಿದುಕೊಳ್ಳಬಾರದು. ಆದ್ದರಿಂದ 2 ಸಾವಿರ ಸರ್ಕಾರಿ ಶಾಲೆಗಳ ಖಾಸಗಿ ಸಂಸ್ಥೆಗಳೊಂದಿಗೆ ಜೋಡಣೆ ಮತ್ತು ಶಾಲೆಗಳ ವಿಲೀನ ಯೋಜನೆಯನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ಎಸ್‌ಎಫ್‌ಐ ಆಗ್ರಹಿಸಿದೆ.

ಇದನ್ನು ಓದಿದ್ದೀರಾ? ಯಾದಗಿರಿ | ದೋರನಹಳ್ಳಿ ಪಟ್ಟಣ ಪಂಚಾಯಿತಿಗೆ ಅನುದಾನ ಬಿಡುಗಡೆಗೆ ಆಗ್ರಹ: ನಮ್ಮ ಕರ್ನಾಟಕ ಸೇನೆ ಮನವಿ

ಈ ಕುರಿತು ಎಸ್‌ಎಫ್‌ಐ ಕಲಬುರಗಿ ಜಿಲ್ಲಾ ಅಧ್ಯಕ್ಷೆ ಸುಜಾತ ವೈ. ಹಾಗೂ ಜಿಲ್ಲಾ ಕಾರ್ಯದರ್ಶಿ ಇಮಾಮಸಾಬ್ ನದಾಫ್ ಅವರು ಪತ್ರಿಕಾ ಪ್ರಕಟಣೆ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಗಾರಪೇಟೆ | ಹುತ್ತೂರು ಹೋಬಳಿಗೆ 1,000 ನಿವೇಶನ: ಆರು ತಿಂಗಳಲ್ಲಿ ಹಕ್ಕುಪತ್ರ ವಿತರಣೆ – ಶಾಸಕ ಎಸ್.ಎನ್. ನಾರಾಯಣಸ್ವಾಮಿ

ಹುತ್ತೂರು ಹೋಬಳಿಯ ಪ್ರತಿ ಗ್ರಾಮ ಪಂಚಾಯಿತಿಗೆ ಸುಮಾರು 250ರಂತೆ ನಿವೇಶನಗಳಂತೆ ಒಟ್ಟು...

ಬಾಗಲಕೋಟೆ | ಅರ್ಜಿ ವಿಲೇವಾರಿಯಲ್ಲಿ ವಿಳಂಬ ಸಲ್ಲದು: ಸಚಿವ ಕಾಶಪ್ಪನವರ ಖಡಕ್ ಸೂಚನೆ

ಸಾರ್ವಜನಿಕರ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ, ಅರ್ಹರಿಗೆ ನಿಗದಿತ ಅವಧಿಯೊಳಗೆ ನ್ಯಾಯ...

ಶಿರಸಿ | ಬೆಲೆ ಏರಿಕೆ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

ಹಾಲಿನ ಬೆಲೆ, ಬಸ್ ಪ್ರಯಾಣ ದರ ಸೇರಿದಂತೆ ದಿನಬಳಕೆಯ ಅಗತ್ಯ ವಸ್ತುಗಳ...

ಬಾಗಲಕೋಟೆ | ವಕೀಲ ವೃತ್ತಿ ಯಶಸ್ಸಿಗೆ ನಿರಂತರ ಅಧ್ಯಯನ, ಭಾಷಾ ಪ್ರೌಢಿಮೆ ಅಗತ್ಯ: ಪದ್ಮಾವತಿ ಮಾನೆ

ವಕೀಲ ವೃತ್ತಿಯು ಸಮಾಜದ ಎಲ್ಲ ವರ್ಗದ ಜನರಿಗೆ ನ್ಯಾಯ ಒದಗಿಸುವ ಶ್ರೇಷ್ಠ...