ಕಲಬುರಗಿ | ತೊಗರಿಗೆ ₹12,500 ಬೆಂಬಲ ಬೆಲೆಗೆ ಶರಣಬಸಪ್ಪ ಒತ್ತಾಯ

Date:

ತೊಗರಿ ಬೆಳೆಗಾರರ ಗಂಭೀರ ಸಮಸ್ಯೆಗಳನ್ನು ಪರಿಗಣಿಸಿ, ಸರ್ಕಾರಗಳು ತಕ್ಷಣ ಸ್ಪಂದಿಸಬೇಕು ಎಂದು ರೈತ ಸಂಘಟನೆಗಳು ಆಗ್ರಹಿಸಿವೆ. ತೊಗರಿಗೆ ಕನಿಷ್ಠ ₹12,500 ಬೆಂಬಲ ಬೆಲೆ (MSP) ನಿಗದಿ ಮಾಡಬೇಕು ಹಾಗೂ MSPಗೆ ಕಾನೂನು ಮಾನ್ಯತೆ ನೀಡಬೇಕು ಎಂದು ಕೆಪಿಆರ್ ಎಸ್ ಪಕ್ಷದ ಮುಖಂಡ ಶರಣಬಸಪ್ಪ ಮಮಶೆಟ್ಟಿ ಒತ್ತಾಯಿಸಿದ್ದಾರೆ.

- Advertisement -

ತೊಗರಿ ಬೆಳೆಗಾರರ ಸಂರಕ್ಷಣೆಯ ದೃಷ್ಟಿಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಲಾ ₹1,000 ಪ್ರೋತ್ಸಾಹಧನ ನೀಡಬೇಕು. ಜೊತೆಗೆ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು, ಬೆಳೆ ನಷ್ಟಕ್ಕೆ ಪರಿಹಾರ ನೀಡಲು ಬೆಳೆ ವಿಮೆ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಇದೇ ವೇಳೆ ದೇಶೀಯ ರೈತರ ಹಿತ ಕಾಪಾಡುವ ಸಲುವಾಗಿ ಹೊರದೇಶದಿಂದ ಆಮದು ಆಗುವ ತೊಗರಿ ಮೇಲೆ ಶೇ.50 ಇಂಪೋರ್ಟ್ ಶುಲ್ಕ ವಿಧಿಸಬೇಕು ಎಂದು ಸಂಘಟನೆಗಳು ಒತ್ತಾಯಿಸಿವೆ. ಕಡಿಮೆ ದರದ ಆಮದು ತೊಗರಿಯಿಂದ ದೇಶೀಯ ಮಾರುಕಟ್ಟೆ ಕುಸಿಯುತ್ತಿದ್ದು, ಇದರಿಂದ ರೈತರು ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಕಲಬುರಗಿ | ಮರ್ಯಾದಾ ಹತ್ಯೆ ಖಂಡಿಸಿ ; ಡಿವೈಎಫ್‌ಐ ಪ್ರತಿಭಟನೆ

ಇನ್ನೊಂದೆಡೆ, ಸಕ್ಕರೆ ಕಾರ್ಖಾನೆಗಳು ಚಾಲನೆಯಾಗಿ 35 ದಿನಗಳಾದರೂ ಕಬ್ಬು ರೈತರಿಗೆ ಹಣ ಪಾವತಿಯಾಗಿಲ್ಲ ಎಂಬ ಆರೋಪವೂ ಕೇಳಿಬಂದಿದೆ. ನಿಯಮಾನುಸಾರ ಕಬ್ಬಿನ ಹಣವನ್ನು ತಡಮಾಡಿದರೆ ಶೇ.16 ಬಡ್ಡಿ ಸೇರಿಸಿ ರೈತರಿಗೆ ಪಾವತಿಸಬೇಕು ಎಂದು ಸಂಘಟನೆಗಳು ಎಚ್ಚರಿಕೆ ನೀಡಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...