ಕಲಬುರಗಿ | ಹೊಂಡಕ್ಕೆ ಬಿದ್ದು ಕುರಿಗಾಯಿ ಸಾವು

Date:

ಚಿತ್ತಾಪುರ ತಾಲೂಕಿನ ಬೆಳಗುಂಪಾ ಗ್ರಾಮದ ಮರಳು ದಕ್ಕಾದಲ್ಲಿ ಕುರಿಗಾಯಿಯೊಬ್ಬರು ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಜರುಗಿದೆ.

- Advertisement -

ಶ್ರೀಧರ್ ಅಮೃತ ನವಲಕರ್ (28) ಮೃತರು. ನಿತ್ಯ ಕುರಿಗಳನ್ನು ಕಾಯುತ್ತಾ ಹೋಗುತಿದ್ದ ಶ್ರೀಧರ್ ಶನಿವಾರ ಮನೆಗೆ ಬಾರದೇ ಇರುವುದರಿಂದ ಮನೆಯವರು ಎಲ್ಲಾ ಕಡೆ ಹುಡುಕಾಡಿದರು ಪತ್ತೆಯಾಗಿಲ್ಲ. ಮರಳುಗಾರಿಕೆಗಾಗಿ ಆಳವಾಗಿ ತೊಡಿದ ನೀರು ತುಂಬಿದ ಬೃಹದಾಕಾರದ ಗುಂಡಿಯಲ್ಲಿ ಮೃತ ದೇಹ ಮಂಗಳವಾರ ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ವಿಷಯ ತಿಳಿದು ಕೋಲಿ ಕಬ್ಬಲಿಗಾ ಸಮನ್ವಯ ಸಮಿತಿಯ ಜಿಲ್ಲಾ ಮುಖಂಡರಾದ ಅವ್ವಣ್ಣ ಮ್ಯಾಕೇರಿ, ಬಸವರಾಜ ಬೂದಿಹಾಳ, ಗುಂಡು ಐನಾಪುರ, ಕೋಲಿ ಸಮಾಜದ ತಾಲೂಕು ಅಧ್ಯಕ್ಷ ಶಿವುಕುಮಾರ ಯಾಗಾಪೂರ ನೇತೃತ್ವದಲ್ಲಿ ನೂರಾರು ಮುಖಂಡರು ದೌಡಾಯಿಸಿ ಘಟನೆಯನ್ನು ಖಂಡಿಸಿ ಪ್ರತಿಭಟಿಸಿದರು.

ಅವ್ವಣ್ಣ ಮ್ಯಾಕೇರಿ ಮತ್ತು ಗುಂಡು ಐನಾಪುರ ಅವರು ಮಾತನಾಡಿ, ʼಮೃತ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ, ಒಂದು ಸರ್ಕಾರಿ ನೌಕರಿ, ಮನೆ ಕೊಡಬೇಕು. ಸ್ಥಳೀಯ ಪೊಲೀಸ್ ಅಧಿಕಾರಿಗಳನ್ನು ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳನ್ನು ಅಮಾನತು ಮಾಡಬೇಕುʼ ಎಂದು ಆಗ್ರಹಿಸಿದರು.

ಮರಳುಗಾರಿಗಾಗಿ ಬರೀ 5 ಎಕರೆ ಭೂಮಿಗೆ ಅನುಮತಿ ಪಡೆದು ರೈತರಿಗೆ ಹಣದ ಆಮಿಷ ತೋರಿಸಿ 20-30 ಎಕರೆ ಖರೀದಿಸಿ ಅನಧಿಕೃತ ಮರಳುಗಾರಿಕೆ ಮಾಡುತ್ತಿದ್ದಾರೆ. ಅಲ್ಲದೇ 5 ಅಡಿ ಅಗೆಯಲು ಅನುಮತಿ ಪಡೆದು 70 ಅಡಿ ಅಗೆಯುವ ಮೂಲಕ ರಾಜಾರೋಷವಾಗಿ ಅಕ್ರಮ ಮರಳು ದಂಧೆ ನಡೆಸುತ್ತಿದ್ದಾರೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಅಕ್ರಮ ಮರಳುಗಾರಿಕೆ ತಡೆಹಿಡಿದು ಇದರಲ್ಲಿ ಶಾಮೀಲಾದ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸಿಸಿ ಕ್ಯಾಮರಾಗೆ ಸ್ಪ್ರೇ ಮಾಡಿ ಎಸ್‌ಬಿಐ ಎಟಿಎಂನಿಂದ ₹18 ಲಕ್ಷ ದರೋಡೆ

ಶಹಾಬಾದ ಡಿವೈಎಸ್ಪಿ ಶಂಕರಗೌಡ ಪಾಟೀಲ, ಕಾಳಗಿ ಸಿಪಿಐ ಜಗದೇವಪ್ಪ ಪಾಳಾ, ಮಾಡಬೂಳ ಪಿಎಸ್‍ಐ ಶೀಲಾ ದೇವಿ ಸೇರಿದಂತೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಹುದ್ದೆ ಪಡೆದ ಆರೋಪ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಶೇಷ ನೇಮಕಾತಿಯಲ್ಲಿ ನಕಲಿ ಎಸ್‌ಎಸ್‌ಎಲ್‌ಸಿ...

ಯಾದಗಿರಿ | ವಂದೇ ಭಾರತ್ ಸ್ಲೀಪರ್ ರೈಲು ಯಾದಗಿರಿಯಲ್ಲಿ ನಿಲುಗಡೆಗೆ ಒತ್ತಾಯಿಸಿ ಮನವಿ

ಬೆಂಗಳೂರು-ಮುಂಬೈ ನಡುವೆ ಸಂಚರಿಸುವ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ಗೆ ಯಾದಗಿರಿ ರೈಲು...

ಹಾವೇರಿ | ಬರಪರಿಹಾರ ಹೆಚ್ಚಳ ಮಾಡುವಂತೆ ಆಗ್ರಹಿಸಿ ರೈತ ಸಂಘ ಸರ್ಕಾರಕ್ಕೆ ಹಕ್ಕೊತ್ತಾಯ

"ಸತತ ಬರಗಾಲ ಹಾಗೂ ಅನಾವೃಷ್ಟಿಯಿಂದ ಕಷ್ಟದಲ್ಲಿರುವ ರೈತರಿಗೆ ಸರ್ಕಾರ ನೀಡುತ್ತಿರುವ ಬಟವಾಡೆ...

ಹಾವೇರಿ | ಪ್ರಜಾಪ್ರಭುತ್ವ ಉಳಿಸಿ, ಮತ ಬಚಾವೋ, ದೇಶ ಬಚಾವೋ : ಕಾಂಗ್ರೇಸ್ ಪಕ್ಷದಿಂದ ಪ್ರತಿಭಟನಾ ಸಮಾವೇಶ

ಹಾವೇರಿ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಮೈಲಾರಪ್ಪ...