ಕಲಬುರಗಿ | ʼಕುರುಬರು ಬಿಜೆಪಿ, ಕಾಂಗ್ರೆಸ್ ಇನ್ನಿತರ ರಾಜಕೀಯ ಪಕ್ಷಗಳ ಗುಲಾಮರಲ್ಲʼ

Date:

[contact-form][contact-field label=”Name” type=”name” required=”true” /][contact-field label=”Email” type=”email” required=”true” /][contact-field label=”Website” type=”url” /][contact-field label=”Message” type=”textarea” /][/contact-form]

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕುರುಬರು ಬಿಜೆಪಿ ಕಾಂಗ್ರೆಸ್ ಸೇರಿದಂತೆ ಇನ್ನಿತರ ರಾಜಕೀಯ ಪಕ್ಷಗಳ ಗುಲಾಮರಲ್ಲ. ನಮ್ಮ ಸಮಾಜದ ಮಹತ್ತರ ಬೇಡಿಕೆ ಗೊಂಡ್ ಪರ್ಯಾಯ ಪದ ʼಕುರುಬʼ ಎಂದು ಪರಿಗಣಿಸಿ ಮಾನವಿಯತೆ ದೃಷ್ಟಿಯಿಂದ ನಮ್ಮ ಸಮಾಜವನ್ನು ಎಸ್‌ಟಿ ಪಟ್ಟಿಯಲ್ಲಿ ಸೇರಿಸಬೇಕು ಎಂದು ಶ್ರೀಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ತಿಂತಣಿಯ ಪರಮ ಪೂಜ್ಯರಾದ ಸಿದ್ದರಮಾನಂದ ಶ್ರೀಗಳು ಆಗ್ರಹಿಸಿದ್ದಾರೆ.

ಚಿತ್ತಾಪುರ ಪಟ್ಟಣದ ಕನಕ ಭವನದಿಂದ ಪ್ರಾರಂಭವಾದ ಗೊಂಡ್ ಪರ್ಯಾಯ ಪದ ʼಕುರುಬʼ ಎಂದು ಪರಿಗಣಿಸಿ ಎಸ್‌ಟಿ ಪಟ್ಟಿಗೆ ಸೇರಿಸಬೇಕು ಎಂದು ನಡೆಸಿದ ಹೋರಾಟವು ಲಾಡ್ಜಿಂಗ್ ಕ್ರಾಸ್ ಮಾರ್ಗವಾಗಿ ತಹಸೀಲ್ದಾರ್‌ ಕಛೇರಿಗೆ ತಲುಪಿದ ನಂತರ ಹೋರಾಟವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಗೊಂಡ್ ಪರ್ಯಾಯ ಪದದಲ್ಲಿ ಅನೇಕ ಪದಗಳಿವೆ ಅದರಲ್ಲಿ ʼಕುರುಬʼ ಪದ ಒಂದಾಗಿದ್ದು ನಮ್ಮ ಸಮಾಜವನ್ನು 1936ರಲ್ಲಿ ರಾಣಿ ಎಲಿಜಬೆತ್ ಮತ್ತು 1950ರಲ್ಲಿ  ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಎಸ್‌ಟಿ ಪಟ್ಟಿಯಲ್ಲಿ ಪರಿಗಣಿಸಿದ್ದಾರೆ. ಆದರೆ, ಇಲ್ಲಿನ ಆಡಳಿತ ಪಕ್ಷಗಳು ನಮ್ಮ ಸಮಾಜದವರನ್ನು ಕೇವಲ ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ನಮ್ಮ ಸಮಾಜದವರು ಯಾವ ರಾಜಕೀಯ ಪಕ್ಷಗಳ ಗುಲಾಮರಲ್ಲ. ನಮ್ಮ ಸಮಾಜದವರನ್ನು ಮಾನವೀಯತೆ ದೃಷ್ಟಿಯಿಂದ ಎಸ್‌ಟಿ ಪಟ್ಟಿಯಲ್ಲಿ ಸೇರಿಸಬೇಕು ಎಂದು ಆಗ್ರಹಿಸಿದ ಅವರು, ತಹಸೀಲ್ದಾರ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಷಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ಲಾಡ್ಜಿಂಗ್ ಕ್ರಾಸ್ ಬಳಿ ಸಮಾಜದ ಬಾಂಧವರು ಮಾನವ ಸರಪಳಿ ನಿರ್ಮಿಸಿ ಟಾಯರ್‌ಗೆ ಬೆಂಕಿ ಹಚ್ಚಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಗೊಂಡ್ ಪರ್ಯಾಯ ಪದ ʼಕುರುಬʼ ಪದವನ್ನು ಎಸ್‌ಟಿ ಪಟ್ಟಿಯಲ್ಲಿ ಸೇರಿಸಬೇಕು ಎಂದು ಪ್ರತಿಭಟನೆ ನಡೆಸಿದರು. ಲಾಡ್ಜಿಂಗ್ ಕ್ರಾಸ್ ಹತ್ತಿರ ರಸ್ತೆ ತಡೆ ನಡೆಸಿ, ಕುರಿಗಳನ್ನು ತಂದು ಹೋರಾಟ ಮುಂದುವರಿಸಲು ಸಮಾಜದವರು ವಿಳಂಬ ಮಾಡುತ್ತಿರುವಾಗ ಹೋರಾಟ ಮಾಡಲು ನೀಡಿರುವ ಸಮಯ ಮೀರುತ್ತಿದೆ ಬೇಗನೆ ಹೋರಾಟವು ತಹಸೀಲ್ದಾರ್ ಕಛೇರಿಯತ್ತ ಸಾಗಲಿ ಎಂದು ಪೊಲೀಸರು ತಿಳಿಸಿದಾಗ ನಮ್ಮ ಹಕ್ಕನ್ನು ಪಡೆಯಲು ನಡೆಸಿದ ಸಮಾಜದ ಹೋರಾಟವನ್ನು ಪೊಲೀಸ್ ಇಲಾಖೆ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ ಎಂದು ಪೊಲೀಸ್ ಇಲಾಖೆಯ ವಿರುದ್ಧ ದಿಕ್ಕಾರ ಕೂಗಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಚಿಕ್ಕ ಲಿಂಗ ಬೀರ ದೇವರು ಮಾತನಾಡಿ, ಜಿಲ್ಲಾ ಗೊಂಡ್ ಕುರುಬ ಸಮಾಜದ ಅಧ್ಯಕ್ಷ ಮಹಾಂತೇಶ ಕೌಲಗಿ, ಜಿಲ್ಲಾಧ್ಯಕ್ಷ ಗುರುನಾಥ ಪೂಜಾರಿ, ತಾಲೂಕ ಅಧ್ಯಕ್ಷ ಬಸವರಾಜ ಪೂಜಾರಿ ಹೊಸಳ್ಳಿ, ತಾಲೂಕ ಕಾರ್ಯದರ್ಶಿ ಮಲ್ಲಿಕಾರ್ಜುನ ಟಿ. ಪೂಜಾರಿ ಮಾತನಾಡಿದರು.

ಈ ಸಂದರ್ಭದಲ್ಲಿ ಬಸವರಾಜ್ ಪೂಜಾರಿ ಮೊಗಲಾ, ಪ್ರಭು ಗಂಗಾಣಿ, ಯಲ್ಲಾಲಿಂಗ ಪೂಜಾರಿ, ಜುಮಣ್ಣಾ ಪೂಜಾರಿ, ಸಿದ್ದು ಪೂಜಾರಿ ವಾಡಿ, ಜಗನ್ನಾಥ್ ಪೂಜಾರಿ ಆಲೂರ್, ನಾಗೇಶ್, ಬೀರಲಿಂಗ ಪೂಜಾರಿ, ಭೋಜು ಶೇರಿ, ಬಸವರಾಜ ಪೂಜಾರಿ, ಸಂತೋಷ್ ಪೂಜಾರಿ, ಮಲ್ಲಿಕಾರ್ಜುನ ಪೂಜಾರಿ ಸೇರಿದಂತೆ ಆನೇಕರು ಇದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | 3ನೇ ಅವಧಿಗೆ ಮೋದಿ ಪ್ರಧಾನಿ; 12 ಕಿ.ಮೀ ದೀಡು ನಮಸ್ಕಾರ ಹಾಕಿ ಹರಕೆ ತೀರಿಸಿದ ಮೋದಿ ಭಕ್ತ

ಮೋದಿ 3ನೇ ಬಾರಿಗೆ ಪ್ರಧಾನಿಯಗಬೇಕೆಂದು ಹರಕೆ ಹೊತ್ತಿದ್ದ ಮೋದಿ ಅಭಿಯಾನಿಯೊಬ್ಬ, 12...

ಜೂನ್‌ 16ರಂದು ಬೆಳಗ್ಗೆ 6 ಗಂಟೆಯಿಂದಲೇ ನಮ್ಮ ಮೆಟ್ರೋ ಆರಂಭ

ಜೂನ್ 16ರಂದು ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ (ಯುಪಿಎಸ್‌ಸಿ) ನಡೆಯುವ ಕಾರಣ...

ವಂಚನೆ, ಜೀವ ಬೆದರಿಕೆ ಆರೋಪ: ಕೇಂದ್ರ ಸಚಿವ ಸೋಮಣ್ಣ ಪುತ್ರನ ವಿರುದ್ಧ ಎಫ್‌ಐಆ‌ರ್

ತುಮಕೂರು ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿ, ಕೇಂದ್ರ ಸಚಿವರಾಗಿ ಅಧಿಕಾರ ವಹಿಸಿಕೊಂಡ...

ನಮ್ಮ ಮೆಟ್ರೋ | ಸುರಂಗ ಕೊರೆಯುವ ಟಿಬಿಎಂ ಯಂತ್ರಗಳಿಗೆ ಅಡ್ಡ ಬಂದ ಬಂಡೆ; ಪಿಂಕ್ ಲೈನ್ ಕಾಮಗಾರಿ ವಿಳಂಬ

ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಮದ್ದಾಗಿ ಕಾರ್ಯನಿರ್ವಹಣೆ ಮಾಡುತ್ತಿರುವ 'ನಮ್ಮ ಮೆಟ್ರೋ' ಇನ್ನೂ...