ಕಲಬುರಗಿ | ಪದವಿ ಪೂರ್ವ ಕಾಲೇಜು ಮಂಜೂರು ಮಾಡುವಂತೆ ಶಿವಕುಮಾರ್ ಗೋಲಾ ಒತ್ತಾಯ

Date:

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಗ್ರಾಮಕ್ಕೆ ಸರ್ಕಾರಿ ಪದವಿ ಪೂರ್ವ ಕಾಲೇಜು ಮಂಜೂರು ಮಾಡುವಂತೆ ದಲಿತ ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಗೋಲಾ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

- Advertisement -

ನಗರದಲ್ಲಿ ಪತ್ರಿಕಾ ಪ್ರಕಟಣೆ ಉದ್ದೇಶಿಸಿ ಮಾತನಾಡಿದ ಅವರು “ಆಂದೋಲಾ ಗ್ರಾಮಕ್ಕೆ ಸರ್ಕಾರಿ ಪದವಿ ಪೂರ್ವ ಕಾಲೇಜು ಮಾಡಬೇಕು ಎಂಬುವುದು ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿದ್ದು, ಹಲವಾರು ಬಾರಿ ಶಾಸಕರಿಗೆ ಮನವಿ ಮಾಡಿಕೊಳ್ಳಲಾಗಿದೆ. ಆಂದೋಲಾ ಗ್ರಾಮವು ಜಿಲ್ಲಾ ಪಂಚಾಯತ್ ಮತ ಕ್ಷೇತ್ರವಾಗಿದ್ದು, ಸುಮಾರು ಹಳ್ಳಿಗಳಿಗೆ ಕಾಲೇಜು ಇರದೇ ತೊಂದರೆಯಾಗುತ್ತಿದೆ. ವಿಶೇಷವಾಗಿ ವಿಧ್ಯಾರ್ಥಿನಿಯರ ಶಿಕ್ಷಣ ಅರ್ಧಕ್ಕೆ ಮೊಟಕುಗೊಳಿಸುವಂತಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು ಹೊಸ ನಿಯಂತ್ರಣ ವ್ಯವಸ್ಥೆಯಾಗಿ ನಿಲ್ಲುತ್ತಿವೆ ಎಂದೆನಿಸುತ್ತದೆ. ಜನರಿಗೆ ಮತದಾನದ ಹಕ್ಕನ್ನು ಮತ್ತೆ ದೊರಕಿಸಿಕೊಡುವುದಕ್ಕೂ ಇಂತಹ ಹೋರಾಟಗಳತ್ತ ಮುಖ ಮಾಡಬೇಕಾಗಿದೆ. ಸಾರ್ವಜನಿಕರು...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು l ಡಾ ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ತುಪ್ಪುರು ಗ್ರಾಮಸ್ಥರ ಧರಣಿ ಸತ್ಯಾಗ್ರಹ

“ಗ್ರಾಮೀಣ ಭಾಗದಿಂದ ತಾಲೂಕು ಕೇಂದ್ರಕ್ಕೆ ವಿಧ್ಯಾರ್ಥಿನಿಯರಿಗೆ ಹೋಗಲು ತುಂಬಾ ತೊಂದರೆಯಾಗುತ್ತಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಗುಣಮಟ್ಟ ಕುಂಠಿತಗೊಳ್ಳುತ್ತಿದೆ. ಆದ್ದರಿಂದ ಇದನ್ನೂ ವಿದ್ಯಾರ್ಥಿಗಳ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡು ಶಾಸಕರು, ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಅವರು ಮುತುವರ್ಜಿವಹಿಸಿ ಆಂದೋಲಾ ಗ್ರಾಮಕ್ಕೆ ಸರ್ಕಾರಿ ಪದವಿ ಪೂರ್ವ ಕಾಲೇಜು ಮಂಜೂರು ಮಾಡುವಂತೆ ತಮ್ಮದೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು” ಎಂದು ಶಾಸಕರಿಗೆ ಮತ್ತು ಸರಕಾರಕ್ಕೆ ಪತ್ರಿಕಾ ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಗ್ಯಾನೇಶ ಕುಮಾರ್ ರಾಜೀನಾಮೆ ಆಗ್ರಹಿಸಿ ಜನಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ

ಎಸ್ಐಆರ್ ರದ್ದುಗೊಳಿಸಲು, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶಕುಮಾರ ರಾಜೀನಾಮೆ ನೀಡುವಂತೆ ಆಗ್ರಹಿಸಿ,...

ರಾಯಚೂರು | ರೈತರ ಹೊಲಗಳಿಗೆ ಸರ್ವಿಸ್ ರಸ್ತೆ ನಿರ್ಮಿಸದಿದ್ದರೆ ಹೆದ್ದಾರಿ ಕಾಮಗಾರಿ ಬಂದ್: ಅಮರೇಗೌಡ ಪಾಟೀಲ ಬಯ್ಯಾಪುರ

ರಾಷ್ಟ್ರೀಯ ಹೆದ್ದಾರಿ(748 ಎ) ನಿರ್ಮಾಣದಿಂದ ರೈತರಿಗೆ ತಮ್ಮ ಹೊಲಗಳಿಗೆ ತೆರಳಲು ಸರ್ವಿಸ್...

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...