ಕಲಬುರಗಿ | ಸಿಜೆಐ ಮೇಲೆ ಶೂ ಎಸೆತ ಪ್ರಕರಣ; ಆರೋಪಿ ವಿರುದ್ಧ ದೇಶದ್ರೋಹದ ಕೇಸ್‌ ದಾಖಲಿಸಲು ಬೌದ್ಧ ಉಪಾಸಕರ ಸಂಘ ಆಗ್ರಹ

Date:

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರನ ವಿರುದ್ಧ ದೇಶದ್ರೋಹದ ಕೇಸ್ ದಾಖಲಿಸುವಂತೆ ಆಗ್ರಹಿಸಿ ಬೌದ್ಧ ಉಪಾಸಕರ ಸಂಘ ಕಲಬುರಗಿ ಘಟಕ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.

- Advertisement -

ನಗರದ ಜಗತ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಸಂಪೂರ್ಣ ರಸ್ತೆ ತಡೆದು ಪ್ರತಿಭಟನಾಕಾರರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂಘದ ಮುಖಂಡ ದಿನೇಶ ದೊಡ್ಡಮನಿ ಮಾತನಾಡಿ, “ಅಕ್ಟೋಬರ್ 6ರಂದು ಸರ್ವೋಚ್ಚ ನ್ಯಾಯಾಲಯದ ಆವರಣದಲ್ಲಿ ನಡೆದ ಈ ಘಟನೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದೆ. ಶೂ ಎಸೆದ ಜಾತಿವಾದಿ ವಕೀಲ ರಾಕೇಶ್ ಕಿಶೋರನ ಕೃತ್ಯ ಒಬ್ಬ ವ್ಯಕ್ತಿಯದು ಮಾತ್ರವಲ್ಲ; ಇದರ ಹಿಂದೆ ಬಿಜೆಪಿ, ಆರ್‌ಎಸ್ಎಸ್ ಹಾಗೂ ಹಿಂದೂ ಸನಾತನವಾದಿಗಳೆಂದು ಹೇಳಿಕೊಳ್ಳುವ ಕ್ಷುದ್ರ ಶಕ್ತಿಗಳು ಇವೆ ಎಂಬ ಅನುಮಾನ ಉಂಟಾಗಿದೆ. ಈ ಘಟನೆಯ ಕುರಿತು ತೀವ್ರ ತನಿಖೆ ನಡೆಯಬೇಕು” ಎಂದು ಆಗ್ರಹಿಸಿದರು.

“ಮಾನ್ಯ ಗವಾಯಿ ಅವರು ಧೈರ್ಯ ಕಳೆದುಕೊಳ್ಳಬಾರದು. ಅವರ ಹಿಂದೆ ದೇಶದ ಅಂಬೇಡ್ಕರ್‌ವಾದಿಗಳು, ಪ್ರಜಾಪ್ರಭುತ್ವವಾದಿಗಳು, ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರು ನಿಂತಿದ್ದಾರೆ. ಅವರ ಪ್ರಾಮಾಣಿಕ ನ್ಯಾಯ ಸೇವೆ ಮುಂದುವರಿಯಲಿ” ಎಂದು ಹೇಳಿದರು.

ಇದನ್ನೂ ಓದಿ: ಕಲಬುರಗಿ | ಅಶೋಕ ವಿಜಯದಶಮಿ ಅಂಗವಾಗಿ ಪಂಚಶೀಲ ಧ್ವಜಾರೋಹಣ

ಈ ಸಂದರ್ಭದಲ್ಲಿ ಅರ್ಜುನ ಭದ್ರೆ, ಮತೆಪ್ಪ ಹಳ್ಳಿ, ಆರ್ ಕೆ ಹುಡಗಿ, ಹಣಮಂತ್ರಾಯ ದೊಡ್ಡಮನಿ, ಹಣಮಂತ ಬೋಧನಕರ, ಎ ಬಿ ಹೊಸಮನಿ, ಸಂತೋಷ ಮೇಲಿನಮನಿ, ಸೂರ್ಯಕಾಂತ ನಿಂಬಾಳಕರ, ದೇವೇಂದ್ರ ಸಿಮೂರ, ಪ್ರಕಾಶ ಮೂಲಭಾರತಿ, ಅರ್ಜುನ ಗೊಬ್ಬುರ್, ಸೂರ್ಯಕಾಂತ ಅಜಾದಪುರ್, ಸುನೀಲ್ ಮಾಲ್ಪಡೆ, ಆರ್ ಜಿ ಶೆಟಗಾರ, ರಜು ಕಂಪನೂರ್, ಮಲ್ಲಪ ಹೊಸಮನಿ, ಸುರೇಶ್ ಹಾದಿಮನಿ ಹಾಗೂ ಅನಿಲ್ ತೆಂಗಳಿ, ಈಶ್ವರ ಮಲ್ಕುಡಕರ್, ದೀಲಿಪ್ ಕಾಯಂಕರ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎರಡು ದಿನದ ಕಂಬಳಕ್ಕಾಗಿ ಪರಿಸರ ಬಲಿ? ಕೆರೆಯ ಜಾಗ, ಮರಗಳ ತೆರವಿನ ಸುತ್ತ ಗಂಭೀರ ಪ್ರಶ್ನೆಗಳು!

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಂಬಳ ಆಯೋಜಿಸುವ ನಿರ್ಧಾರ ಈಗ ಕೇವಲ...

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...