ಕಲಬುರಗಿ ಮಹಾನಗರ ಪಾಲಿಕೆಯ ಆಡಳಿತದಲ್ಲಿ ಬದಲಾವಣೆ ಮಾಡಿರುವ ರಾಜ್ಯ ಸರ್ಕಾರ, ನೂತನ ಆಯುಕ್ತರಾಗಿ 2023ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಶ್ರವಣ್ ಕುಮಾರ್ ಅವರನ್ನು ನೇಮಕ ಮಾಡಿದೆ.
ಈವರೆಗೆ ಪಾಲಿಕೆ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ 2020ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಅವಿನಾಶ್ ಶಿಂಧೆ ಅವರನ್ನು ಗ್ರೇಟರ್ ಬೆಂಗಳೂರು ಪ್ರದೇಶದ ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ (ಅಭಿವೃದ್ಧಿ) ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ನೂತನ ಆಯುಕ್ತರಾಗಿ ನೇಮಕಗೊಂಡಿರುವ ಶ್ರವಣ್ ಕುಮಾರ್ ಅವರು ಈ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಉಪವಿಭಾಗದ ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದರು. ಇದೀಗ ಕಲಬುರಗಿ ಮಹಾನಗರ ಪಾಲಿಕೆಯ ಆಡಳಿತದ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.
ಇದನ್ನು ಓದಿದ್ದೀರಾ? ಕಲಬುರಗಿ | ಅಂಬೇಡ್ಕರ್ ಭಾವಚಿತ್ರ ಹರಿದು ಹಾಕಿದ ಕಿಡಿಗೇಡಿಗಳು: ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ
ರಾಜ್ಯ ಸರ್ಕಾರ ಹೊರಡಿಸಿರುವ ವರ್ಗಾವಣೆ ಆದೇಶದಂತೆ ಈ ಬದಲಾವಣೆ ಜಾರಿಗೆ ಬಂದಿದ್ದು, ಕಲಬುರಗಿ ಮಹಾನಗರ ಪಾಲಿಕೆಯ ಆಡಳಿತದಲ್ಲಿ ನೂತನ ಆಯುಕ್ತರ ನೇತೃತ್ವದಲ್ಲಿ ಮುಂದಿನ ದಿನಗಳಲ್ಲಿ ಹಲವು ಮಹತ್ವದ ನಿರ್ಧಾರಗಳು ಕೈಗೊಳ್ಳುವ ನಿರೀಕ್ಷೆ ಮೂಡಿದೆ.





